ಬೆಂಗಳೂರು: ಕೋವಿಡ್ ಸೋಂಕಿತರ ಚಿಕಿತ್ಸೆಗೆ ಅಗತ್ಯವಿರುವ ಆಮ್ಲಜನಕ ಹಾಗೂ ರೆಮ್‌ಡಿಸಿವಿರ್ ಹೆಚ್ಚುವರಿ ಉತ್ಪಾದನೆ ಹಾಗೂ ಪೂರೈಕೆಗೆ ಕೇಂದ್ರ ಸರ್ಕಾರ ಸಿದ್ಧವಿದ್ದು, ರಾಜ್ಯ ಸರ್ಕಾರಗಳೂ ಪರಸ್ಪರ ಸಹಕರಿಸುವ ಮೂಲಕ ಸವಾಲನ್ನು ಸಮರ್ಥವಾಗಿ ಎದುರಿಸುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ಇಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಈ ವಿಷಯ ತಿಳಿಸಿದರು. ಈಗ ಎದುರಾಗಿರುವ ವಿಪತ್ತನ್ನು ಎದುರಿಸಲು ಆರೋಗ್ಯ ಸೇವಾ ವ್ಯವಸ್ಥೆ ಸುಧಾರಣೆಗೆ ಒತ್ತು ನೀಡುವುದು, ಮುನ್ನೆಚ್ಚರಿಕೆಯ ಕ್ರಮಗಳ ಕಟ್ಟುನಿಟ್ಟಿನ ಪಾಲನೆ, ಅನಗತ್ಯ ಆಸ್ಪತ್ರೆಗೆ ದಾಖಲಾಗುವುದನ್ನು ತಪ್ಪಿಸುವುದು ಹಾಗೂ ಆಮ್ಲಜನಕದ ಸಮರ್ಪಕ ಹಾಗೂ ಮಿತಬಳಕೆಗೆ ಆದ್ಯತೆ ನೀಡುವುದು ಹಾಗೂ ಜನರಲ್ಲಿ ವಿಶ್ವಾಸ ಮೂಡಿಸುವುದು ಅತಿ ಅಗತ್ಯ ಎಂದು ಪ್ರಧಾನ ಮಂತ್ರಿಯವರು ತಿಳಿಸಿದರು.
ಗಂಗಾ ನದಿಗೆ ಉರುಳಿಬಿದ್ದ ಪಿಕ್‌ಅಪ್ ವಾಹನ ; 9 ಮಂದಿ ದುರ್ಮರಣ – Vishwanews24
ಆಮ್ಲಜನಕದ ದುರ್ಬಳಕೆ ಯಾಗದಂತೆ ಎಲ್ಲ ರಾಜ್ಯಗಳಲ್ಲೂ ಆಕ್ಸಿಜನ್ ಆಡಿಟ್ ಮಾಡಿಸುವಂತೆ ಪ್ರಧಾನ ಮಂತ್ರಿಯವರು ಸಲಹೆ ನೀಡಿದರು. ಜೊತೆಗೆ ಆಮ್ಲಜನಕದ ಟ್ಯಾಂಕರ್‌ಗಳ ಸುಗಮ ಸಂಚಾರಕ್ಕೆ ರಾಜ್ಯ ಸರ್ಕಾರಗಳು ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.
ಆಮ್ಲಜನಕ ಮತ್ತು ರೆಮ್‌ಡಿಸಿವಿರ್ ಸದ್ಬಳಕೆಯಾಗುವ ನಿಟ್ಟಿನಲ್ಲಿ ಆತಂಕದ ಕೊಳ್ಳುವಿಕೆಯನ್ನು ನಿಯಂತ್ರಿಸುವಂತೆ ಅವರು ಸಲಹೆ ಮಾಡಿದರು. ಹೆಚ್ಚುತ್ತಿರುವ ಪ್ರಕರಗಳಿಂದಾಗ ಮಾನವ ಸಂಪನ್ಮೂಲ ಅಗತ್ಯತೆಯೂ ಹೆಚ್ಚುತ್ತಿದ್ದು, ಇತ್ತೀಚೆಗೆ ನಿವೃತ್ತರಾದ ಸಿಬ್ಬಂದಿಯ ಸೇವೆ ಬಳಕೆ ಮಾಡಿಕೊಳ್ಳಿ ಎಂದು ಪ್ರಧಾನ ಮಂತ್ರಿಯವರು ತಿಳಿಸಿದರು.
ಚುನಾವಣೆ ಬಿಟ್ಟು ಕೊರೊನಾ ನೋಡಿದ್ದರೆ, ನೂರಕ್ಕೇ ನೂರರಷ್ಟು ಯಾರೂ ಸಾಯುತ್ತಿರಲಿಲ್ಲ: ಮುತಾಲಿಕ್ -Vishwanews24
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…