ಮುಂಬೈ,: ಮುಂಬೈಯ ಕ್ಲಬ್‌ವೊಂದಕ್ಕೆ ದಾಳಿ ಮಾಡಿರುವ ಮುಂಬೈ ಪೊಲೀಸರು ಭಾರತ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಆಟಗಾರ ಸುರೇಶ್ ರೈನಾ, ಸುಸೇನ್ ಖಾನ್ ಮತ್ತು ಗಾಯಕ ಗುರು ರಾಂಧವ ಸೇರಿದಂತೆ ಸುಮಾರು 34 ಮಂದಿಯನ್ನು ಬಂಧಿಸಿದ್ದಾರೆ.
ಕೋವಿಡ್ ನಿಯಮವನ್ನು ಗಾಳಿಗೆ ತೂರಿ ಮುಂಬೈ ಡ್ರಾಗನ್ ಫ್ಲೈ ಕ್ಲಬ್‌ನಲ್ಲಿ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಇದನ್ನು ಅರಿತ ಪೊಲೀಸರು ಇಲ್ಲಿಗೆ ರೈಡ್ ಮಾಡಿದ್ದು ಸುರೇಶ್ ರೈನಾ, ಖ್ಯಾತ ಗಾಯಕ ಗುರು ರಾಂಧವ ಸೇರಿದಂತೆ ಒಟ್ಟು 34 ಜನರನ್ನು ನಿನ್ನೆ ತಡ ರಾತ್ರಿ ಬಂಧಿಸಿದ್ದಾರೆ.
ಸದ್ಯ ಸುರೇಶ್ ರೈನಾ ಜಾಮೀನಿನಲ್ಲಿ ಹೊರಬಂದಿದ್ದಾರೆ ಎಂದು ತಿಳಿದುಬಂದಿದೆ. ಪೊಲೀಸರು ಬಂಧಿಸಿರುವ 34 ಜನರಲ್ಲಿ ಏಳು ಜನ ಕ್ಲಬ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದವರು ಎನ್ನಲಾಗಿದೆ. ಈ ಬಗ್ಗೆ ಎಸ್ಆರ್ ಪಿ ಸಹಾರ್ ಪೊಲೀಸರು ಖಚಿತ ಮಾಹಿತಿ ನೀಡಿದ್ದಾರೆ.
ಮುಂಬೈ ವಿಮಾನ ನಿಲ್ದಾಣದ ಸಮೀಪದ ಡ್ರ್ಯಾಗನ್‌ಫ್ಲೈ ಕ್ಲಬ್ ಮೇಲೆ ದಾಳಿ ನಡೆಸಿದ ಪೊಲೀಸರು, ಸುರೇಶ್ ರೈನಾ, ನಟ ಹೃತಿಕ್ ರೋಷನ್ ಪತ್ನಿ ಸುಸೇನ್ ಖಾನ್ ಮತ್ತು ಗುರು ರಾಂಧವ ಸೇರಿದಂತೆ ಅನೇಕರನ್ನು ಬಂಧಿಸಿ, ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.
ಸುರೇಶ್ ರೈನಾ ಮತ್ತು ಇತರರು ಸೇರಿದಂತೆ 34 ಜನರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 188, 269, 34ರ ಅಡಿ, ಬಾಂಬೆ ಪೊಲೀಸ್ ಕಾಯ್ದೆ ಮತ್ತು ಸಾಂಕ್ರಾಮಿಕ ರೋಗ ಕಾಯ್ದೆಗಳ ಅಡಿ ಪ್ರಕರಣಗಳನ್ನು ದಾಖಲಿಸಲಾಗಿದೆ.
ಡ್ರ್ಯಾಗನ್‌ಫ್ಲೈ ಕ್ಲಬ್‌ನಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸುತ್ತಿರಲಿಲ್ಲ ಮತ್ತು ಕ್ಲಬ್ ನಡೆಸಲು ನೀಡಲಾಗಿದ್ದ ಸಮಯದ ಗಡುವನ್ನು ಮೀರಿ ತೆರೆಯಲಾಗಿತ್ತು ಎಂದು ಸಹಾರ್ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…