ಬಾಗಲಕೋಟೆ: ಕೋವಿಡ್ ಎರಡನೇ ಅಲೆಯ ಅಬ್ಬರಕ್ಕೆ ತಂದೆ ತಾಯಿಯನ್ನು ಕಳೆದುಕೊಂಡ ಬಾಗಲಕೋಟೆಯ 5 ಮಕ್ಕಳು ಸೇರಿದಂತೆ ರಾಜ್ಯದಲ್ಲಿ ಒಟ್ಟು 32 ಮಕ್ಕಳು ಅನಾಥರಾಗಿದ್ದಾರೆ. ಅಂತಹ ಮಕ್ಕಳಿಗೆ ಮುಖ್ಯಮಂತ್ರಿ ಬಾಲಸೇವಾ ಯೋಜನೆಯಡಿ ಪ್ರತಿ ತಿಂಗಳು 3,500 ನೀಡಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಮಾಧ್ಯಮದವರೊಂದಿಗೆ ಈ ವಿಷಯ ತಿಳಿಸಿದ ಅವರು, ಕೋವಿಡ್‍ನಿಂದ ಮೃತಪಟ್ಟ ತಂದೆ-ತಾಯಿಯರಿಂದ ತಬ್ಬಲಿಯಾದ ಮಕ್ಕಳಿಗೆ ಸರ್ಕಾರ ಕಾಳಜಿ ವಹಿಸಿದ್ದು, ಬಾಲಸೇವಾ ಯೋಜನೆ ಜಾರಿಗೆ ತಂದಿದೆ. ಅನಾಥರಾದ ಮಕ್ಕಳಿಗೆ ಮುಖ್ಯಮಂತ್ರಿ ಬಾಲಸೇವಾ ಯೋಜನೆಯಡಿ ಪ್ರತಿ ತಿಂಗಳು ಆ ಮಕ್ಕಳಿಗೆ 3,500 ನೀಡಲಾಗುತ್ತಿದೆ. ಎಸ್.ಎಸ್.ಎಲ್.ಸಿವರೆಗೆ ಉಚಿತ ಶಿಕ್ಷಣ ನೀಡಲಾಗುತ್ತಿದೆ. ಉನ್ನತ ಶಿಕ್ಷಣಕ್ಕೆ ಲ್ಯಾಪ್‍ಟಾಪ್ ಸಹ ನೀಡಲಾಗುತ್ತಿದ್ದು, ಹೆಣ್ಣು ಮಕ್ಕಳಿದ್ದಲ್ಲಿ ಅಂತವರಿಗೆ 21 ವರ್ಷದ ನಂತರ 1 ಲಕ್ಷ ನೀಡಲಾಗುತ್ತಿದೆ ಎಂದಿದ್ದಾರೆ.
ಅನಾಥ ಮಕ್ಕಳನ್ನು ದತ್ತು ಪ್ರಕ್ರಿಯೆಗೆ ಒಳಪಡಿಸಲಾಗುತ್ತಿದೆ. ದತ್ತು ಪ್ರಕ್ರಿಯೆ ಸರಳೀಕರಣಕ್ಕೆ ಚಿಂತನೆ ನಡೆಸಲಾಗುತ್ತಿದೆ ಎಂದು ಸಚಿವರು ದಾನಿಗಳು ಮಕ್ಕಳಿಗೆ ಶಿಕ್ಷಣ ಕೊಡಿಸಲು ಮುಂದಾದಲ್ಲಿ ಅವಕಾಶ ನೀಡಲಾಗುತ್ತದೆ. ಜಿಲ್ಲೆಯಲ್ಲಿ 166 ಅಪೌಷ್ಠಿಕ ಮಕ್ಕಳಿದ್ದು, ಅವರಿಗೆ ಚವನಪ್ರಾಶ ನೀಡಲು ಸಲಹೆ ನೀಡಲಾಗಿದೆ. ಮಕ್ಕಳ ಸಹಾಯವಾಣಿ 1098ನ್ನು ಮತ್ತಷ್ಟು ಕ್ರೀಯಾಶೀಲವಾಗಿಸಲಾಗುತ್ತಿದೆ ಎಂದು ಹೇಳಿದ್ದಾರೆ..
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…