ಕೋಟ, : ಮಂದಾರ್ತಿ ಮೇಳದ ಪ್ರಧಾನ ವೇಷಧಾರಿ ಸಾಧು ಕೊಠಾರಿ (58) ಅವರು ಹೃದಯಾಘಾತದಿಂದ ರಂಗಸ್ಥಳದಲ್ಲೇ ಅಸ್ವಸ್ಥಗೊಂಡು ಸಾವನ್ನಪ್ಪಿದ ಘಟನೆ ಶಿರಿಯಾರದ ಕಾಜ್ರಲ್ಲಿ ಸಮೀಪ ಕಲ್ಬೆಟ್ಟು ಎಂಬಲ್ಲಿ ನಡೆದಿದೆ.
ಮಹಾಕಲಿ ಮಗದೇಂದ್ರ ಮಾಗಧನಾಗಿ ಪ್ರದರ್ಶನ ನೀಡುತ್ತಿದ್ದ ಸಂದರ್ಭದಲ್ಲಿ ಪ್ರಸಂಗದಲ್ಲಿ ಸಾಧು ಕೊಠಾರಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ರಂಗದಲ್ಲೇ ಹೃದಯ ನೋವಿನಿಂದ ತೀವ್ರ ಅಸ್ವಸ್ಥಗೊಂಡರು. ಬಳಿಕ ವೇಷ ಕಳಚಿ, ಮೇಳದ ಪ್ರಧಾನ ಭಾಗವತ ಸದಾಶಿವ ಅಮೀನ್ ಹಾಗೂ ಮೇಳದ ಮ್ಯಾನೇಜರ್ ಮತ್ತು ಸಹಕಲಾವಿದರು, ಸ್ಥಳೀಯರು ಜತೆಯಾಗಿ ಅವರನ್ನು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯುತ್ತಿದ್ದಾಗ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.
ಇನ್ನು ಸಾಧು ಕೊಠಾರಿ ಅವರು ಬಡಗುತಿಟ್ಟಿನ ಉತ್ತಮ ಕಲಾವಿದರಾಗಿ ಗುರುತಿಸಿಕೊಂಡಿದ್ದು, ಸುಮಾರು 40 ವರ್ಷಕ್ಕೂ ಅಧಿಕ ಸಮಯ ಯಕ್ಷ ತಿರುಗಾಟ ನಡೆಸಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…