ಉಡುಪಿ, : ಫೆಬ್ರವರಿ 07 ಉಡುಪಿ ಜಿಲ್ಲೆಯ ಕೋಟದಲ್ಲಿ ನಡೆದ ಡಬ್ಬಲ್ ಮರ್ಡರ್ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಮಡಿಕೇರಿಯಲ್ಲಿ ಬಂಧಿಸಿದ್ದಾರೆ. ಖಚಿತ ಮಾಹಿತಿ ಆಧಾರಿಸಿ ಮಡಿಕೇರಿಯಲ್ಲಿ ಅವಿತುಕೊಂಡಿದ್ದ ಇಬ್ಬರು ಆರೋಪಿಗಳಾದ ರಾಜಶೇಖರ ರೆಡ್ಡಿ ಮತ್ತು ರವಿಯನ್ನು ಪೊಲೀಸರು ಬಂಧಿಸಿದ್ದಾರೆ.
ಜನವರಿ 27 ರಂದು ಕೋಟದಲ್ಲಿ ಭರತ್ ಮತ್ತು ಯತೀಶ್ ಎಂಬ ಇಬ್ಬರ ಕೊಲೆಯಾಗಿತ್ತು.
ಈ ನಡುವೆ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಹರೀಶ್ ರೆಡ್ಡಿ ಸಹೋದರ ರಾಜಶೇಖರ ರೆಡ್ಡಿ ಹಾಗೂ ತಲ್ಲೂರು ನಿವಾಸಿ ರವಿ ಯಾನೆ ಮೆಡಿಕಲ್ ರವಿ ಎಂಬಾತನನ್ನು ಪೊಲೀಸರು ಗುರುವಾರ ಮಡಿಕೇರಿಯಿಂದ ಬಂಧಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಇನ್ನು ಪ್ರಮುಖ ಆರೋಪಿ ಹರೀಶ್ ರೆಡ್ಡಿ ಬಂಧನ ಬಾಕಿಯಿದೆ ಎಂದು ಹೇಳಲಾಗುತ್ತಿದೆ.
ಉಳಿದಂತೆ ಇನ್ನೂ ಆರು ಆರೋಪಿಗಳ ಬಂಧನ ಬಾಕಿ ಇದ್ದು ಶೀಘ್ರವೇ ಬಂಧಿಸುವ ಭರವಸೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
ಟಾಯ್ಲೆಟ್ ಪಿಟ್ ವಿಚಾರದಲ್ಲಿ ಕೊಲೆ ನಡೆದಿತ್ತು ಎಂದು ಅಂದು ಮೇಲ್ನೋಟಕ್ಕೆ ತಿಳಿದು ಬಂದಿದ್ದರಿಂದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು, ಕೊಲೆಗೆ ಅನ್ಯ ಕಾರಣ ಇದೆ ಎಂಬ ಸಂಶಯವನ್ನು ವ್ಯಕ್ತಪಡಿಸಿದ್ದಾರೆ.
ಇನ್ನು ಉಳಿದಂತೆ ಪ್ರಮುಖ ಆರೋಪಿ ಹರೀಶ್ ರೆಡ್ಡಿ ಬಂಧನ ಬಾಕಿ ಇದೆ. ಶೀಘ್ರವೇ ಬಂಧಿಸುವ ಭರವಸೆಯನ್ನು ಪೊಲಿಸರು ವ್ಯಕ್ತಪಡಿಸಿದ್ದಾರೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…