ಕೋಟ: ನವ ವಿವಾಹಿತೆಯೋರ್ವಳು ಮದುವೆಯಾಗಿ ಎರಡೇ ತಿಂಗಳಲ್ಲಿ ಗಂಡನ ಮನೆಯಿಂದ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾಳೆ ಎಂಬ ಆರೋಪದಲ್ಲಿ ನ್ಯಾಯಾಲಯದ ಆದೇಶದಂತೆ ಪ್ರಕರಣ ದಾಖಲಾದ ಘಟನೆ ಕೋಟ ಪೊಲೀಸ್ ಠಾಣೆ ವ್ಯಾಪ್ತಿಯ ಸಾಲಿಗ್ರಾಮದಲ್ಲಿ ನಡೆದಿದೆ.
ಸಾಲಿಗ್ರಾಮದ ಅಂತೋನಿ ಡಾಲ್ವಿನ್ ಕಾರ್ಡೋಜಾ ಅವರ ಕುಟುಂಬವು ಚಿನ್ನಾಭರಣ ಕಳೆದುಕೊಂಡಿದ್ದು, ಹಾಸನ ಮೂಲದ ಅನುಷಾ ಆರೋಪಿ.
ಅಂತೋನಿ ಡಾಲ್ವಿನ್‌ಗೆ ಅನುಷಾ ಜತೆಗೆ 2023 ಡಿ.26ರಂದು ಸಾಸ್ತಾನದ ಸೈಂಟ್ ಅಂತೋನಿ ಚರ್ಚ್‌ನಲ್ಲಿ ನೆರವೇರಿತ್ತು 2024ರ ಫೆ.9ರಂದು ಅನುಷಾ ತನ್ನ ತಾಯಿಗೆ ಆರೋಗ್ಯ ಸಮಸ್ಯೆ ಇದ್ದು, ಮನೆಗೆ ಹೋಗಿ ನಾಲ್ಕು ದಿನಗಳಲ್ಲಿ ಮರಳುತ್ತೇನೆ ಎಂದು ಹೇಳಿ ಹೋಗಿದ್ದಳು. ಆದರೆ ಸಂಜೆ ಮನೆಯ ಕಪಾಟನ್ನು ನೋಡಿದಾಗ ಅಂತೋನಿ ಅವರ ತಾಯಿಯ 40 ಗ್ರಾಂ ತೂಕದ ಕರಿಮಣಿ, 10 ಗ್ರಾಂ ತೂಕದ 4 ಚಿನ್ನದ ಬಳೆಗಳು, 24 ಗ್ರಾಂ ಚಿನ್ನದ ಸರ, 3 ಚಿನ್ನದ ಉಂಗುರಗಳು, ಮತ್ತು ಕಿವಿ ಓಲೆ ಕಾಣೆಯಾಗಿರುವುದು ಗಮನಕ್ಕೆ ಬಂದಿರುತ್ತದೆ. ಈ ಬಗ್ಗೆ ಅನುಷಾಳನ್ನು ಕೇಳಿದಾಗ ತಪ್ಪೊಪ್ಪಿಕೊಂಡ ಆಕೆ, ಮನೆಗೆ ವಾಪಸ್ ಬಂದಾಗಿ ನೀಡುವುದಾಗಿ ತಿಳಿಸಿದ್ದಳು. ಹೀಗಾಗಿ ಪ್ರಕರಣವನ್ನು ರಾಜಿ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಪ್ರಯತ್ನಿಸಲಾಗಿತ್ತು.
ಆದರೆ ಆರೋಪಿ ಅನುಷಾ ಚಿನ್ನಾಭರಣವನ್ನು ವಾಪಸ್ ನೀಡದೆ, ಮನೆಗೂ ಮರಳದೆ ಸತಾಯಿಸುತ್ತಿದ್ದಾಳೆ. ಚಿನ್ನಾಭರಣ ನೀಡಬೇಕಿದ್ದರೆ 25 ಲ. ರೂ. ನೀಡಬೇಕೆಂಬ ಬೇಡಿಕೆ ಈಡುತ್ತಿದ್ದಾಳೆ. ಹೀಗಾಗಿ ಆಕೆಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಂತೋನಿ ಕುಂದಾಪುರ ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದರು.
ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ ಮಂಗಳೂರು…
ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ ಕುಂದಾಪುರ: ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ…
ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ…
ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…
ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ…
ವಂದೇ ಮಾತರಂ ಹಾಡುವುದು ಕಡ್ಡಾಯವಲ್ಲ, ಹಾಡದಿದ್ದರೆ ಶಿಕ್ಷೆ ಇಲ್ಲ : ಕೇಂದ್ರಕ್ಕೆ ಸುಪ್ರೀಂ ಮಹತ್ವದ ಸೂಚನೆ ನವದೆಹಲಿ : ವಂದೇ…