ಕೋವಿಡ್ 19 : ಸೋಂಕಿತರ ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಮುಖ -Vishwanews24
ಕೋವಿಡ್ 19 : ಸೋಂಕಿತರ ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಮುಖ -Vishwanews24
ನವದೆಹಲಿ: ದೇಶದಲ್ಲಿ ಸತತ ಎರಡನೇ ದಿನವೂ ಕೋವಿಡ್ ಪ್ರಕರಣಗಳ ಸಂಖ್ಯೆ 20 ಸಾವಿರಕ್ಕಿಂತ ಕಡಿಮೆ ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಕಡಿಮೆಯಾಗಿರುವ ವರದಿಯಾಗಿದೆ.
ಬುಧವಾರ ಬೆಳಿಗ್ಗೆ 8ಕ್ಕೆ ಕೊನೆಗೊಂಡಂತೆ ಇಪ್ಪತ್ನಾಲ್ಕು ಗಂಟೆಗಳಲ್ಲಿ ದೇಶದಲ್ಲಿ ಒಟ್ಟು 18,870 ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3,37,16,451ಕ್ಕೆ ಏರಿದೆ.
ಕಳೆದ ಒಂದು ದಿನದಲ್ಲಿ 9,686 ಸಕ್ರಿಯ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,82,520ಕ್ಕೆ ಇಳಿದಿದೆ. ಇದು 194 ದಿನಗಳಲ್ಲೇ ಅತ್ಯಂತ ಕಡಿಮೆ ಸಂಖ್ಯೆಯ ಸಕ್ರಿಯ ಪ್ರಕರಣಗಳಾಗಿವೆ.
ಕೋವಿಡ್‌ನಿಂದ ಕಳೆದ 24 ಗಂಟೆಗಳಲ್ಲಿ 378 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು ಸಾವಿನ ಸಂಖ್ಯೆ 4,47,751ಕ್ಕೆ ಏರಿದೆ.
ಇದನ್ನೂ ಓದಿ : ಮಂಗಳೂರು : ಕೊರೊನಾ ಮಾರ್ಗಸೂಚಿ ಮತ್ತು ಅದೇಶಗಳಿಗೆ ಕೆಲವೊಂದು ಸೇರ್ಪಡೆ ಮತ್ತು ಮಾರ್ಪಾಡು : ಸರಕಾರ ಆದೇಶ -Vishwanews24
