ಕೋವಿಡ್‌ ಹೆಚ್ಚಳ : ಆರೋಗ್ಯ ಇಲಾಖೆಯಿಂದ  ಶಾಲೆಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ – vishwanews24

Featured, ರಾಜ್ಯ ನ್ಯೂಸ್

ಕೋವಿಡ್‌ ಹೆಚ್ಚಳ : ಆರೋಗ್ಯ ಇಲಾಖೆಯಿಂದ  ಶಾಲೆಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ

ಬೆಂಗಳೂರಿನಲ್ಲಿ 150ರ ಗಡಿ ದಾಟಿದ ಕೊರೊನಾ ಪ್ರಕರಣ

ಬೆಂಗಳೂರು: ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಅಲರ್ಟ್‌ ಆಗಿದ್ದು, ಶಾಲೆಗಳಿಗೆ ಹೊಸ ಮಾರ್ಗಸೂಚಿ  ಬಿಡುಗಡೆ ಮಾಡಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಶಾಲೆಗಳಿಗೆ ಹೊಸ ಮಾರ್ಗಸೂಚಿಯಲ್ಲಿ ಏನಿದೆ?
* ಮಕ್ಕಳಿಗೆ ನೆಗಡಿ, ಜ್ವರ, ಕೆಮ್ಮು ಇದ್ರೆ ಶಾಲೆಗೆ ಕಳುಹಿಸದೇ ವೈದ್ಯರ ಸಲಹೆ ಪಡೆದುಕೊಂಡು ಸೂಕ್ತ ಚಿಕಿತ್ಸೆ, ಆರೈಕೆ ನೀಡಬೇಕು
* ಜ್ವರ ಸಂಪೂರ್ಣ ಗುಣಮುಖವಾದ ಬಳಿಕ ಮಕ್ಕಳನ್ನ ಶಾಲೆಗೆ ಕಳಿಸಬೇಕು
* ಶಾಲೆಗೆ ಬಂದ ನಂತ್ರ ಮಕ್ಕಳಲ್ಲಿ ಜ್ವರ ಶೀತ ಗುಣಲಕ್ಷಣಗಳು ಕಂಡುಬಂದ್ರೇ ತಕ್ಷಣ ಪೋಷಕರ ಗಮನಕ್ಕೆ ತಂದು ಮನೆಗೆ ಕಳುಹಿಸಬೇಕು
* ಶಾಲಾ ಶಿಕ್ಷಕರಿಗೆ ಸಿಬ್ಬಂದಿಗೆ ಜ್ವರ, ಶೀತದಂತಹ ಲಕ್ಷಣ ಕಂಡುಬಂದ್ರೆ ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು.
* ಸ್ಯಾನಿಟೈಸ್ ಬಳಕೆ, ಕೈಗಳ ಸ್ವಚ್ಛತೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳೋದು ಸೇರಿದಂತೆ ಕೊರೊನಾ ಮುನ್ನೆಚ್ಚರಿಕಾ ಕ್ರಮಗಳನ್ನ ಶಾಲೆಯಲ್ಲಿ ಪಾಲಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಿದೆ.

COVID 19 prevention in schools page 0001

ಬೆಂಗಳೂರಿನಲ್ಲಿ 150ರ ಗಡಿ ದಾಟಿದ ಕೊರೊನಾ ಪ್ರಕರಣ
ರಾಜ್ಯದಲ್ಲಿ ಕೋವಿಡ್ ಕೇಸ್ ಗಣನೀಯವಾಗಿ ಏರಿಕೆ ಕಂಡಿದೆ. ರಾಜ್ಯದ ಒಟ್ಟು ಆಕ್ಟೀವ್ ಕೇಸ್ 234 ಇದ್ದು, ಅದರಲ್ಲಿ ಬೆಂಗಳೂರು ಒಂದರಲ್ಲೇ ಬರೋಬ್ಬರಿ 150ಕ್ಕೂ ಹೆಚ್ಚು ಆಕ್ಟೀವ್ ಕೇಸ್‌ಗಳು ದಾಖಲಾಗಿದೆ. ಬೆಂಗಳೂರು ಮತ್ತೆ ಕೊರೊನಾ ಹಾಟ್‌ಸ್ಪಾಟ್ ಆಗುತ್ತಿದೆ. ಐಎಲ್ ಮತ್ತು ಸಾರಿ ಕೇಸ್‌ಗಳಿಗೆ ಕಡ್ಡಾಯವಾಗಿ ಟೆಸ್ಟ್ ಮಾಡಲು ಸರ್ಕಾರ ಸೂಚಿಸಿದೆ. ಇನ್ನು ಬೆಂಗಳೂರಿನಲ್ಲಿ ಕೇಸ್ ಏರಿಕೆ ಆಗುತ್ತಿದ್ದು, ಕೋವಿಡ್ ನಿಯಂತ್ರಣ ಜೊತೆಗೆ ಡೆಂಗ್ಯೂ ಕಾಪಾಡಿಕೊಳ್ಳೋದು ಸವಾಲಾಗಿದೆ. ಮಳೆಗಾಲ ಆಗಿರುವುದರಿಂದ ಬಿಬಿಎಂಪಿ ಆರೋಗ್ಯ ವಿಭಾಗ ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುತ್ತಿದೆ.

ಕಾರ್ಕಳ: ಮೆಸ್ಕಾಂ ಅಧಿಕಾರಿ ಗಿರೀಶ್ ರಾವ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ – vishwanews24

 

Leave a Reply