ಬೆಂಗಳೂರು: ಕೋವಿಡ್ ಪರೀಕ್ಷೆಗೆ ಒಳಪಟ್ಟವರು ಇನ್ಮುಂದೆ ಆನ್‌ಲೈನ್‌ನಲ್ಲೇ ತಮ್ಮ ವರದಿ ಪಡೆದುಕೊಳ್ಳಬಹುದು. ಸರ್ಕಾರದ ಕೋವಿಡ್ ವಾರ್ ರೂಂ ಅಭಿವೃದ್ಧಿಪಡಿಸಿರುವ ವೆಬ್ ಪೋರ್ಟಲ್: https://www.covidwar.karnataka.gov.in/service1 ನಲ್ಲಿ ತಮ್ಮ ಎಸ್‌ಆರ್‌ಎಫ್ ಐಡಿ ನಂಬರ್ (ಮಾದರಿ ಉಲ್ಲೇಖಿತ ಅರ್ಜಿ ಸಂಖ್ಯೆ) ದಾಖಲಿಸಿ ವರದಿ ವೀಕ್ಷಿಸಬಹುದು.
ರಾಜ್ಯದಲ್ಲಿ ಕೊರೊನಾ ಸೋಂಕಿತರನ್ನು ಬೇಗನೆ ಪತ್ತೆ ಮಾಡಲು, ನಿಗದಿಪಡಿಸಿದ ಗುರಿಯಂತೆ ಪರೀಕ್ಷೆ ನಡೆಸಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸೂಚನೆ ನೀಡಿದ್ದಾರೆ.
ಸರ್ಕಾರಿ ಮತ್ತು ಖಾಸಗಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರು ಹಾಗೂ ಪ್ರಯೋಗಾಲಯಗಳ ಮುಖ್ಯಸ್ಥರೊಂದಿಗೆ ಸಚಿವ ಡಾ.ಕೆ.ಸುಧಾಕರ್ ಅವರು ವೀಡಿಯೋ ಸಭೆ ನಡೆಸಿದರು.
ಕೋವಿಡ್ ಪರೀಕ್ಷೆಯ ವರದಿಯನ್ನು ಇನ್ನು ಮುಂದೆ ವೆಬ್ ಸೈಟ್ ನಲ್ಲೇ ಪಡೆಯಬಹುದು. ಕೊರೊನಾ ಪರೀಕ್ಷೆ ಮಾಡಿಸಿಕೊಂಡವರು ತಮ್ಮ ಎಸ್‍ಆರ್ ಎಫ್ ಗುರುತು ಬಳಸಿ www.covidwar.karnataka.gov.in/service1 ನಲ್ಲಿ ಆನ್ ಲೈನ್ ನಲ್ಲೇ ಪರೀಕ್ಷೆಯ ವರದಿಯನ್ನು ಪಡೆಯಬಹುದು ಎಂದು ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.
ಕೋವಿಡ್ ಪರೀಕ್ಷೆ ಫಲಿತಾಂಶ ವೀಕ್ಷಿಸುವ ವೆಬ್ ಪೋರ್ಟಲ್ ವಿಳಾಸ: https://www.covidwar.karnataka.gov.in/service1
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…