ಕೋಟ, : ಕೋಟದ ಗ್ರಾಮೀಣ ಭಾಗದಲ್ಲಿ ಕಳೆದ 24ವರ್ಷಗಳಿಂದ ತನ್ನ ಸಾಮಾಜಿಕ, ಕಲಾರಾಧನೆ, ಭಾಷಾಭಿಮಾನದ ನಡುವೆ ತನ್ನ ಸೇವೆಯನ್ನು ನಿರಂತರವಾಗಿ ನೀಡುತ್ತಾ ಬಂದಿರುವ ಕೋಟದ ಪಂಚವರ್ಣ ಯುವಕ ಮಂಡಲ ಪ್ರತಿವರ್ಷ ನವೆಂಬರ್ 1ರಂದು ಕೋಟದ ವರುಣತೀರ್ಥ ಕೆರೆ ಸಮೀಪ ಕನ್ನಡರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಿಕೊಂಡು ಬರುತ್ತಿದೆ. ತನ್ನ ಸಂಸ್ಥೆಯ ಮೂಲಕ ಸಾಧಕನ್ನು ಗುರುತಿಸಿ ಪ್ರಶಸ್ತಿ ನೀಡುವ ಕಾರ್ಯಕ್ರಮಗಳ ನಡುವೆ ವಿವಿಧ ಸಾಂಸ್ಕೃತಿಕ ,ಆಶಕ್ತ ,ಆನಾರೋಗ್ಯ ಪೀಡಿತ ಕುಟುಂಬಗಳಿಗೆ ಸಹಾಯಹಸ್ತ, ಪ್ರತಿಭಾ ಪುರಸ್ಕಾರ, ಹೀಗೆ ನಾನಾ ರೀತಿಯ ವಿಶಿಷ್ಟ ಕಾರ್ಯಕ್ರಮಗಳಿಂದ ಮನೆಮಾತಾಗಿ ಬೆಳೆದಿದೆ.
ಈ ನಡುವೆ ಈ ಬಾರಿಯ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿಗೆ ಅನಾರೋಗ್ಯ ಪೀಡಿತರ ಆಶಾಕಿರಣ, ಸಮಾಜ ಸೇವಕ ರವಿ ಕಟಪಾಡಿ ಇವರನ್ನು ಆಯ್ಕೆಗೊಳಿಸಲಾಗಿದೆ. ಇದೇ ಬರುವ ನವೆಂಬರ್ 1ರಂದು ಕೋಟದ ವರುಣತೀರ್ಥಕೆರೆ ಸಮೀಪ ಅಮೃತೇಶ್ವರಿ ದೇವಳದ ಪಾರ್ಕಿಂಗ್ ಸ್ಥಳದಲ್ಲಿ ಪ್ರಶಸ್ತಿ ಪ್ರದಾನಸಮಾರಂಭ ನಡೆಯಲಿದ್ದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರದಾನಮಾಡಲಿದ್ದಾರೆ ಎಂದು ಸಂಘಟಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದ್ಯಾವರ: ಜಾರುಕುದ್ರು ಸೇತುವೆ ಶೀಘ್ರ ಉದ್ಘಾಟನೆ :ಶಾಸಕ ಲಾಲಾಜಿ ಮೆಂಡನ್ – Vishwanews24
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…