Featured

ಕೋವಿಡ್ ನಿಯಮ ಉಲ್ಲಂಘನೆ :ಮುಂಬೈ ಕ್ಲಬ್‌ಗೆ ಪೊಲೀಸರ ದಾಳಿ: ಕ್ರಿಕೆಟಿಗ ಸುರೇಶ್ ರೈನಾ, ಸಹಿತ ಹಲವರ ಬಂಧನ ; ಬಿಡುಗಡೆ  -Vishwanews24

ಕೋವಿಡ್ ನಿಯಮ ಉಲ್ಲಂಘನೆ :ಮುಂಬೈ ಕ್ಲಬ್‌ಗೆ ಪೊಲೀಸರ ದಾಳಿ: ಕ್ರಿಕೆಟಿಗ ಸುರೇಶ್ ರೈನಾ, ಸಹಿತ ಹಲವರ ಬಂಧನ ; ಬಿಡುಗಡೆ  -Vishwanews24

ಮುಂಬೈ,: ಮುಂಬೈಯ ಕ್ಲಬ್‌ವೊಂದಕ್ಕೆ ದಾಳಿ ಮಾಡಿರುವ ಮುಂಬೈ ಪೊಲೀಸರು ಭಾರತ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಆಟಗಾರ ಸುರೇಶ್ ರೈನಾ, ಸುಸೇನ್ ಖಾನ್ ಮತ್ತು ಗಾಯಕ ಗುರು ರಾಂಧವ ಸೇರಿದಂತೆ ಸುಮಾರು 34 ಮಂದಿಯನ್ನು ಬಂಧಿಸಿದ್ದಾರೆ.

ಕೋವಿಡ್ ನಿಯಮವನ್ನು ಗಾಳಿಗೆ ತೂರಿ ಮುಂಬೈ ಡ್ರಾಗನ್ ಫ್ಲೈ ಕ್ಲಬ್​ನಲ್ಲಿ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಇದನ್ನು ಅರಿತ ಪೊಲೀಸರು ಇಲ್ಲಿಗೆ ರೈಡ್ ಮಾಡಿದ್ದು ಸುರೇಶ್ ರೈನಾ, ಖ್ಯಾತ ಗಾಯಕ ಗುರು ರಾಂಧವ ಸೇರಿದಂತೆ ಒಟ್ಟು 34 ಜನರನ್ನು ನಿನ್ನೆ ತಡ ರಾತ್ರಿ ಬಂಧಿಸಿದ್ದಾರೆ.

ಸದ್ಯ ಸುರೇಶ್ ರೈನಾ ಜಾಮೀನಿನಲ್ಲಿ ಹೊರಬಂದಿದ್ದಾರೆ ಎಂದು ತಿಳಿದುಬಂದಿದೆ. ಪೊಲೀಸರು ಬಂಧಿಸಿರುವ 34 ಜನರಲ್ಲಿ ಏಳು ಜನ ಕ್ಲಬ್​ನಲ್ಲಿ ಕೆಲಸ ನಿರ್ವಹಿಸುತ್ತಿದ್ದವರು ಎನ್ನಲಾಗಿದೆ. ಈ ಬಗ್ಗೆ ಎಸ್​ಆರ್​​ ಪಿ ಸಹಾರ್ ಪೊಲೀಸರು ಖಚಿತ ಮಾಹಿತಿ ನೀಡಿದ್ದಾರೆ.

ಮುಂಬೈ ವಿಮಾನ ನಿಲ್ದಾಣದ ಸಮೀಪದ ಡ್ರ್ಯಾಗನ್‌ಫ್ಲೈ ಕ್ಲಬ್ ಮೇಲೆ ದಾಳಿ ನಡೆಸಿದ ಪೊಲೀಸರು, ಸುರೇಶ್ ರೈನಾ, ನಟ ಹೃತಿಕ್ ರೋಷನ್ ಪತ್ನಿ ಸುಸೇನ್ ಖಾನ್ ಮತ್ತು ಗುರು ರಾಂಧವ ಸೇರಿದಂತೆ ಅನೇಕರನ್ನು ಬಂಧಿಸಿ, ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.

ಸುರೇಶ್ ರೈನಾ ಮತ್ತು ಇತರರು ಸೇರಿದಂತೆ 34 ಜನರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 188, 269, 34ರ ಅಡಿ, ಬಾಂಬೆ ಪೊಲೀಸ್ ಕಾಯ್ದೆ ಮತ್ತು ಸಾಂಕ್ರಾಮಿಕ ರೋಗ ಕಾಯ್ದೆಗಳ ಅಡಿ ಪ್ರಕರಣಗಳನ್ನು ದಾಖಲಿಸಲಾಗಿದೆ.

ಡ್ರ್ಯಾಗನ್‌ಫ್ಲೈ ಕ್ಲಬ್‌ನಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸುತ್ತಿರಲಿಲ್ಲ ಮತ್ತು ಕ್ಲಬ್ ನಡೆಸಲು ನೀಡಲಾಗಿದ್ದ ಸಮಯದ ಗಡುವನ್ನು ಮೀರಿ ತೆರೆಯಲಾಗಿತ್ತು ಎಂದು ಸಹಾರ್ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

 

Vishwa News 24

Recent Posts

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ – vishwanews24

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್…

16 minutes ago

ಸುಳ್ಯ: ಮನೆಯ ಅಂಗಳಕ್ಕೆ ಮುರಿದು ಬಿದ್ದ ತೆಂಗಿನ ಮರ; ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ – vishwanews24

ಸುಳ್ಯ: ಮನೆಯ ಅಂಗಳಕ್ಕೆ ಮುರಿದು ಬಿದ್ದ ತೆಂಗಿನ ಮರ; ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ ಸುಳ್ಯ: ಮನೆಯ ಮುಂಭಾಗದಲ್ಲಿದ್ದ ತೆಂಗಿನ…

26 minutes ago

ಮಂಗಳೂರು: ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ – vishwanews24

ಮಂಗಳೂರು: ಸೋಮೇಶ್ವರದಲ್ಲಿ 16 ವರ್ಷದ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಂಗಳೂರು : 16 ವರ್ಷದ ಪ್ರಥಮ ವರ್ಷದ ಪಿಯುಸಿ (ಪಿಯುಸಿ)…

37 minutes ago

ಇನ್ಮುಂದೆ ವೈದ್ಯರ ಶಿಫಾರಸು ಇಲ್ಲದೇ ಮೆಡಿಕಲ್‌ನಲ್ಲಿ ಯಾವುದೇ ಸಿರಪ್‌ಗಳನ್ನು ಖರೀದಿಸುವಂತಿಲ್ಲ : ಕೇಂದ್ರ ಆದೇಶ – vishwanews24

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ: ಕೇಂದ್ರ ಆದೇಶ ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ…

48 minutes ago

ಪಟ್ಲ ರೂರಲ್ ಎಜುಕೇಶನ್ ಸೊಸೈಟಿಯ ಸುವರ್ಣ ಮಹೋತ್ಸವಕ್ಕೆ ಚಾಲನೆ; ವನ ಮಹೋತ್ಸವ ಕಾರ್ಯಕ್ರಮ – vishwanews24

ಪಟ್ಲ ರೂರಲ್ ಎಜುಕೇಶನ್ ಸೊಸೈಟಿಯ ಸುವರ್ಣ ಮಹೋತ್ಸವಕ್ಕೆ ಚಾಲನೆ; ವನ ಮಹೋತ್ಸವ ಕಾರ್ಯಕ್ರಮ ಪಟ್ಲ: ರೂರಲ್ ಎಜುಕೇಶನ್ ಸೊಸೈಟಿ (ರಿ.),…

58 minutes ago

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

20 hours ago