ಮೂಡಿಗೆರೆ : ಕೋಟ ಶ್ರೀನಿವಾಸ ಪೂಜಾರಿ ಓರ್ವ ಆದರ್ಶ ಮತ್ತು ಪ್ರಾಮಾಣಿಕ ರಾಜಕಾರಣಿ. ಹೀಗಾಗಿ ಅವರನ್ನು ಬಹುದೊಡ್ಡ ಅಂತರದಿಂದ ಗೆಲ್ಲಿಸಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡ ಮನವಿ ಮಾಡಿದ್ದಾರೆ.
ಮೂಡಿಗೆರೆಯಲ್ಲಿ ನಡೆದ ಬಿಜೆಪಿ – ಜೆಡಿಎಸ್ ಕಾರ್ಯಕರ್ತರ ಜಂಟಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ದೇವೇಗೌಡರು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ಅತ್ಯಂತ ಪ್ರಾಮಾಣಿಕ ರಾಜಕಾರಣಿ. ಕೋಟರವರನ್ನು ಕನಿಷ್ಠ 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ ವರ ಆಯ್ಕೆ ನಮಗೆ ನಿಜಕ್ಕೂ ಸಂತಸ ತಂದಿದೆ. ಓರ್ವ ಪ್ರಾಮಾಣಿಕ ನಾಯಕನನ್ನು ಗೆಲ್ಲಿಸಿ ಸಂಸತ್ತಿಗೆ ಕಳುಹಿಸಲು ಸಂತೋಷವಾಗುತ್ತಿದೆ ಎಂದು ದೇವೇಗೌಡರು ಅಭಿಪ್ರಾಯ ಪಟ್ಟರು.
ದೇಶವಾಸಿಗಳು ನೆಮ್ಮದಿಯಿಂದ ಇರಬೇಕು ಎನ್ನುವ ನನ್ನ ಆಸೆಗೆ ಪ್ರಾಮಾಣಿಕ ನಾಯಕನನ್ನು ಆರಿಸಿ ಮೋದಿಯವರಿಗೆ ಉಡುಗೊರೆ ನೀಡುವುದು ಸಂತಸ ತಂದಿದೆ. ಪ್ರಧಾನಮಂತ್ರಿ ಆಗಲು ಸಾಮರ್ಥ್ಯ ಇರುವ ವ್ಯಕ್ತಿ ನರೇಂದ್ರ ಮೋದಿ ಬಿಟ್ಟರೆ ಬೇರೆ ಯಾವುದೇ ವ್ಯಕ್ತಿ ಭಾರತದಲ್ಲಿಲ್ಲ. ಆ ಹಿನ್ನೆಲೆಯಲ್ಲಿ ಯಾವುದೇ ಷರತ್ತಿಲ್ಲದೆ ನಾನು ಮೋದಿಯವರನ್ನು ಬೆಂಬಲಿಸಿದೆ ” ಎಂದು ದೇವೇಗೌಡರು ಚುನಾವಣಾ ಸಭೆಯಲ್ಲಿ ಹೇಳಿದ್ದಾರೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…