Featured

ಕೋಟ : ಗಂಡನ ಮನೆಯಿಂದ ಚಿನ್ನಾಭರಣ ಕದ್ದ ಆರೋಪ; ಪ್ರಕರಣ ದಾಖಲು – vishwanews24

ಕೋಟ : ಗಂಡನ ಮನೆಯಿಂದ ಚಿನ್ನಾಭರಣ ಕದ್ದ ಆರೋಪ; ಪ್ರಕರಣ ದಾಖಲು

ಕೋಟ: ನವ ವಿವಾಹಿತೆಯೋರ್ವಳು ಮದುವೆಯಾಗಿ ಎರಡೇ ತಿಂಗಳಲ್ಲಿ ಗಂಡನ ಮನೆಯಿಂದ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾಳೆ ಎಂಬ ಆರೋಪದಲ್ಲಿ ನ್ಯಾಯಾಲಯದ ಆದೇಶದಂತೆ ಪ್ರಕರಣ ದಾಖಲಾದ ಘಟನೆ ಕೋಟ ಪೊಲೀಸ್‌ ಠಾಣೆ ವ್ಯಾಪ್ತಿಯ ಸಾಲಿಗ್ರಾಮದಲ್ಲಿ ನಡೆದಿದೆ.

ಸಾಲಿಗ್ರಾಮದ ಅಂತೋನಿ ಡಾಲ್ವಿನ್‌ ಕಾರ್ಡೋಜಾ ಅವರ ಕುಟುಂಬವು ಚಿನ್ನಾಭರಣ ಕಳೆದುಕೊಂಡಿದ್ದು, ಹಾಸನ ಮೂಲದ ಅನುಷಾ ಆರೋಪಿ.

ಅಂತೋನಿ ಡಾಲ್ವಿನ್‌ಗೆ ಅನುಷಾ ಜತೆಗೆ 2023 ಡಿ.26ರಂದು ಸಾಸ್ತಾನದ ಸೈಂಟ್‌ ಅಂತೋನಿ ಚರ್ಚ್‌ನಲ್ಲಿ ನೆರವೇರಿತ್ತು 2024ರ ಫೆ.9ರಂದು ಅನುಷಾ ತನ್ನ ತಾಯಿಗೆ ಆರೋಗ್ಯ ಸಮಸ್ಯೆ ಇದ್ದು, ಮನೆಗೆ ಹೋಗಿ ನಾಲ್ಕು ದಿನಗಳಲ್ಲಿ ಮರಳುತ್ತೇನೆ ಎಂದು ಹೇಳಿ ಹೋಗಿದ್ದಳು. ಆದರೆ ಸಂಜೆ ಮನೆಯ ಕಪಾಟನ್ನು ನೋಡಿದಾಗ ಅಂತೋನಿ ಅವರ ತಾಯಿಯ 40 ಗ್ರಾಂ ತೂಕದ ಕರಿಮಣಿ, 10 ಗ್ರಾಂ ತೂಕದ 4 ಚಿನ್ನದ ಬಳೆಗಳು, 24 ಗ್ರಾಂ ಚಿನ್ನದ ಸರ, 3 ಚಿನ್ನದ ಉಂಗುರಗಳು, ಮತ್ತು ಕಿವಿ ಓಲೆ ಕಾಣೆಯಾಗಿರುವುದು ಗಮನಕ್ಕೆ ಬಂದಿರುತ್ತದೆ. ಈ ಬಗ್ಗೆ ಅನುಷಾಳನ್ನು ಕೇಳಿದಾಗ ತಪ್ಪೊಪ್ಪಿಕೊಂಡ ಆಕೆ, ಮನೆಗೆ ವಾಪಸ್‌ ಬಂದಾಗಿ ನೀಡುವುದಾಗಿ ತಿಳಿಸಿದ್ದಳು. ಹೀಗಾಗಿ ಪ್ರಕರಣವನ್ನು ರಾಜಿ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಪ್ರಯತ್ನಿಸಲಾಗಿತ್ತು.

ಆದರೆ ಆರೋಪಿ ಅನುಷಾ ಚಿನ್ನಾಭರಣವನ್ನು ವಾಪಸ್‌ ನೀಡದೆ, ಮನೆಗೂ ಮರಳದೆ ಸತಾಯಿಸುತ್ತಿದ್ದಾಳೆ. ಚಿನ್ನಾಭರಣ ನೀಡಬೇಕಿದ್ದರೆ 25 ಲ. ರೂ. ನೀಡಬೇಕೆಂಬ ಬೇಡಿಕೆ ಈಡುತ್ತಿದ್ದಾಳೆ. ಹೀಗಾಗಿ ಆಕೆಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಂತೋನಿ ಕುಂದಾಪುರ ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದರು.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

15 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

15 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

15 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

16 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

16 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

16 hours ago