Featured

ಕೋವಿಡ್ ನ ಹೊಸ ರೂಪಾಂತರಿ ಒಮಿಕ್ರಾನ್ : ಜಿಲ್ಲೆಯಲ್ಲಿ ಸಕಲ ಮುಂಜಾಗ್ರತಾ ಕ್ರಮ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. – Vishwanews24

ಕೋವಿಡ್ ನ ಹೊಸ ರೂಪಾಂತರಿ ಒಮಿಕ್ರಾನ್ : ಜಿಲ್ಲೆಯಲ್ಲಿ ಸಕಲ ಮುಂಜಾಗ್ರತಾ ಕ್ರಮ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. – Vishwanews24

ಉಡುಪಿ : ದಕ್ಷಿಣ ಆಫ್ರಿಕಾ ಸೇರಿದಂತೆ ವಿಶ್ವದ ಕೆಲವು ದೇಶಗಳಲ್ಲಿ ಕೋವಿಡ್ ನ ಹೊಸ ರೂಪಾಂತರಿ ತಳಿ ಒಮಿಕ್ರಾನ್ ಪ್ರಸರಣದ ಆತಂಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿರುವುದರಿಂದ ಸರ್ವೇಕ್ಷಣ ಚಟುವಟಿಕೆಗಳನ್ನು ತೀವ್ರಗೊಳಿಸುವ ನಿಟ್ಟಿನಲ್ಲಿ ದೈನಂದಿನ ಕೋವಿಡ್ ಪರೀಕ್ಷೆಯ ಗುರಿಯನ್ನು ಹಚ್ಚಿಸಿ ಕರ್ನಾಟಕ ಸರ್ಕಾರ ಸುತ್ತೋಲೆಯನ್ನು ಹೊರಡಿಸಿದೆ. ಅದರಂತೆ ಜಿಲ್ಲೆಯಲ್ಲಿ ಕೋವಿಡ್ ನ ಹೊಸ ರೂಪಾಂತರಿ ಪ್ರಸರಣ ತಡೆಗೆ ಅಗತ್ಯ ವಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಸರ್ಕಾರದ ಹೊಸ ಮಾರ್ಗಸೂಚಿಯಂತೆ ಉಡುಪಿ ಜಿಲ್ಲೆಯಲ್ಲಿ ದೈನಂದಿನ ಕೋವಿಡ್ ಪರೀಕ್ಷೆ ಗುರಿ 3000 ದಿಂದ 4000 ಹೆಚ್ಚಿಸಿ ನಿಗದಿಪಡಿಸಲಾಗಿದೆ. ರೋಗಲಕ್ಷಣ ಹೊಂದಿರುವವರು ili/sari ಪ್ರಕರಣಗಳು, ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಂಪರ್ಕ ಹೊಂದಿರುವವರು ಮತ್ತು ಹೈ ರಿಸ್ಕ್ ಹೊಂದಿರುವ ಗುಂಪಿನ ವ್ಯಕ್ತಿಗಳಿಗೆ ಕೋವಿಡ್ ಪರೀಕ್ಷೆ ಮಾಡುವ ಪ್ರಕ್ರಿಯೆಯನ್ನು ಮುಂದುವರಿಸುವುದು ಮತ್ತು ಪರೀಕ್ಷಾ ಪ್ರಮಾಣವನ್ನು ಹೆಚ್ಚಿಸಲಾಗುವುದು.

ಈ ಕೆಳಕಂಡ ಗುಂಪಿನವರಿಗೆ ಪಾಕ್ಷಿಕವಾಗಿ Random ಪರೀಕ್ಷೆ ನಡೆಸಲಾಗುತ್ತದೆ. ಪ್ರೌಢಶಾಲೆಗಳು ಮತ್ತು ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಬೋಧಕ ಸಿಬ್ಬಂದಿ. ಹೋಟೆಲ್ ಗಳು ಮತ್ತು ರೆಸ್ಟೋರೆಂಟ್ ಗಳ ಸಿಬ್ಬಂದಿ. ಮಾಲ್ ಗಳಲ್ಲಿರುವ ಅಂಗಡಿ ಮುಂಗಟ್ಟುಗಳ ವರ್ತಕರು. ಕ್ಯಾಟರಿಂಗ್ ಸಿಬ್ಬಂದಿ ಮತ್ತು ಮನೆಮನೆಗಳಿಗೆ ವಿತರಣೆ ಮಾಡುವ ಸಿಬ್ಬಂದಿ. ಕಾರ್ಖಾನೆಗಳ ಸಿಬ್ಬಂದಿ. ಎಲ್ಲಾ ಕಚೇರಿಗಳ ಸಿಬ್ಬಂದಿ. ಪಬ್ ಮತ್ತು ಬಾರ್ ಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ. ಕೆಲವೊಂದು ಸಂದರ್ಭಗಳಲ್ಲಿ ಸಾರ್ವಜನಿಕರು ಗುಂಪು ಸೇರಿದಾಗ.

ನಿಗದಿಪಡಿಸಿದ ಗುರಿಯಲ್ಲಿ ಶೇಕಡ 50 ರಷ್ಟು ಜಿಲ್ಲಾ ಕೇಂದ್ರದಲ್ಲಿ ಮತ್ತು ಉಳಿದ 50 ಗ್ರಾಮೀಣ ಪ್ರದೇಶಗಳಲ್ಲಿ ಪರೀಕ್ಷೆ ಮಾಡುವುದು. ಪರೀಕ್ಷೆಯಲ್ಲಿ ಶೇಕಡ 10 ರಷ್ಟು ಮಕ್ಕಳನ್ನು ಪರೀಕ್ಷೆಗೆ ಒಳಪಡಿಸುವುದು. ಐಸಿಎಂಆರ್ ಮಾರ್ಗಸೂಚಿ ಪ್ರಕಾರ ಎಲ್ಲಾ ರೋಗಲಕ್ಷಣ ಸಹಿತ ಪ್ರಕರಣಗಳನ್ನು ಮೊದಲಿಗೆ Rat ಪರೀಕ್ಷೆಗೆ ಒಳಪಡಿಸುವುದು, ಫಲಿತಾಂಶ ನೆಗಟಿವ್ ಬಂದಲ್ಲಿ ಆರ್ಟಿಪಿಸಿಆರ್ ಪರೀಕ್ಷೆ ಮಾಡುವುದು. ರೋಗಲಕ್ಷಣ ಇಲ್ಲದವರಿಗೆ Rat ಪರೀಕ್ಷೆ ಮಾಡಬಾರದು .

ದಕ್ಷಿಣ ಆಫ್ರಿಕಾ, ಬೋಟ್ಸುವಾನ ಮತ್ತು ಹಾಂಕಾಂಗ್ ದೇಶಗಳಲ್ಲಿ ಕೋವಿಡ್ ನ ರೂಪಾಂತರಿ ಪ್ರಭೇದ ಪತ್ತೆಯಾದ ಹಿನ್ನೆಲೆಯಲ್ಲಿ ವಿದೇಶಿ ಪ್ರಯಾಣಿಕರನ್ನು ತಪಾಸಣೆ ಪರೀಕ್ಷೆಗೊಳಪಡಿಸುವ ನಿಟ್ಟಿನಲ್ಲಿ ಕೆಳಕಂಡ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳುವಂತೆ ಕರ್ನಾಟಕ ಸರ್ಕಾರ ಸುತ್ತೋಲೆ ಹೊರಡಿಸಿದೆ.

ದಕ್ಷಿಣ ಆಫ್ರಿಕಾ, ಬೋಟ್ಸುವಾನ ಮತ್ತು ಹಾಂಕಾಂಗ್ ನಿಂದ ಬರುವ ಪ್ರಯಾಣಿಕರಿಗೆ ಕಡ್ಡಾಯವಾಗಿ RTPCR ಪರೀಕ್ಷೆ ಮಾಡಬೇಕು ಮತ್ತು ನೆಗೆಟಿವ್ ವರದಿ ಬಂದ ನಂತರವೇ ವಿಮಾನ ನಿಲ್ದಾಣದಿಂದ ನಿರ್ಗಮಿಸಲು ಅನುಮತಿಸಬೇಕು. ಈ ಮೂರು ದೇಶಗಳಿಂದ ಕಳೆದ 15 ದಿನಗಳಿಂದ ಈಚೆಗೆ ಬಂದಿರುವ ಪ್ರಯಾಣಿಕರನ್ನು ಪತ್ತೆ ಹಚ್ಚಿ RTPCR ಪರೀಕ್ಷೆಗೆ ಒಳಪಡಿಸಬೇಕು. ಪ್ರಯಾಣಿಕರು ಕೋವಿಡ್ ಸೋಂಕಿತ ಆಗಿದ್ದಲ್ಲಿ ಅವರನ್ನು 10 ದಿನಗಳ ಕಾಲ ಕಡ್ಡಾಯ ಸಾಂಸ್ಥಿಕ ಪ್ರತ್ಯೇಕತೆಗೆ ಒಳಪಡಿಸಬೇಕು.ಪಾಸಿಟಿವ್ ಬಂದಿರುವ ಪರೀಕ್ಷಾ ಮಾದರಿಗಳನ್ನು ಕಡ್ಡಾಯವಾಗಿ ತಕ್ಷಣ ಜಿನೋಮಿಕ್ ಸಿಕ್ವೆನ್ಸಿಂಗ್ ಪರೀಕ್ಷೆಗೆ ಒಳಪಡಿಸಬೇಕು. ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರು ಪರೀಕ್ಷೆಗೆ ಒಳಪಡಬೇಕು.

ಜಿಲ್ಲೆಯಲ್ಲಿ ಈ ಮೇಲ್ಕಂಡ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಪ್ರಥಮ ಆದ್ಯತೆ ಎಂದು ಪರಿಗಣಿಸಿ , ಆರೋಗ್ಯ ಇಲಾಖೆ ಮತ್ತು ಇತರ ಪ್ರಮುಖ ಇಲಾಖೆಗಳ ಸಹಕಾರ ಮತ್ತು ಸಮನ್ವಯದೊಂದಿಗೆ ಹಾಗೂ ಜಿಲ್ಲಾಡಳಿತದ ಸೂಕ್ತ ಮಾರ್ಗದರ್ಶನ ಮತ್ತು ನಿಗಾವಣೆಯಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ.

Vishwa News 24

Recent Posts

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

15 minutes ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

35 minutes ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

40 minutes ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

51 minutes ago

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

15 hours ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

21 hours ago