ಕೋಟ : ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರ ಮಧ್ಯೆಯೇ ಯುವಕನೊಬ್ಬ ವಿಚಿತ್ರವಾಗಿ ವರ್ತಿಸಿ ಸಾರ್ವಜನಿಕರಲ್ಲಿ ಆತಂಕ ಉಂಟುಮಾಡಿದ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. ಹೆದ್ದಾರಿಯ ಮಧ್ಯೆ ಟೇಬಲ್ ಇಟ್ಟು, ಟಿವಿ ಹಾಗೂ ಧ್ವನಿವರ್ಧಕ ಅಳವಡಿಸಿ ಮ್ಯೂಸಿಕ್ ವ್ಯವಸ್ಥೆ ಮಾಡಿ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಿದ್ದರಿಂದ ಕೆಲಕಾಲ ಸಂಚಾರದಲ್ಲಿ ಗೊಂದಲ ಉಂಟಾಯಿತು.
ಕೋಟತಟ್ಟು ಸಮೀಪದ ಬೆಲ್ಲದ ಗಣಪತಿ ದೇವಸ್ಥಾನ ಸಮೀಪದ ನಿವಾಸಿ ರಂಜಿತ್ ಸೋಮಯಾಜಿ (25) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಿಗ್ಗೆ 10 ಗಂಟೆಯ ಸುಮಾರಿಗೆ ಹೆದ್ದಾರಿಯಲ್ಲೇ ಯುವಕ ವಿಚಿತ್ರವಾಗಿ ವರ್ತಿಸುವುದನ್ನು ಕಂಡ ವಾಹನ ಸವಾರರು ಮತ್ತು ಸ್ಥಳೀಯರು ಆತಂಕಗೊಂಡಿದ್ದು ಕೋಟ ಪೊಲೀಸರಿಗೆ ಮಾಹಿತಿ ನೀಡಿದ್ದು ಅವರು ಸ್ಥಳಕ್ಕೆ ಧಾವಿಸಿದರು. ಈ ವೇಳೆ ಪೊಲೀಸರ ಮೇಲೆಯೇ ರಂಜಿತ್ ಕತ್ತಿ ಬೀಸಿ ಹಲ್ಲೆಗೆ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ. ಬಳಿಕ ಪೊಲೀಸರು ಆತನನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದರು.
ಪ್ರಾಥಮಿಕ ವಿಚಾರಣೆಯಲ್ಲಿ ಆತ ಮಾನಸಿಕ ಅಸ್ವಸ್ಥನಾಗಿರಬಹುದೆಂಬ ಅನುಮಾನ ವ್ಯಕ್ತವಾಗಿದ್ದರೂ ಕೂಡ ಮಾನಸಿಕ ಚಿಕಿತ್ಸೆಗೆ ಸಂಬಂಧಿಸಿದ ಯಾವುದೇ ಅಧಿಕೃತ ದಾಖಲೆಗಳು ಲಭ್ಯವಾಗದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…