ಕೋಲ್ಕತ್ತಾ: ಗೂಡ್ಸ್ ರೈಲೊಂದು ಎಕ್ಸ್‌ಪ್ರೆಸ್ ರೈಲಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, 25 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ನಡೆದಿದೆ.
ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ಅಸ್ಸಾಂನ ಸಿಲ್ಚಾರ್‌ನಿಂದ ಕೋಲ್ಕತ್ತಾದ ಸೀಲ್ದಾಗೆ ಚಲಿಸುತ್ತಿದ್ದ ಸಂದರ್ಭ ನ್ಯೂ ಜಲ್ಪೈಗುರಿ ಸಮೀಪದ ರಂಗಪಾಣಿ ನಿಲ್ದಾಣದ ಬಳಿ ಗೂಡ್ಸ್ ರೈಲು ಹಿಂದಿನಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು ಹಳಿತಪ್ಪಿವೆ ಎಂದು ವರದಿಗಳು ತಿಳಿಸಿವೆ.
ಘಟನಾ ಸ್ಥಳಕ್ಕೆ ವೈದ್ಯರು ಮತ್ತು ವಿಪತ್ತು ನಿರ್ವಹಣಾ ತಂಡಗಳನ್ನು ರವಾನಿಸಲಾಗಿದೆ ಎಂದು ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಡಾರ್ಜಿಲಿಂಗ್ ಜಿಲ್ಲೆಯ ಫನ್ಸಿಡೆವಾ ಪ್ರದೇಶದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ಬಗ್ಗೆ ತಿಳಿದು ಆಘಾತವಾಗಿದೆ. ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ಡಿಎಂ, ಎಸ್ಪಿ, ವೈದ್ಯರು, ಅಂಬುಲೆನ್ಸ್ ಮತ್ತು ವಿಪತ್ತು ತಂಡಗಳು ಘಟನಾ ಸ್ಥಳಕ್ಕೆ ಧಾವಿಸಿವೆ. ಪಾರುಗಾಣಿಕಾ, ಚೇತರಿಕೆ, ವೈದ್ಯಕೀಯ ನೆರವಿಗಾಗಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…