Featured

ಕೋಲ್ಕತ್ತಾ:  ಎಕ್ಸ್‌ಪ್ರೆಸ್ ರೈಲಿಗೆ ಹಿಂಬದಿಯಿಂದ ಗೂಡ್ಸ್ ರೈಲು ಡಿಕ್ಕಿ : ಐವರು ದುರ್ಮರಣ – vishwanews24

ಕೋಲ್ಕತ್ತಾ:  ಎಕ್ಸ್‌ಪ್ರೆಸ್ ರೈಲಿಗೆ ಹಿಂಬದಿಯಿಂದ ಗೂಡ್ಸ್ ರೈಲು ಡಿಕ್ಕಿ : ಐವರು ದುರ್ಮರಣ

ಕೋಲ್ಕತ್ತಾ: ಗೂಡ್ಸ್ ರೈಲೊಂದು ಎಕ್ಸ್‌ಪ್ರೆಸ್ ರೈಲಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, 25 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ  ಡಾರ್ಜಿಲಿಂಗ್  ಜಿಲ್ಲೆಯಲ್ಲಿ ನಡೆದಿದೆ.

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ಅಸ್ಸಾಂನ ಸಿಲ್ಚಾರ್‌ನಿಂದ ಕೋಲ್ಕತ್ತಾದ ಸೀಲ್ದಾಗೆ ಚಲಿಸುತ್ತಿದ್ದ ಸಂದರ್ಭ ನ್ಯೂ ಜಲ್ಪೈಗುರಿ ಸಮೀಪದ ರಂಗಪಾಣಿ ನಿಲ್ದಾಣದ ಬಳಿ ಗೂಡ್ಸ್ ರೈಲು ಹಿಂದಿನಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು ಹಳಿತಪ್ಪಿವೆ ಎಂದು ವರದಿಗಳು ತಿಳಿಸಿವೆ.

ಘಟನಾ ಸ್ಥಳಕ್ಕೆ ವೈದ್ಯರು ಮತ್ತು ವಿಪತ್ತು ನಿರ್ವಹಣಾ ತಂಡಗಳನ್ನು ರವಾನಿಸಲಾಗಿದೆ ಎಂದು ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ  ಹೇಳಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಡಾರ್ಜಿಲಿಂಗ್ ಜಿಲ್ಲೆಯ ಫನ್ಸಿಡೆವಾ ಪ್ರದೇಶದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ಬಗ್ಗೆ ತಿಳಿದು ಆಘಾತವಾಗಿದೆ. ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ಡಿಎಂ, ಎಸ್ಪಿ, ವೈದ್ಯರು, ಅಂಬುಲೆನ್ಸ್ ಮತ್ತು ವಿಪತ್ತು ತಂಡಗಳು ಘಟನಾ ಸ್ಥಳಕ್ಕೆ ಧಾವಿಸಿವೆ. ಪಾರುಗಾಣಿಕಾ, ಚೇತರಿಕೆ, ವೈದ್ಯಕೀಯ ನೆರವಿಗಾಗಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

46 minutes ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

58 minutes ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

1 hour ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

4 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

4 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

5 hours ago