Featured

ಕೋಡಿಮಠ ಶ್ರೀಗಳಿಂದ ರಾಜ್ಯ ರಾಜಕೀಯ, ಪ್ರಕೃತಿ ವಿಕೋಪದ ಬಗ್ಗೆ ಸ್ಪೋಟಕ ಭವಿಷ್ಯ – Vishwanews24

ಶುಭಕೃತ ನಾಮ ಸಂವತ್ಸರದ ಫಲದಲ್ಲಿ ಪ್ರಕೃತಿ ಅಲ್ಲೋಲ ಕಲ್ಲೋಲ ಆಗುತ್ತೆ..

ರಾಜಕೀಯದಲ್ಲಿ ಕಲಹಗಳಾಗುತ್ತವೆ, ಗುಂಪುಗಳಾಗುತ್ತವೆ..

ಹಾಸನ:  ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಮತ್ತೊಂದು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಈ ಬಾರಿ ರಾಜ್ಯ ರಾಜಕೀಯ, ಪ್ರಕೃತಿ ವಿಕೋಪದ ಬಗ್ಗೆ ಸ್ಪೋಟಕ ಭವಿಷ್ಯ ಹೇಳಿದ್ದಾರೆ.

ಶುಭಕೃತ ನಾಮ ಸಂವತ್ಸರದ ಫಲದಲ್ಲಿ ಗುಡುಗು, ಮಿಂಚು, ಗಾಳಿ, ಮಳೆ ಹೆಚ್ಚಾಗಿ ಪ್ರಕೃತಿ ಅಲ್ಲೋಲ ಕಲ್ಲೋಲ ಆಗುತ್ತದೆ. ಬಯಲುಸೀಮೆ‌ ಮಲೆನಾಡಾಗುತ್ತದೆ, ಮಲೆನಾಡು ಬಯಲುಸೀಮೆಯಾಗಲು ಬಯಸುತ್ತದೆ. ಇದು ಹೀಗೆಯೇ ಮುಂದುವರಿಯುತ್ತದೆ. ಈ ಸಂವತ್ಸರದ ಫಲ ನೋಡಿದರೆ ಮೇಘ ಘರ್ಜಿಸೀತು, ಭೂಮಿ ತಲ್ಲಣಗೊಂಡೀತು. ಭೂಮಿ ಕಂಪಿಸುತ್ತೆ, ಗುಡ್ಡಗಳು ಕುಸಿಯುತ್ತವೆ, ಕೆರೆ ಕಟ್ಟೆಗಳು ಒಡೆದು ಹೋಗುತ್ತವೆ. ಇದು ಈ ಸಂವತ್ಸರದ ಕಡೆಯವರೆಗೂ ಇರುತ್ತೆ ಎಂದು ನುಡಿದಿದ್ದಾರೆ.

ರಾಜಕೀಯ ಬಗ್ಗೆ ಭವಿಷ್ಯ ನುಡಿದಿದ್ದು.  ರಾಜಕೀಯದಲ್ಲಿ ಕಲಹಗಳಾಗುತ್ತವೆ, ಗುಂಪುಗಳಾಗುತ್ತವೆ ಎಂದು ಹೇಳಿದ್ದಾರೆ.

ಆಶ್ವೀಜ ಕಾರ್ತಿಕದಲ್ಲಿ ದೇಶಕ್ಕೆ ಕಷ್ಟ, ಭಂಗ, ನೋವಿದೆ. ರೋಗ ರುಜನಗಳು ಹೆಚ್ಚುತ್ತವೆ, ಕಳ್ಳಕಾಕರ ಕಾಟಗಳು, ಅಪಮೃತ್ಯಗಳು, ಕೊಲೆಗಳು, ಮತೀಯ ಗಲಭೆಗಳು ಹೆಚ್ಚಾಗಿ ಅಂತರಾಷ್ಟ್ರೀಯ ವಿಕೋಪಕ್ಕೆ ತುತ್ತಾಗುತ್ತದೆ. ಎಲ್ಲವೂ ಇನ್ನೂ ಇದೆ, ಇನ್ನೂ‌ ಹೆಚ್ಚುತ್ತದೆ. ರಾಜಕೀಯದಲ್ಲಿ ಕಲಹಗಳಾಗುತ್ತವೆ, ಗುಂಪುಗಳಾಗುತ್ತವೆ. ಮಳೆ ಬರುತ್ತೆ ಬೆಳೆ ಸಿಕ್ಕಲ್ಲ, ಬೆಳೆ ಬರುತ್ತೆ ಮಳೆ ತಿಂದಾಕುತ್ತದೆ. ಶುಭಕೃತನಾಮ ಸಂವತ್ಸದ ಫಲ ಅಶುಭವಾಗಿರುತ್ತದೆ. ಬಲಾಢ್ಯ ಪೃಥ್ವಿ ಹೆಚ್ಚುತ್ತ ಹೋಗುತ್ತದೆ. ಆಕಾಶ ಎಲ್ಲಿ ಬೇಕು ಅಲ್ಲಿ ಘರ್ಜಿಸುತ್ತೆ ಕಂಡಮಂಡಲ ಆಗುತ್ತೆ. ದೊಡ್ಡದೊಡ್ಡ ಪಟ್ಟಣಗಳಿಗೆ ಭಂಗವಾಗುತ್ತೆ. ಮತೀಯ ಗಲಭೆ ಇನ್ನೂ ಹೆಚ್ಚಾಗುತ್ತೆ. ಸಾವು ನೋವು ಇನ್ನೂ ಜಾಸ್ತಿ ಆಗುತ್ತೆ, ಅಶಾಂತಿ ಇದೆ.

ಕಾರ್ತೀಕ ಆಶ್ವೀಜದಲ್ಲಿ ರಾಷ್ಟ್ರ, ರಾಜ್ಯಮಟ್ಟದ ಗೊಂದಲಗಳು, ಸಾವು ನೋವುಗಳು ಆಗುವ ಲಕ್ಷಣ ಬಹಳ ಇದೆ. ಜನ ತಲ್ಲಣಗೊಳ್ಳುತ್ತಾರೆ, ಈ ತಿಂಗಳವರೆಗೂ ಕಾದುನೋಡಿ. ಶುಭಕೃತ ನಾಮ ಸಂವತ್ಸರದಲ್ಲಿ ಶುಭ ಆಗೋದಿಲ್ಲ. ಗಾಳಿ, ಮಳೆ, ವೃಕ್ಷಗಳು ಮರಿದು ಬೀಳುತ್ತವೆ. ವಿಪರೀತ ಮಿಂಚು ಗಾಳಿಯಾಗುತ್ತದೆ, ಸಾವು-ನೋವು ಹೆಚ್ಚಾಗುತ್ತದೆ, ಶುಭವಾದದ್ದಲ್ಲ. ಜಲಾಶಯಗಳು ತುಂಬಿ ಹರಿಯುತ್ತವೆ. ಕೆಲವು ಕಡೆ ಮಳೆ ಹೋದರೆ ಸಾಕು ಅಂತಾರೆ, ಕೆಲವು ಕಡೆ ಮಳೆ ಬೇಕು ಅಂತಾರೆ ಎಂದು  ಭವಿಷ್ಯ ನುಡಿದಿದ್ದಾರೆ.

Vishwa News 24

Recent Posts

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

1 minute ago

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ -vishwanews24

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…

19 minutes ago

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago