Featured

ಕೋವಿಡ್‌ ಪ್ರಕರಣ ಹೆಚ್ಚಳ : ಸಾರ್ವಜನಿಕ ಪ್ರದೇಶಗಳಲ್ಲಿ ವಾಹನಗಳಲ್ಲಿ ಮಾಸ್ಕ್‌ ಧರಿಸುವುದು ಕಡ್ಡಾಯ : ರಾಜ್ಯ ಸರಕಾರ ಆದೇಶ – Vishwnaews24

ಕೋವಿಡ್‌ ಪ್ರಕರಣ ಹೆಚ್ಚಳ : ಸಾರ್ವಜನಿಕ ಪ್ರದೇಶಗಳಲ್ಲಿ ವಾಹನಗಳಲ್ಲಿ ಮಾಸ್ಕ್‌ ಧರಿಸುವುದು ಕಡ್ಡಾಯ : ರಾಜ್ಯ ಸರಕಾರ ಆದೇಶ

ಬೆಂಗಳೂರು: ಕೋವಿಡ್‌ ಪ್ರಕರಣಗಳ ಹೆಚ್ಚಳ ಹಿನ್ನಲೆಯಲ್ಲಿ ಸಾರ್ವಜನಿಕ ಪ್ರದೇಶಗಳಲ್ಲಿ ವಾಹನಗಳಲ್ಲಿ ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರಕಾರ  ಆದೇಶ ಹೊರಡಿಸಿದೆ.

ಪ್ರಸ್ತುತ, ರಾಜ್ಯದಲ್ಲಿ ಕಳೆದ 10 ದಿನಗಳಂದ ದೈನಂದಿನ ಕೋವಿಡ್ 19 ಪ್ರಕರಣಗಳ ಸಂಖ್ಯೆಯಲ್ಲ ನಿಧಾನಗತಿಯ ಏರಿಕೆಯನ್ನು ಗಮನಿಸಲಾಗಿದ್ದು, ದಿನಾಂಕ: 9,5,2022 ರಂದು 471 ಪ್ರಕರಣಗಳು ಹಾಗು ಪಾಸಿಟಿವ್ ಪ್ರಮಾಣ 2,14, ವರದಿಯಾಗಿದೆ. ಕೋವಿಡ್ 19 ನ ಮೂರನೇ ಅಲೆಯ ನಂತರದ ಅವಧಿಯ ಏರಿಕೆ ಇದಾಗಿದ್ದು, ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವುದು ಅಗತ್ಯವಾಗಿದೆ.

1. ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್‌ ಧರಿಸುವುದನ್ನು ಉಲ್ಲೇಖ (3) ರ ಅನ್ವಯ ಕಡ್ಡಾಯಗೊಳಸಲಾಗಿದ್ದು, ಈ ಕ್ರಮವನ್ನು ಜಾರಿಗೊಳಸಲು ಮಾರ್ಷಲ್/ ಪೋಲೀಸ್ ಸಿಬ್ಬಂದಿಗಳ ಸಹಾಯವನ್ನು ಪಡೆಯುವುದು,

2. ಮುಚ್ಚಿದ ಸಂರಚನೆಯನ್ನು Closed areas) ಹೊಂದಿದ ಸ್ಥಳಗಳಾದ ಶಾಪಿಂಗ್ ಮಾಲ್‌ಗಳು, ರೆಸ್ಟೋರೆಂಟ್‌ಗಳು, ಪಬ್‌ಗಳು, ಕಫೆಟೇರಿಯಾ/ ಹೊಟೇಲ್‌ಗಳು, ಶೈಕ್ಷಣಿಕ ಸಂಸ್ಥೆಗಳು, ಹಾಸ್ಟೆಲ್‌ಗಳು, ಕಛೇರಿಗಳು, ಕಾರ್ಖಾನೆ ಇತ್ಯಾದಿ ಪ್ರದೇಶಗಳು ಸಿಬ್ಬಂದಿಗಳು ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸುವುದು ಹಾಗೂ ಮಾಸ್ಕ್ ಧರಿಸಿ ಬರುವರಿಗೆ ಮಾತ್ರವೇ ಪ್ರವೇಶ ನೀಡುವುದನ್ನು ಖಚಿತಪಡಿಸಿಕೊಳ್ಳುವುದು ಆಯಾ ಸಂಸ್ಥೆಯ ಮಾಲಕರ / ಆಡಳತಗಳ ಜವಾಬ್ದಾರಿಯಾಗಿರುತ್ತದೆ.

3. ಸ್ವಂತ ವಾಹನಗಳು ಹಾಗೂ ಸಾರ್ವಜನಿಕ ಸಾರಿಗೆ ವಾಹನಗಳಲ್ಲ ( ಬಸ್ ಹಾಗೂ ರೈಲು) ಪ್ರಯಾಣಿಸುವ ಸಂದರ್ಭದಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸುವುದು ಕಡ್ಡಾಯವಾಗಿರುತ್ತದೆ.

4. ILI & SARI ಲಕ್ಷಣಗಳನ್ನು ಹೊಂದಿದವರು, ಹೈರಿಸ್ಕ್ ಗುಂಪಿನವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರನ್ನು ಆದ್ಯತೆಯ ಮೇಲೆ ಪರೀಕ್ಷೆಗೆ ಒಳಪಡುವುದು ಹಾಗೂ ಫಲಿತಾಂಶ ಲಭ್ಯವಾಗುವವರೆಗೂ ಮನೆಯಲ್ಲಿಯೇ ಪ್ರತ್ಯೇಕವಾಗಿರುವುದು.

5. ಅರ್ಹ ಜನರೆಲ್ಲರೂ Precautionary dose ಸೇರಿದಂತೆ, ಕೋವಿಡ್ 19 ಲಸಿಕೆಯನ್ನು ಪಡೆಯುವುದು.

ಕೋವಿಡ್ 19, ಮುಂಜಾಗ್ರತಾ ಕ್ರಮವಾಗಿ ಮೇಲೆ ತಿಳಿಸಿದ ಅಂಶಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಸುವ ನಿಟ್ಟಿನಲ್ಲಿ ಅಧಿಕಾರಿಗಳು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದೆ.

 

Vishwa News 24

Recent Posts

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

27 minutes ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

41 minutes ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

47 minutes ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

23 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

24 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 day ago