ವಾಷಿಂಗ್ಟನ್: ಕೋವಿಡ್–19 ಸಾಂಕ್ರಾಮಿಕದ ವಿರುದ್ಧದ ಹೋರಾಟ ಹಾಗೂ ಭವಿಷ್ಯದ ಆರೋಗ್ಯ ತುರ್ತು ಪರಿಸ್ಥಿತಿ ಎದುರಿಸಲು ಬೇಕಾಗುವ ಸಿದ್ಧತೆಗಾಗಿ ಭಾರತಕ್ಕೆ ಹೆಚ್ಚುವರಿಯಾಗಿ ₹304 ಕೋಟಿ (41 ದಶಲಕ್ಷ ಡಾಲರ್) ಆರ್ಥಿಕ ಬೆಂಬಲವನ್ನು ಅಮೆರಿಕ ಪ್ರಕಟಿಸಿದೆ.
ಈ ಮೂಲಕ ಕೋವಿಡ್–19 ಸಾಂಕ್ರಾಮಿಕದ ಆರಂಭವಾದಾಗಿನಿಂದ ಇಲ್ಲಿವರೆಗೆ, ಅಮೆರಿಕ ಭಾರತಕ್ಕೆ ನೀಡಿರುವ ಒಟ್ಟು ಆರ್ಥಿಕ ನೆರವಿನ ಪ್ರಮಾಣ ₹1484 ಕೋಟಿ (200 ದಶಲಕ್ಷ ಡಾಲರ್)ಯಷ್ಟಾಗಿದೆ.
ಕಳೆದ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಭಾರತ, ಕೋವಿಡ್ ಎರಡನೇ ಅಲೆ ವಿರುದ್ಧ ತೀವ್ರವಾಗಿ ಹೋರಾಟ ನಡೆಸಿತು. ಪ್ರತಿ ದಿನ 3 ಲಕ್ಷಕ್ಕೂ ಅಧಿಕ ಸೋಂಕಿನ ಪ್ರಕರಣಗಳು ವರದಿಯಾಗುತ್ತಿದ್ದವು. ಆಸ್ಪತ್ರೆಗಳಲ್ಲಿ ವೈದ್ಯಕೀಯ ಆಮ್ಲಜನಕ ಮತ್ತು ಹಾಸಿಗೆಗಳ ಕೊರತೆ ಎದುರಾಯಿತು.
‘ಇಂಥ ತುರ್ತು ಸಂದರ್ಭಗಳಲ್ಲಿ ಅಮೆರಿಕ ಭಾರತಕ್ಕೆ ನೆರವು ನೀಡಿತ್ತು. ಈಗಲೂ ಕೋವಿಡ್–19 ವಿರುದ್ಧದ ಭಾರತದ ಹೋರಾಟದಲ್ಲಿಅಮೆರಿಕ ನೆರವನ್ನು ಮುಂದುವರಿಸಿದೆ‘ ಎಂದು ಅಮೆರಿಕದ ಅಂತರರರಾಷ್ಟ್ರೀಯ ಅಭಿವೃದ್ಧಿ ಸಂಸ್ಥೆ ಸೋಮವಾರ ತಿಳಿಸಿದೆ.
ಪ್ರಸ್ತುತ ಕೋವಿಡ್–19 ವಿರುದ್ಧದ ಹೋರಾಟ ಹಾಗೂ ಭವಿಷ್ಯದ ಆರೋಗ್ಯ ತುರ್ತುಪರಿಸ್ಥಿತಿ ಎದುರಿಸುವ ಸಿದ್ಧತೆಗಾಗಿ ಭಾರತಕ್ಕೆ ಹೆಚ್ಚುವರಿ₹304 ಕೋಟಿ ಆರ್ಥಿಕ ನೆರವು ನೀಡುತ್ತಿರುವುದಾಗಿ ಅಮೆರಿಕದ ಅಂತರರಾಷ್ಟ್ರೀಯ ಅಭಿವೃದ್ಧಿ ಸಂಸ್ಥೆ (ಯುಎಸ್‌ಎಐಡಿ) ಪ್ರಕಟಿಸಿದೆ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…