ಬೈಂದೂರು: ಕೋಟಿ ಚೆನ್ನಯ್ಯ ಗರೋಡಿಗಳು ನಮ್ಮ ತುಳು ಸಂಸ್ಕೃತಿಯ ಪ್ರತೀಕವಾಗಿದೆ” ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು.
ಯಡ್ತರೆ ನಾಕಟ್ಟೆಯಲ್ಲಿ ನಿರ್ಮಾಣ ಹಂತದಲ್ಲಿರುವ ಕೋಟಿ ಚೆನ್ನಯ್ಯ ಗರಡಿಗೆ ಭೇಟಿ, ಅದರ ಕಾಮಗಾರಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.
“ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸತ್ಯ, ಧರ್ಮ, ನ್ಯಾಯಕ್ಕಾಗಿ ಹೋರಾಟ ಮಾಡಿದ ಕರಾವಳಿಯ ಅವಳಿ ವೀರಪುರಷರಾದ ಕೋಟಿ ಚೆನ್ನಯ್ಯರ 66 ಮೂಲ ಗರೋಡಿಗಳಿದೆ, ಅವುಗಳು ತಮ್ಮ ಪೂಜಾ ವಿಧಿವಿಧಾನದ ಮೂಲಕ ಇಂದಿಗೂ ತನ್ನ ಪಾವಿತ್ರ್ಯತೆಯನ್ನು ಕಾಪಾಡಿಕೊಂಡು ಬಂದಿರುವುದಲ್ಲದೇ ಶ್ರೇಷ್ಠ ಆರಾಧನ ಕೇಂದ್ರಗಳಾಗಿ ಮಾರ್ಪಟ್ಟಿದೆ. ಎಂದು ಹೇಳಿದರು.
ನಿರ್ಮಾಣ ಹಂತದಲ್ಲಿರುವ ಗರಡಿಯು ಕಾಷ್ಠಶಿಲ್ಪದಿಂದ ಕಂಗೊಳಿಸುತ್ತಿದ್ದು, ಕೋಟಿ ಚೆನ್ನಯ್ಯ ಮೂಲ ಪರಿಕಲ್ಪನೆಗೆ ಚ್ಯುತಿ ಬಾರದಂತೆ, ಶಾಸ್ತ್ರೋಕ್ರವಾಗಿ ನಿರ್ಮಾಣ ಮಾಡುತ್ತಿರುವುದು ಶ್ಲಾಘನೀಯ. ಇದು ಕೋಟಿ ಚೆನ್ನಯ್ಯರ ಕೊನೆಯ ಗರೋಡಿಯಾಗಿದ್ದರೂ, ಎಲ್ಲಾ ಗರೋಡಿಗಳನ್ನು ಮೀರಿಸುವ ರೀತಿಯಲ್ಲಿ ನಿರ್ಮಾಣಗೊಳ್ಳುತ್ತಿದೆ” ಎಂದು ಸಂತಸ ವ್ಯಕ್ತಪಡಿಸಿದರು.
ಈ ಸಂದರ್ಭ ಖಂಬದಕೋಣೆ ರೈತರ ಸೇವಾ ಸಹಕಾರಿ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಉಪ್ಪುಂದ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಮೋಹನ ಪೂಜಾರಿ, ಯಡ್ತರೆ ಬಿಲ್ಲವ ಸಂಘದ ಅಧ್ಯಕ್ಷ ಬಿ. ದೊಟ್ಟಯ್ಯ ಪೂಜಾರಿ, ಯಡ್ತರೆ ಗ್ರಾಪಂ ಉಪಾಧ್ಯಕ್ಷ ನಾಗರಾಜ ಗಾಣಿಗ, ಸದಸ್ಯ ಉಮೇಶ್, ಆನಂದ ಶೆಟ್ಟಿ, ಸ್ಥಳೀಯರಾದ ಎಸ್. ಮದನಕುಮಾರ್ ಉಪ್ಪುಂದ, ಜಗನ್ನಾಥ ಶೆಟ್ಟಿ, ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಉಪಾಧ್ಯಕ್ಷ ವೆಂಕಟ ಪೂಜಾರಿ, ಕಾರ್ಯದರ್ಶಿ ಶಿವರಾಮ ಪೂಜಾರಿ, ಅರ್ಚಕ ಕುಟುಂಬದ ಮಂಜುನಾಥ ಮೇಲ್ಹಿತ್ಲು ಮೊದಲಾದವರು ಉಪಸ್ಥಿತರಿದ್ದರು.
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…