ಕೋಳಿಯಿಂದ ಕೊರೋನಾ ವೈರಸ್‌ ಹರಡುವುದಿಲ್ಲ -Vishwanews24

ನವದೆಹಲಿ: ವೈಜ್ಞಾನಿಕ ಮತ್ತು ವೈದ್ಯಕೀಯ ದೃಷ್ಟಿಕೋನದಿಂದ, ಭಾರತದಲ್ಲಿರಲಿ ಅಥವಾ ಬೇರೆಡೆ ಇರಲಿ, ವೈರಸ್ ಕೋಳಿಯಿಂದ ಹರಡುವುದಿಲ್ಲ. ದಯವಿಟ್ಟು ಅಂತಹ ಸಂದೇಶಗಳನ್ನು ರವಾನೆ ಮಾಡಬೇಡಿ ಅಥವಾ ಹಂಚಿಕೊಳ್ಳಬೇಡಿ ಎಂದು ಕೋಳಿ ಉದ್ಯಮ ಪಶುವೈದ್ಯರ ಸಂಸ್ಥೆಯ ಅಧ್ಯಕ್ಷ ಡಾ.ಜಿ.ದೇವೇಗೌಡ ಹೇಳಿದ್ದಾರೆ.

ಟಿಎನ್‌ಎಂ ಜೊತೆ ಮಾತನಾಡಿದ ಬೆಂಗಳೂರು ಜಿಲ್ಲಾ ಆರೋಗ್ಯ ಅಧಿಕಾರಿ, ಸೋಂಕಿತ ವ್ಯಕ್ತಿಗಳು ಅಥವಾ ವಾಹಕಗಳಿಂದ ಗಾಳಿಯ ಹನಿಗಳ ಮೂಲಕ ವೈರಸ್ ಹರಡುತ್ತದೆ. ಕೊರೋನಾ ವೈರಸ್‌ ಏಕಾಏಕಿ ಪ್ರಾರಂಭವಾದಾಗಿನಿಂದ ಇಂತಹ ಹಲವಾರು ನಕಲಿ ಸಲಹೆಗಳು ಹಾಗೂ ಎಚ್ಚರಿಕೆಗಳನ್ನು ವಾಟ್ಸಾಪ್‌ನಲ್ಲಿ ಹರಿದಾಡುತ್ತಿವೆ.ಆದರೆ ಈ ವಿಚಾರವಾಗಿ ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆಯ ಅಧಿಕಾರಿಗಳು ಹೇಳಿಕೆ ನೀಡಿದ ಬಳಿಕವೂ ಇದೇ ರೀತಿಯ ಸಂದೇಶವನ್ನು ರವಾನೆ ಮಾಡಲಾಗುತ್ತಿದೆ ಎಂದರು.

ಕಳೆದ ಕೆಲವು ದಿನಗಳಿಂದ ಬ್ರಾಯ್ಲರ್ ಕೋಳಿಗಳು ಕೊರೋನಾ ವೈರಸ್‌ ಹರಡುತ್ತಿವೆ ಎಂಬ ಸುಳ್ಳು ಸುದ್ದಿಗಳು ವೈರಲ್ ಆಗುತ್ತಿರುವುದನ್ನು ಗಮನಿಸಿದ್ದೇವೆ. ಈ ರೀತಿಯಾದ ಸುದ್ದಿಯನ್ನು ತಿಳಿಯಲು ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ ಎಂದು ಜಿಎಚ್‌ಎಂಸಿಯ ಮುಖ್ಯ ಪಶುವೈದ್ಯ ಅಧಿಕಾರಿ ಡಾ.ಪಿ.ವೆಂಕಟೇಶ್ವರ ರೆಡ್ಡಿ ಅವರು ಹೇಳಿದ್ದಾರೆ.

ಫೆ.10 ಸೋಮವಾರದಂದು ಈ ವಿಚಾರವಾಗಿ ಸ್ಪಷ್ಟನೆ ನೀಡಿದ ಕೇಂದ್ರ ಪ್ರಾಣಿ ಪಶು ಸಚಿವಾಲಯ, ಕೋಳಿಗಳು ಕೊರೋನಾ ವೈರಸ್‌‌‌ ಹರಡುತ್ತಿವೆ ಎಂಬ ವಿಚಾರಕ್ಕೆ ಸಂಬಂಧಪಟ್ಟಂತೆ ಯಾವುದೇ ವರದಿಯಲ್ಲಿ ಈವರೆಗೆ ದೃಢೀಕರಿಸದ ಕಾರಣ ಕೋಳಿಗಳು ಸುರಕ್ಷಿತ ಎಂದು ಪರಿಗಣಿಸಬಹುದು ಎಂದು ತಿಳಿಸಿದ್ದಾರೆ.

ಕೋಳಿಗಳು ಕೊರೋನಾ ವೈರಸ್‌‌ ಹರಡುತ್ತಿವೆ ಎಂದು ಯಾವುದೇ ವರದಿಯಲ್ಲಿ ದೃಢಪಟ್ಟಿಲ್ಲ ಎಂದು ಪಶುಸಂಗೋಪನಾ ಆಯುಕ್ತ ಪ್ರವೀಣ್ ಮಲಿಕ್ ಅವರು ಸೋಮವಾರ ಭಾರತದ ಪೌಲ್ಟ್ರಿ ಫೆಡರೇಶನ್‌ನ ಸಲಹೆಗಾರ ವಿಜಯ್ ಸರ್ಡಾನ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

3 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

3 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

23 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago