Featured

ಕೋಮುವಾದಿ ಬಿಜೆಪಿಯನ್ನು ದೂರ ಇಡುವುದಕ್ಕಾಗಿ ಜಾತ್ಯತೀತ ಪಕ್ಷವಾದ ಕಾಂಗ್ರೆಸ್‌ ಬೆಂಬಲಿಸಲು ಜೆಡಿಎಸ್‌ನವರು ಮುಂದಾಗಬೇಕು : ಸಿದ್ದರಾಮಯ್ಯ – Vishwnaews24

ಬಿಜೆಪಿ ಹಾಗೂ ಜೆಡಿಎಸ್‌ನಿಂದ ಕಾಂಗ್ರೆಸ್‌ ಗೆ ಆತ್ಮಸಾಕ್ಷಿ ಮತಗಳು ದೊರೆಯಲಿವೆ ..

ಜೆಡಿಎಸ್‌ನವರು ನಮ್ಮ ಅಭ್ಯರ್ಥಿ ಬೆಂಬಲಿಸುತ್ತಾರೆ ಎಂಬ ವಿಶ್ವಾಸವಿದೆ..

ಮೈಸೂರು: ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ಎರಡನೇ ಅಭ್ಯರ್ಥಿ ಮನ್ಸೂರ್ ಆಲಿಖಾನ್ ಅವರಿಗೆ ಬಿಜೆಪಿ ಹಾಗೂ ಜೆಡಿಎಸ್‌ನಿಂದ ಆತ್ಮಸಾಕ್ಷಿ ಮತಗಳು ದೊರೆಯಲಿವೆ ಎಂದು ವಿಧಾನಸಭೆಯ ವಿರೋಧ ‌ಪಕ್ಷದ ನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಇಲ್ಲಿ ‌ಪತ್ರಕರ್ತರೊಂದಿಗೆ ಸೋಮವಾರ ಮಾತನಾಡಿದ ಅವರು, ನಾವು ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು ಜೆಡಿಎಸ್‌ನಲ್ಲಿರುವ ಅಲ್ಪಸಂಖ್ಯಾತ ಶಾಸಕರು ಬೆಂಬಲಿಸುವ ವಿಶ್ವಾಸವಿದೆ ಎಂದರು.

ಕೋಮುವಾದಿ ಬಿಜೆಪಿಯನ್ನು ದೂರ ಇಡುವುದಕ್ಕಾಗಿ ತಮ್ಮ ಅಭ್ಯರ್ಥಿಯನ್ನು ಕಣದಿಂದ ನಿವೃತ್ತಿಗೊಳಿಸಿ ಜಾತ್ಯತೀತ ಪಕ್ಷವಾದ ಕಾಂಗ್ರೆಸ್‌ ಬೆಂಬಲಿಸಲು ಜೆಡಿಎಸ್‌ನವರು ಮುಂದಾಗಬೇಕು. ಎಚ್.ಡಿ. ದೇವೇಗೌಡ ಅವರು ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾಗ ನಾವು ಅಭ್ಯರ್ಥಿಯನ್ನು ಹಾಕದೇ ಬೆಂಬಲ ನೀಡಿದ್ದೆವು. 37 ಸ್ಥಾನ ಗೆದ್ದಿದ್ದ ಜೆಡಿಎಸ್‌ಗೆ ನಾವು ಮುಖ್ಯಮಂತ್ರಿ ಸ್ಥಾನ ನೀಡಿದ್ದೆವು. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕು ಎನ್ನುವುದು ನಮ್ಮ ಉದ್ದೇಶವಾಗಿತ್ತು. ಈಗ ಜೆಡಿಎಸ್‌ನವರು ರಾಜ್ಯಸಭಾ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗೆ ಬೆಂಬಲಿಸಲಿ ಎಂದರು.

ಕೋಮುವಾದಿ ಅಭ್ಯರ್ಥಿ ಗೆಲ್ಲದಿರಲೆಂದು ಜೆಡಿಎಸ್‌ನವರು ನಮ್ಮ ಅಭ್ಯರ್ಥಿ ಬೆಂಬಲಿಸುತ್ತಾರೆ ಎಂಬ ವಿಶ್ವಾಸವಿದೆ ಎಂದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago