ಬೆಂಗಳೂರು: ಕೋವಿಡ್ ಪ್ರಕರಣಗಳ ಹೆಚ್ಚಳ ಹಿನ್ನಲೆಯಲ್ಲಿ ಸಾರ್ವಜನಿಕ ಪ್ರದೇಶಗಳಲ್ಲಿ ವಾಹನಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಪ್ರಸ್ತುತ, ರಾಜ್ಯದಲ್ಲಿ ಕಳೆದ 10 ದಿನಗಳಂದ ದೈನಂದಿನ ಕೋವಿಡ್ 19 ಪ್ರಕರಣಗಳ ಸಂಖ್ಯೆಯಲ್ಲ ನಿಧಾನಗತಿಯ ಏರಿಕೆಯನ್ನು ಗಮನಿಸಲಾಗಿದ್ದು, ದಿನಾಂಕ: 9,5,2022 ರಂದು 471 ಪ್ರಕರಣಗಳು ಹಾಗು ಪಾಸಿಟಿವ್ ಪ್ರಮಾಣ 2,14, ವರದಿಯಾಗಿದೆ. ಕೋವಿಡ್ 19 ನ ಮೂರನೇ ಅಲೆಯ ನಂತರದ ಅವಧಿಯ ಏರಿಕೆ ಇದಾಗಿದ್ದು, ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವುದು ಅಗತ್ಯವಾಗಿದೆ.
1. ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದನ್ನು ಉಲ್ಲೇಖ (3) ರ ಅನ್ವಯ ಕಡ್ಡಾಯಗೊಳಸಲಾಗಿದ್ದು, ಈ ಕ್ರಮವನ್ನು ಜಾರಿಗೊಳಸಲು ಮಾರ್ಷಲ್/ ಪೋಲೀಸ್ ಸಿಬ್ಬಂದಿಗಳ ಸಹಾಯವನ್ನು ಪಡೆಯುವುದು,
2. ಮುಚ್ಚಿದ ಸಂರಚನೆಯನ್ನು Closed areas) ಹೊಂದಿದ ಸ್ಥಳಗಳಾದ ಶಾಪಿಂಗ್ ಮಾಲ್‌ಗಳು, ರೆಸ್ಟೋರೆಂಟ್‌ಗಳು, ಪಬ್‌ಗಳು, ಕಫೆಟೇರಿಯಾ/ ಹೊಟೇಲ್‌ಗಳು, ಶೈಕ್ಷಣಿಕ ಸಂಸ್ಥೆಗಳು, ಹಾಸ್ಟೆಲ್‌ಗಳು, ಕಛೇರಿಗಳು, ಕಾರ್ಖಾನೆ ಇತ್ಯಾದಿ ಪ್ರದೇಶಗಳು ಸಿಬ್ಬಂದಿಗಳು ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸುವುದು ಹಾಗೂ ಮಾಸ್ಕ್ ಧರಿಸಿ ಬರುವರಿಗೆ ಮಾತ್ರವೇ ಪ್ರವೇಶ ನೀಡುವುದನ್ನು ಖಚಿತಪಡಿಸಿಕೊಳ್ಳುವುದು ಆಯಾ ಸಂಸ್ಥೆಯ ಮಾಲಕರ / ಆಡಳತಗಳ ಜವಾಬ್ದಾರಿಯಾಗಿರುತ್ತದೆ.
3. ಸ್ವಂತ ವಾಹನಗಳು ಹಾಗೂ ಸಾರ್ವಜನಿಕ ಸಾರಿಗೆ ವಾಹನಗಳಲ್ಲ ( ಬಸ್ ಹಾಗೂ ರೈಲು) ಪ್ರಯಾಣಿಸುವ ಸಂದರ್ಭದಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸುವುದು ಕಡ್ಡಾಯವಾಗಿರುತ್ತದೆ.
4. ILI & SARI ಲಕ್ಷಣಗಳನ್ನು ಹೊಂದಿದವರು, ಹೈರಿಸ್ಕ್ ಗುಂಪಿನವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರನ್ನು ಆದ್ಯತೆಯ ಮೇಲೆ ಪರೀಕ್ಷೆಗೆ ಒಳಪಡುವುದು ಹಾಗೂ ಫಲಿತಾಂಶ ಲಭ್ಯವಾಗುವವರೆಗೂ ಮನೆಯಲ್ಲಿಯೇ ಪ್ರತ್ಯೇಕವಾಗಿರುವುದು.
5. ಅರ್ಹ ಜನರೆಲ್ಲರೂ Precautionary dose ಸೇರಿದಂತೆ, ಕೋವಿಡ್ 19 ಲಸಿಕೆಯನ್ನು ಪಡೆಯುವುದು.
ಕೋವಿಡ್ 19, ಮುಂಜಾಗ್ರತಾ ಕ್ರಮವಾಗಿ ಮೇಲೆ ತಿಳಿಸಿದ ಅಂಶಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಸುವ ನಿಟ್ಟಿನಲ್ಲಿ ಅಧಿಕಾರಿಗಳು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…