Featured

ಕೋಮುವಾದಿ ಉದ್ದೇಶದೊಂದಿಗೆ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆಯನ್ನು ಮೊದಲು ತೆಗೆದುಹಾಕಿ: ವಿಧಾನಸಭೆಯಲ್ಲಿ ಸಿದ್ದರಾಮಯ್ಯ  – Vishwanews24

ಕೋಮುವಾದಿ ಉದ್ದೇಶದೊಂದಿಗೆ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆಯನ್ನು ಮೊದಲು ತೆಗೆದುಹಾಕಿ: ವಿಧಾನಸಭೆಯಲ್ಲಿ ಸಿದ್ದರಾಮಯ್ಯ

ಬೆಂಗಳೂರು,: ಕೋಮುವಾದಿ ಉದ್ದೇಶದೊಂದಿಗೆ ಜಾರಿಗೆ ತಂದಿರುವ ಈ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಮೊದಲು ತೆಗೆದುಹಾಕಬೇಕು ಎಂದು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ.

ಮಂಗಳವಾರ ವಿಧಾನಸಭೆಯಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಕುರಿತು ಚರ್ಚೆ ನಡೆಸಿದ ಅವರು, ಪಶುಸಂಗೋಪನಾ ಇಲಾಖೆಯ ನಿರ್ದೇಶಕರು 2019ರಲ್ಲಿ 1 ಕೋಟಿ 29 ಲಕ್ಷ ಜಾನುವಾರುಗಳು ರಾಜ್ಯದಲ್ಲಿದ್ದಾವೆ ಎಂದು ಉತ್ತರ ನೀಡಿದ್ದರು, 2022ರಲ್ಲಿ 1 ಕೋಟಿ 14 ಲಕ್ಷ ಜಾನುವಾರಿವೆ ಎಂದು ಉತ್ತರ ನೀಡಿದ್ದಾರೆ.

ಬರೀ ಮೂರೇ ವರ್ಷದಲ್ಲಿ 15 ಲಕ್ಷ ಜಾನುವಾರುಗಳು ಕಾಣೆಯಾಗಿವೆ ಎಂದರೆ ಇದನ್ನು ನಂಬಬಹುದಾ? ಎಂದು ಪ್ರಶ್ನಿಸಿದ್ದಾರೆ.

ನಾವು ಗೋಹತ್ಯೆ ನಿಷೇದ ಮಾಡಿ, ಗೋಶಾಲೆ ತೆರೆದು ಗೋಸಂಪತ್ತು ಅಭಿವೃದ್ಧಿ ಆಗಿದೆ ಎಂದಿದ್ದೀರಿ, ಎಲ್ಲಪ್ಪ ಅಭಿವೃದ್ಧಿ ಆಗಿರುವುದು ಕಡಿಮೆ ಆಗಿದೆಯಲ್ವಾ? 123 ಸರ್ಕಾರಿ, 200 ಖಾಸಗಿ ಗೋಶಾಲೆಗಳಿವೆ. ಒಂದು ಹಸು ಸಾಕಲು ದಿನಕ್ಕೆ 17 ರೂ. ನಂತೆ ಸರ್ಕಾರ ನೀಡುತ್ತದೆ, ಕನಿಷ್ಠ ಒಂದು ಹಸುವಿಗೆ ನಿತ್ಯ 60 ರೂ. ಮೇವು ಬೇಕು. ಹೀಗಾದರೆ ಹಸುವಿಗೆ ಹೊಟ್ಟೆತುಂಬ ಮೇವು ನೀಡೋಕೆ ಸಾಧ್ಯವೇ? ಮೊದಲೆಲ್ಲ ರೈತರು ಉಪಯುಕ್ತವಿಲ್ಲದ ಜಾನುವಾರುಗಳನ್ನು ಸಂತೆಗೆ ತೆಗೆದುಕೊಂಡು ಹೋಗಿ ಮಾರಾಟ ಮಾಡುತ್ತಿದ್ದರು, ಈಗ ಅದನ್ನು ನಿಷೇಧ ಮಾಡಲಾಗಿದೆ. ಸರ್ಕಾರವಾದರೂ ಈ ಜಾನುವಾರುಗಳನ್ನು ಖರೀದಿ ಮಾಡುವುದಾದರೆ ಅಡ್ಡಿಲ್ಲ, ಅದನ್ನೂ ಮಾಡುತ್ತಿಲ್ಲ ಎಂದರು.

ಗೋಹತ್ಯೆ ನಿಷೇಧ ಕಾಯ್ದೆ ಇರುವುದರಿಂದ ವಯಸಾಗಿರುವ, ರೋಗ ಬಂದಿರುವ, ಉಳುಮೆ ಮಾಡಲು ಸಾಧ್ಯವಾಗದ ಜಾನುವಾರುಗಳನ್ನು ಯಾರು ಖರೀದಿಸದೆ ಇರುವುದು ರೈತರಿಗೆ ದೊಡ್ಡ ತಲೆ ನೋವಾಗಿದೆ. ಗೋಹತ್ಯೆ ನಿಷೇಧ ಕಾಯ್ದೆ ಬಂದ ನಂತರದಿಂದ ವಯಸಾದ ಜಾನುವಾರುಗಳನ್ನು ರೈತರು ತೆಗೆದುಕೊಂಡು ಹೋಗಿ ಅರಣ್ಯ ಪ್ರದೇಶದಲ್ಲಿ ಬಿಟ್ಟು ಬರುತ್ತಿದ್ದಾರೆ. ಗೋಶಾಲೆಗೆ ಸರ್ಕಾರ ನೀಡುವ ಹಣ ಸಾಕಾಗುತ್ತಿಲ್ಲ, ಇದರಿಂದ ಗೋಶಾಲೆಗಳು ಕೂಡ ಅವುಗಳಿಗೆ ಸರಿಯಾಗಿ ಮೇವು ನೀಡುತ್ತಿಲ್ಲ. ಬರಡಾದ, ವಯಸ್ಸಾದ ಜಾನುವಾರುಗಳನ್ನು ರೈತರು ಏನು ಮಾಡಬೇಕು? ಈ ಕಾಯ್ದೆ ತಂದಿರುವುದಕ್ಕೆ ಸರ್ಕಾರ ತನ್ನ ಬೆನ್ನು ತಾನು ತಟ್ಟಿಕೊಳ್ಳುವುದು ಸಂಪೂರ್ಣ ತಪ್ಪು.

ಕಳೆದ 3 ವರ್ಷಗಳ ಅವಧಿಯಲ್ಲಿ 15 ಲಕ್ಷ ಜಾನುವಾರುಗಳು ಕಣ್ಮರೆಯಾಗಿದ್ದಾವೆ ಎಂದು ಪಸುಸಂಗೋಪನಅ ಇಲಾಖೆಯವರು ಉತ್ತರ ನೀಡಿದ್ದಾರೆ. ಇದರ ಜೊತೆಗೆ ಚರ್ಮಗಂಟು ರೋಗ ಬಂದಿದೆ, ಕಳೆದ ಅಧಿವೇಶನದಲ್ಲಿ ಈ ಬಗ್ಗೆ ಪ್ರಶ್ನಿಸಿದಾಗ ಸಚಿವರು ಜನವರಿ ಒಳಗೆ ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕಿ ಮುಗಿಸುವುದಾಗಿ ಹೇಳಿದ್ದರು, ಆದರೂ ಈ ವರೆಗೆ 1 ಕೋಟಿ ಜಾನುವಾರುಗಳಿಗೆ ಮಾತ್ರ ಲಸಿಕೆ ಹಾಕಿದ್ದೇವೆ ಎಂದು ಭಾಷಣದಲ್ಲಿ ಹೇಳಿಕೊಂಡಿದ್ದಾರೆ.

ಇಲಾಖೆಯವರೇ ನೀಡಿರುವ ಲೆಕ್ಕದ ಪ್ರಕಾರ ಇನ್ನು 14 ಲಕ್ಷ ಜಾನುವಾರುಗಳಿಗೆ ಲಸಿಕೆ ಹಾಕಿಲ್ಲ. ಈ ರೋಗದಿಂದ ಎತ್ತುಗಳು, ಎಮ್ಮೆಗಳು, ಹಸುಗಳು ಸುತ್ತಹೋಗಿವೆ, ಅದಕ್ಕೆ ಪರಿಹಾರ ನೀಡಿಲ್ಲ, ಹಾಲಿನ ಉತ್ಪಾದನೆ ಕೂಡ ಇಳಿಕೆಯಾಗಿದೆ. 6 ತಿಂಗಳ ಮೊದಲು 94 ಲಕ್ಷ ಲೀಟರ್‌ ಹಾಲು ನಿತ್ಯ ಉತ್ಪಾದನೆ ಆಗುತ್ತಿತ್ತು, ಇಂದು ಅದು 76 ಲಕ್ಷ ಲೀಟರ್‌ ಗೆ ಇಳಿಕೆಯಾಗಿದೆ. ಇದರಿಂದ 6 ಕೋಟಿ 66 ಲಕ್ಷ ರೂಪಾಯಿ ನಿತ್ಯ ರೈತರಿಗೆ ನಷ್ಟವಾಗುತ್ತಿದೆ. ಗೋರಕ್ಷಣೆ ಮಾಡಿದ್ದೇವೆ ಎಂದು ಬೆನ್ನುತಟ್ಟಿಕೊಂಡವರು ಇದಕ್ಕೆ ಜವಾಬ್ದಾರರಲ್ವಾ? ಸರ್ಕಾರದ ತಪ್ಪು ನಿರ್ಧಾರ, ಬೇಜವಾಬ್ದಾರಿತನ, ಉಡಾಫೆತನದಿಂದ ನಾಡಿನ ರೈತರು ನಷ್ಟ ಅನುಭವಿಸುತ್ತಿದ್ದಾರೆ ಎಂದು ಹೇಳಿದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago