Featured

ಕೋಟಾ ಶ್ರೀನಿವಾಸ ಪೂಜಾರಿ ಬಿಟ್ಟರೆ ಬೇರೆ ಯಾವ ಸಚಿವರೂ ಸರಿ ಇಲ್ಲ: ಎಚ್.ಡಿ. ಕುಮಾರಸ್ವಾಮಿ – Vishwanews24

ಕೋಟಾ ಶ್ರೀನಿವಾಸ ಪೂಜಾರಿ ಬಿಟ್ಟರೆ ಬೇರೆ ಯಾವ ಸಚಿವರೂ ಸರಿ ಇಲ್ಲ..

ಎಲ್ಲರೂ ದುಡ್ಡಿನ ದಂಧೆ ಮಾಡಲು ಬಾಗಿಲು ತೆಗೆದುಕೊಂಡು ಕೂತಿದ್ದಾರೆ..

ಬೆಂಗಳೂರು: ‘ಬಿಜೆಪಿ ಸರಕಾರದಲ್ಲಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಒಬ್ಬರನ್ನು ಬಿಟ್ಟರೆ ಬೇರೆ ಯಾವ ಸಚಿವರೂ ಸರಿ ಇಲ್ಲ. ಎಲ್ಲರೂ ದುಡ್ಡಿನ ದಂಧೆ ಮಾಡಲು ಬಾಗಿಲು ತೆಗೆದುಕೊಂಡು ಕೂತಿದ್ದಾರೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪೊಲೀಸ್ ಇಲಾಖೆಯಲ್ಲಿ ದೊಡ್ಡ ದಂಧೆಯೇ ನಡೆಯುತ್ತಿದೆ. ಸಚಿವ ಎಂಟಿಬಿ ನಾಗರಾಜ್ ಯಾಕೆ ಹಾಗೆ ಹೇಳಿದರು? ಅದರ ಹಿಂದೆ ಏನೆಲ್ಲಾ ನಡೆದಿದೆ ಎನ್ನುವುದು ನನಗೆ ಎಲ್ಲವೂ ಗೊತ್ತಿದೆ. ನಂದೀಶ್ 80ಲಕ್ಷ ರೂ.ಕೊಟ್ಟು ಮೂರು ತಿಂಗಳು ಆಗಿರಲಿಲ್ಲ. ಅಷ್ಟರಲ್ಲಿ ಅವರನ್ನು ಅಮಾನತು ಮಾಡಿದರು. ಅದರ ನೋವಿನಲ್ಲಿ ನಂದೀಶ್‍ಗೆ ಹೃದಯಾಘಾತ ಆಗಿರಬಹುದು. ಅಲ್ಲಿನ ಶಾಸಕರಿಗೆ ಎಷ್ಟು ಹೋಗಿದೆ, ಯಾರ್ಯಾರಿಗೆ ಎಷ್ಟು ಹೋಗಿದೆ. ಎಲ್ಲವೂ ತನಿಖೆ ಮಾಡಿದ್ರೆ ಹೊರಬರಲಿದೆ ಎಂದು ಒತ್ತಾಯಿಸಿದರು.

ಪಡುಬಿದ್ರಿ: ತಾಯಿ – ಮಗ ನಾಪತ್ತೆ ; ದೂರು ದಾಖಲು – Vishwanews24

ಕೋಲಾರದಿಂದ ನಾನು ಸ್ಪರ್ಧೆ ಮಾಡುವುದಿಲ್ಲ. ಚನ್ನಪಟ್ಟಣದಲ್ಲಿಯೇ ಸ್ಪರ್ಧೆ ಮಾಡುತ್ತೇನೆ ಎಂದು ಈಗಾಗಲೇ ಹೇಳಿದ್ದೇನೆ. ಕಾರ್ಯಕರ್ತರು ನನ್ನ ಮೇಲಿನ ಅಭಿಮಾನದಿಂದ ಕೋಲಾರದಿಂದ ಸ್ಪರ್ಧೆ ಮಾಡಿ ಎಂದು ಹೇಳಿದ್ದಾರೆ. ಅಲ್ಲಿನ ಜನರ ಸಮಸ್ಯೆ ಏನಿದೆ ಅಂತ ನನಗೆ ಗೊತ್ತಿದೆ. ಕೋಲಾರದಲ್ಲಿ ನಮ್ಮ ಪಕ್ಷಕ್ಕೆ ಸಮರ್ಥ ಅಭ್ಯರ್ಥಿಗಳು ಇದ್ದಾರೆ. ಕೆಜಿಎಫ್ ಬಿಟ್ಟು ಉಳಿದ ಕಡೆ ನಮ್ಮ ಶಾಸಕರು ಇದ್ದಾರೆ. ನಾನೇ ಹೋಗಿ ಸ್ಪರ್ಧೆ ಮಾಡಬೇಕು ಎಂದು ಇಲ್ಲ. ಎಲ್ಲ ಮುಖಂಡರ ಜತೆ ಚರ್ಚೆ ಮಾಡಿ ಸಮಸ್ಯೆ ಪರಿಹಾರ ಮಾಡುತ್ತೇನೆ ಎಂದು ಹೇಳಿದರು.

ಸಚಿವ ಎಂಟಿಬಿ ನಾಗರಾಜ್ ವಿಡಿಯೋ ಜಗಜ್ಜಾಹೀರು ಆಗಿದೆ. ಸರಕಾರಕ್ಕೆ ಮರ್ಯಾದೆ ಇದ್ದಾರೆ ತನಿಖೆ ಮಾಡಿಸಲಿ. ಈಗಾಗಲೇ ಸಿಎಂ ತನಿಖೆ ಮಾಡಿಸುವುದಾಗಿ ಹೇಳಿದ್ದಾರೆ. ಆದರೆ, ಏನು, ಯಾವ ರೀತಿ ತನಿಖೆ ಮಾಡುತ್ತಿದ್ದಾರೆ ಎಂಬುದು ಗೊತ್ತಿಲ್ಲ ಎಂದು ಕಿಡಿಕಾರಿದರು.

ಕೆಲ ಸಚಿವರು ಎಷ್ಟೇ ಶ್ರೀಮಂತರಿದ್ದರೂ ಅವರಿಗೆ ಹಣದ ದಾಹ ಕಡಿಮೆಯಾಗಿಲ್ಲ. ಎಷ್ಟು ಸಾಧ್ಯವೋ ಅಷ್ಟನ್ನೂ ಗೋರುತ್ತಿದ್ದಾರೆ. ಈ ಸರಕಾರದಲ್ಲಿ ಕೈನಲ್ಲಿ ಹಣ ಬಾಚುತ್ತಿಲ್ಲ, ಜೆಸಿಬಿಯಲ್ಲಿ, ಹಿಟಾಚಿಯಲ್ಲಿ ಬಾಚುತ್ತಿದ್ದಾರೆ. ಆದೇನು ತನಿಖೆ ಮಾಡುತ್ತಾರೋ ನೋಡೋಣ. ಈ ಸರಕಾರಕ್ಕೆ ನಾಚಿಕೆ ಆಗಬೇಕು ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಮೊದಲನೇ ಗಂಡ ಸಾಯುತ್ತಾನೆ ಎಂಬ ಜ್ಯೋತಿಷಿ ಮಾತು ಕೇಳಿ ಪ್ರಿಯಕರನಿಗೆ ವಿಷ ಕೊಟ್ಟು ಸಾಯಿಸಿದ ಪ್ರೇಯಸಿ – Vishwanews24

‘ಜೆಡಿಎಸ್ ಎಲ್ಲರಿಗಿಂತ ಮೊದಲೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿದ್ದು, ಬೇರೆ ಪಕ್ಷಗಳಲ್ಲಿ ಅನೇಕ ಪಟ್ಟಿಗಳಿವೆ. ಅವುಗಳ ಪಾಲಿಗೆ ಪಟ್ಟಿಗಳೆ ಫಜೀತಿ ಆಗಲಿವೆ. ಈಗಾಗಲೇ 123 ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನ ಫೈನಲ್ ಮಾಡಿದ್ದು, ಅವರಿಗೆಲ್ಲ ಕೆಲಸ ಪ್ರಾರಂಭ ಮಾಡಲು ಹೇಳಿದ್ದೇನೆ. ನಾವು ಯಾವುದೇ ಪ್ರಚಾರ ಮಾಡದೇ ಕೆಲಸ ಪ್ರಾರಂಭ ಮಾಡಿದ್ದೇವೆ’ ಎಂದು ಕುಮಾರಸ್ವಾಮಿ ತಿಳಿಸಿದರು.

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

2 days ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

2 days ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

2 days ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

2 days ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

2 days ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

2 days ago