ಹೊಸದಿಲ್ಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಕೋವಿಡ್ ಲಸಿಕೆಯ ಎರಡನೇ ಡೋಸ್ ಪಡೆದರು. ದಿಲ್ಲಿಯ ಏಮ್ಸ್ ನಲ್ಲಿಂದು ಪ್ರಧಾನಿ ಮೋದಿ ಕೋವಿಡ್ ಲಸಿಕೆ ಪಡೆದಿದ್ದಾರೆ.
ಮಾರ್ಚ್ 1ರಂದು ನರೇಂದ್ರ ಮೋದಿಯವರು ಮೊದಲ ಡೋಸ್ ಲಸಿಕೆ ಪಡೆದಿದ್ದರು. ಪುದುಚೇರಿಯ ಪಿ. ನಿವೇದ ಮತ್ತು ಪಂಜಾಬ್ನ ನಿಶಾ ಶರ್ಮಾ ಎಂಬ ಇಬ್ಬರು ನರ್ಸ್ಗಳು ಪ್ರಧಾನಿ ಮೋದಿ ಅವರಿಗೆ ಕೋವಿಡ್ ಲಸಿಕೆಯನ್ನು ನೀಡಿದರು.
ಲಸಿಕೆ ಪಡೆದ ಬಳಿಕ ಟ್ವೀಟ್ ಮಾಡಿದ ಪ್ರಧಾನಿ ಮೋದಿ, “ಏಮ್ಸ್ ನಲ್ಲಿ ಇಂದು ಎರಡನೇ ಡೋಸ್ ಲಸಿಕೆ ಪಡೆದಿದ್ದೇನೆ. ಕೋವಿಡ್ ವೈರಸ್ ನ್ನು ಸೋಲಿಸಲು ಇರುವ ಕೆಲವೇ ವಿಧಾನಗಳಲ್ಲಿ ಲಸಿಕೆ ಕೂಡಾ ಒಂದು. ನೀವು ಲಸಿಕೆ ಪಡೆಯಲು ಅರ್ಹರಾಗಿದ್ದಲ್ಲಿ ಆದಷ್ಟು ಬೇಗ ಲಸಿಕೆ ಪಡೆಯಿರಿ” ಎಂದು ಜನತೆಗೆ ಕರೆ ನೀಡಿದ್ದಾರೆ.
ಸದ್ಯ ದೇಶಾದ್ಯಂತ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಗೆ ಜನವರಿ 16ರಂದು ಚಾಲನೆ ನೀಡಲಾಗಿತ್ತು. ಆರಂಭದಲ್ಲಿ ಕೋವಿಡ್ ವಾರಿಯರ್ಸ್ ಗೆ ಲಸಿಕೆ ನೀಡಿದ್ದು, ನಂತರ 60 ವರ್ಷ ಮೇಲ್ಪಟ್ಟವರಿಗೆ ನೀಡಲಾಗಿತ್ತು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…