Featured

ಕೋವಿಡ್ ಮಾರ್ಗಸೂಚಿಗಳೊಂದಿಗೆ ಅ. 7ರಿಂದ ಅ.16ರವರೆಗೆ ಮಂಗಳೂರು ದಸರ -Vishwanews24

  • ಕೋವಿಡ್ ಮಾರ್ಗಸೂಚಿಗಳೊಂದಿಗೆ ಅ. 7ರಿಂದ ಅ.16ರವರೆಗೆ ಮಂಗಳೂರು ಗೋಕರ್ಣನಾಥ ಕ್ಷೇತ್ರದ ದಸರ

  • ನಮ್ಮ ದಸರಾ ನಮ್ಮ ಸುರಕ್ಷೆ ಎಂಬ ಘೋಷವಾಕ್ಯದಡಿ ಈ ಬಾರಿಯ ದಸರಾ ಕಾರ್ಯಕ್ರಮ

  • ದಸರಾ ಮೆರವಣಿಗೆ ಹೊರತುಪಡಿಸಿ ಉಳಿದೆಲ್ಲಾ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ

ಮಂಗಳೂರು,: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವತಿಯಿಂದ ನಡೆಯುವ ಮಂಗಳೂರು ದಸರಾ ಈ ಬಾರಿಯೂ ಕಳೆದ ಬಾರಿಯಂತೆ ಕೋವಿಡ್ ಮಾರ್ಗಸೂಚಿಗಳೊಂದಿಗೆ ಅ. 7ರಿಂದ ಅ.16ರವರೆಗೆ ನಡೆಸಲು ಸಿದ್ಧತೆ ನಡೆಸಲಾಗಿದೆ.

ಕ್ಷೇತ್ರದ ನವೀಕರಣದ ರುವಾರಿ ಜನಾರ್ದನ ಪೂಜಾರಿಯವರ ಮಾರ್ಗದರ್ಶದಂತೆ, ”ನಮ್ಮ ದಸರಾ ನಮ್ಮ ಸುರಕ್ಷೆ” ಎಂಬ ಘೋಷವಾಕ್ಯದಡಿ ಈ ಬಾರಿಯ ದಸರಾ ಕಾರ್ಯಕ್ರಮ ನಡೆಯಲಿದ್ದು, ಶಾರದಾ ಮೂರ್ತಿಯ ವಿಸರ್ಜನೆಯ ದಿನದಂದು ದಸರಾ ಮೆರವಣಿಗೆ ಹೊರತುಪಡಿಸಿ ಉಳಿದೆಲ್ಲಾ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಕ್ಷೇತ್ರಾಡಳಿತ ಮಂಡಳಿಯ ಅಧ್ಯಕ್ಷ ಎಚ್.ಎಸ್. ಸಾಯಿರಾಂ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು.

ಸರಕಾರದ ಆದೇಶದ ಹಿನ್ನೆಲೆಯಲ್ಲಿ ಈ ಬಾರಿಯೂ ದಸರಾವನ್ನು ಮಾರ್ಗಸೂಚಿಗಳೊಂದಿಗೆ ನಡೆಸುವಂತೆ ಜಿಲ್ಲಾಧಿಕಾರಿಯವರನ್ನು ಭೇಟಿಯಾದ ಕ್ಷೇತ್ರಾಡಳಿತ ಮಂಡಳಿಯ ಸದಸ್ಯರಿಗೆ ಸಲಹೆ ನೀಡಿದ್ದಾರೆ. ಆ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ನವದುರ್ಗೆಯರ ಸ್ಥಾಪನೆ, ಅನ್ನಸಂತರ್ಪಣೆ ಹೊರತಾಗಿ ಕಳೆದ ಬಾರಿಯಂತೆ ಪ್ರಸಾದ ರೂಪದಲ್ಲಿ ಅನ್ನ ವಿತರಣೆ ಹಾಗೂ ರಾಜಬೀದಿಗಳ ಅಲಂಕಾರ ವಿಶೇಷವಾಗಿ ನಡೆಯಲಿದೆ ಎಂದು ಅವರು ಹೇಳಿದರು.

ಲಡಾಖ್​ನಲ್ಲಿ ಖಾದಿಯಿಂದ ತಯಾರಾದ ಅತಿ ದೊಡ್ಡ ಭಾರತ ಧ್ವಜ ಅನಾವರಣ -Vishwanews24

ಅ.7ರಂದು ಮಹಾನವಮಿ ಉತ್ಸವ ಆರಂಭದೊಂದಿಗೆ ಕ್ಷೇತ್ರದಲ್ಲಿ ಬೆಳಗ್ಗೆ 9 ಗಂಟೆಗೆ ಗುರುಪ್ರಾರ್ಥನೆ 11.30ಕ್ಕೆ ಕಲಸಪ್ರತಿಷ್ಠೆ ಹಾಗೂ 11.40ಕ್ಕೆ ನವದುರ್ಗೆಯರ ಮತ್ತು ಶಾರದಾ ಪ್ರತಿಷ್ಠೆ ನಡೆಯಲಿದೆ. ನಿತ್ಯ ವವಿಶೇಷ ಪೂಜೆಗಳು ನೆರವೇರಲಿದೆ. ಅ. 15ರಂದು ಮಹಾಪೂಜೆ ನಡೆದು ರಾತ್ರಿ 8ರಿಂದ ಕ್ಷೇತ್ರದೊಳಗೆ ಸರಳ ಮೆರವಣಿಗೆಯೊಂದಿಗೆ ಶಾರದಾ ವಿಸರ್ಜನೆ ನಡೆಸಲಾಗುವುದು ಎಂದು ಅವರು ವಿವರಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮ ನೇರ ಪ್ರಸಾರ

ಈ ಬಾರಿಯೂ ಕ್ಷೇತ್ರದಲ್ಲಿ ದಸರಾ ಅಂಗಾಗಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳ ವರ್ಚುವಲ್ ಪ್ರಸಾರ, ಸ್ಥಳೀಯ ಟಿವಿ ಚಾನೆಲ್‌ಗಳ ಮೂಲಕ ನೇರ ಪ್ರಸಾರ ಮೂಲಕ ಜನರಿಗೆ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ಕ್ಷೇತ್ರಾಡಳಿತ ಮಂಡಳಿಯ ಕೋಶಾಧಿಕಾರಿ ಪದ್ಮರಾಜ್ ಆರ್. ತಿಳಿಸಿದರು.

ರಾಜಬೀದಿಯ ವಿದ್ಯುದ್ದೀಪಾಲಂಕಾರಕ್ಕೆ ವ್ಯವಸ್ಥೆ: ಮನಪಾಕ್ಕೆ ಕೃತಜ್ಞತೆ

ಮಂಗಳೂರು ದಸರಾ ಮಹೋತ್ಸವದ ಅಂಗವಾಗಿ ನಗರದ ರಾಜಬೀದಿಯಲ್ಲಿ ವಿದ್ಯುದ್ದೀಪಾಲಂಕಾರಕ್ಕೆ ಮಂಗಳೂರು ಮಹಾನಗರ ಪಾಲಿಕೆಯಿಂದ ವ್ಯವಸ್ಥೆಗೆ ಪಾಲಿಕೆಯ ಸರ್ವಸದಸ್ಯರೂ ಸಮ್ಮತಿಸಿರುವುದು ಹಾಗೂ ಇದಕ್ಕೆ ಸಹಕರಿಸಿರುವ ಜನಪ್ರತಿನಿಧಿಗಳಿಗೆ ಕೃತಜ್ಞತೆ ಸಲ್ಲಿಸುವುದಾಗಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ಸದಸ್ಯರಾದ ಹರಿಕೃಷ್ಣ ಬಂಟ್ವಾಳ ತಿಳಿಸಿದರು.

ಗೋಷ್ಠಿಯಲ್ಲಿ ಕ್ಷೇತ್ರಾಡಳಿತ ಮಂಡಳಿಯ ಉಪಾಧ್ಯಕ್ಷೆ ಉರ್ಮಿಳಾ ರಮೇಶ್, ಕಾರ್ಯದರ್ಶಿ ಮಾಧವ ಸುವರ್ಣ, ಸದಸ್ಯರಾದ ರವಿಶಂಕರ ಮಿಜಾರು, ಮಹೇಶ್ಚಂದ್ರ, ಎಂ. ಶೇಕರ್ ಪೂಜಾರಿ, ಸಂತೋಷ್ ಕುಮಾರ್, ಜಗದೀಪ್ ಡಿ. ಸುವರ್ಣ, ದೇವಸ್ಥಾನ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದೇವೇಂದ್ರ ಪೂಜಾರಿ, ಡಾ. ಬಿ.ಜಿ. ಸುವರ್ಣ, ಸದಸ್ಯರಾದ ರಾಧಾಕೃಷ್ಣ, ಜತಿನ್ ಅತ್ತಾವರ, ಲೀಲಾಕ್ಷ ಕರ್ಕೇರ, ಚಂದನ್‌ದಾಸ್, ಗೌರವಿ ಪಿ.ಕೆ., ಕಿಶೋರ್ ದಂಡಕೇರಿ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago