ಪುತ್ತೂರು: ದೀಪೋತ್ಸವ ಕಾರ್ಯಕ್ರಮದಲ್ಲಿ ಕೋಮು ಪ್ರಚೋದಕ, ಮಹಿಳೆಯರ ಘನತೆಗೆ ಧಕ್ಕೆ ತರುವ ಹಾಗೂ ಸಾರ್ವಜನಿಕ ಅಶಾಂತಿ ಉಂಟು ಮಾಡುವ ಭಾಷಣ ಮಾಡಿರುವ ಆರೋಪದಡಿ ಡಾ.ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ದೂರು ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಬುಧವಾರ ಅವರಿಗೆ ಜಾಮೀನು ಮಂಜೂರು ಮಾಡಿದೆ.
ಜಾಮೀನು ಕೋರಿ ಅವರು ಸಲ್ಲಿಸಿದ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜಾಮೀನು ಮಂಜೂರುಗೊಳಿಸಿದೆ.
ಪುತ್ತೂರು ತಾಲೂಕಿನ ಉಪ್ಪಳಿಗೆ ಎಂಬಲ್ಲಿ ಅ.22ರಂದು ನಡೆದ ದೀಪೋತ್ಸವ ಮತ್ತು ಗೋಪೂಜೆಯಲ್ಲಿ ಭಾಗವಹಿಸಿದ್ದ ಕಲ್ಲಡ್ಕ ಪ್ರಭಾಕರ ಭಟ್ ಕೋಮು ಪ್ರಚೋದನಾತ್ಮಕವಾಗಿ ಭಾಷಣ ಮಾಡಿರುವ ಬಗ್ಗೆ ಈಶ್ವರಿ ಪದ್ಮುಂಜ ಅವರು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿದ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಮನೆಗೆ ನೋಟೀಸ್ ಜಾರಿಗೊಳಿಸಿದ್ದರು. ಬಳಿಕದ ಬೆಳವಣಿಗೆಯಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅ. 27ರಂದು ನಡೆದ ವಿಚಾರಣೆಯಲ್ಲಿ ನ್ಯಾಯಾಲಯವು ಬಲವಂತದ ಕ್ರಮ ತೆಗೆದುಕೊಳ್ಳದಂತೆ ಮಧ್ಯಂತರ ಆದೇಶ ನೀಡಿ ಪೂರ್ಣ ವಿಚಾರಣೆಯನ್ನು ಅ. 29ಕ್ಕೆ ಮುಂದೂಡಿತ್ತು. ಅ.29ರಂದು ದೂರುದಾರೆ ಈಶ್ವರಿ ಪದ್ಮುಂಜ ಅವರ ಪರ ವಕೀಲರು ಪುತ್ತೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯಕ್ಕೆ ಬಿಎನ್‌ಎಸ್‌ಎಸ್ ಸೆಕ್ಷನ್ 338, 339 ಅಡಿ ವಾದ ಮಂಡಿಸಲು ಅವಕಾಶ ಕೋರಿ ಅರ್ಜಿ ಸಲ್ಲಿಸಿದ್ದರು. ಅಂದು ನ್ಯಾಯಾಲಯ ಅರ್ಜಿಯ ವಿಚಾರಣೆಯನ್ನು ಹಲವು ಬಾರಿ ಮುಂದೂಡಿತ್ತು. ಇದೀಗ ನ್ಯಾಯಾಲಯ ಜಾಮೀನು ನೀಡಿದೆ.
ಪ್ರಭಾಕರ ಭಟ್ ಪರವಾಗಿ ಪುತ್ತೂರಿನ ವಕೀಲ ಮಹೇಶ್ ಕಜೆ ವಾದಿಸಿದ್ದರು
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…