Featured

ಕೋಟ : ಪಾರಂಪಳ್ಳಿ ಕಡಲ ಕಿನಾರೆಯಲ್ಲಿ ಮೀನುಗಾರಿಕೆ ತೆರಳಿದ ಸಂದರ್ಭ ದೋಣಿ ಮುಗುಚಿ ಒರ್ವ ಮೃತ್ಯು, ಇಬ್ಬರು ಪಾರು – Vishwanews24

ಕೋಟ : ಪಾರಂಪಳ್ಳಿ ಕಡಲ ಕಿನಾರೆಯಲ್ಲಿ ಮೀನುಗಾರಿಕೆ ತೆರಳಿದ ಸಂದರ್ಭ ದೋಣಿ ಮುಗುಚಿ ಒರ್ವ ಮೃತ್ಯು, ಇಬ್ಬರು ಪಾರು

ಕೋಟ : ಪಾರಂಪಳ್ಳಿ ಪಡುಕರೆಯಲ್ಲಿ‌ ಕಡಲ ಕಿನಾರೆಯಲ್ಲಿ ಮೀನುಗಾರಿಕೆ ತೆರಳಿದ ಸಂದರ್ಭದಲ್ಲಿ ದೋಣಿ ಮಗುಚಿ ಓರ್ವ ಸಾವಿಗಿಡಾಗಿ ಇರ್ವರು ಪಾರಾದ ಘಟನೆ ಶುಕ್ರಮವಾರ ನಡೆದಿದೆ.

ಸಾವಿಗಿಡಾದ ಮೀನುಗಾರ ಪಾರಂಪಳ್ಳಿ ನಿವಾಸಿ ಸುಮಂತ್ ಮೊಗವೀರ ವ.23 ಎಂದು ಗುರುತಿಸಲಾಗಿದೆ.

ಶುಕ್ರವಾರ ಪೂರ್ವಾಹ್ನ 11.ಗ ಸ್ಥಳೀಯರಾದ ಸಂದೀಪ್, ಪ್ರಜ್ವಲ್ ಹಾಗೂ ಸುಮಂತ್ ಮೂವರು ಮೀನುಗಾರಿಕೆ ತೆರಳಲು ನಾಡದೋಣಿಯ ಮೂಲಕ ಸಮುದ್ರಕ್ಕೆ ತೆರಳಿದರು ಎನ್ನಲಾಗಿದ್ದು ಸಮುದ್ರದಲ್ಲಿ ಈ ವೇಳೆ ಸಮುದ್ರದ ಬಾರಿ ಗಾತ್ರದ ಅಲೆಗೆ ಸಿಲುಕಿ ದೋಣಿಯಲ್ಲಿದ್ದ ಈ ಮೂವರು ಮುಗುಚಿ ಬಿದ್ದಿದ್ದು, ಇಬ್ಬರು ಸಂದೀಪ್ ಮತ್ತು ಪ್ರಜ್ವಲ್ ಈಜಿ ದಡ ಸೇರಿದ್ದಾರೆ ಎನ್ನಲಾಗಿದೆ.ಆದರೆ ಮೃತ ಸುಮಂತ್ ಗೆ ಸಮುದ್ರದ ಬಾರಿ ಗಾತ್ರದ ಅಲೆಗಳ ನಡುವೆ ಈಜಿದರೂ ಪ್ರಯೋಜನ ಬಾರದೆ ಸಮುದ್ರದ ಅಲೆಗಳೊಂದಿಗೆ ಕೊಚ್ಚಿ ಹೋಗಿದ್ದಾರೆ.

ಇನ್ನು ಅಲ್ಲಿ ಸಮೀಪ ಮೀನುಗಾರಿಕೆ ನಡೆಸುತ್ತಿದ್ದ ಸ್ಥಳೀಯರು ಬಲೆ ಬಿಸಿ ಸುಮಂತ್ ನನ್ನು ಮೇಲೆ ಎಳೆದಿದ್ದು ತಕ್ಷಣ ಅವರನ್ನು ಜೀವನ್ ಮಿತ್ರ ಆ್ಯಂಬುಲೇನ್ಸ್ ಮೂಲಕ ಆಸ್ಪತ್ರೆಗೆ ಸ್ಥಳಾಂತರಿಸಿದ್ದು ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

13 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

14 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

14 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

14 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

14 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago