ಬೆಂಗಳೂರು: ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಅಲರ್ಟ್ ಆಗಿದ್ದು, ಶಾಲೆಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಶಾಲೆಗಳಿಗೆ ಹೊಸ ಮಾರ್ಗಸೂಚಿಯಲ್ಲಿ ಏನಿದೆ?
* ಮಕ್ಕಳಿಗೆ ನೆಗಡಿ, ಜ್ವರ, ಕೆಮ್ಮು ಇದ್ರೆ ಶಾಲೆಗೆ ಕಳುಹಿಸದೇ ವೈದ್ಯರ ಸಲಹೆ ಪಡೆದುಕೊಂಡು ಸೂಕ್ತ ಚಿಕಿತ್ಸೆ, ಆರೈಕೆ ನೀಡಬೇಕು
* ಜ್ವರ ಸಂಪೂರ್ಣ ಗುಣಮುಖವಾದ ಬಳಿಕ ಮಕ್ಕಳನ್ನ ಶಾಲೆಗೆ ಕಳಿಸಬೇಕು
* ಶಾಲೆಗೆ ಬಂದ ನಂತ್ರ ಮಕ್ಕಳಲ್ಲಿ ಜ್ವರ ಶೀತ ಗುಣಲಕ್ಷಣಗಳು ಕಂಡುಬಂದ್ರೇ ತಕ್ಷಣ ಪೋಷಕರ ಗಮನಕ್ಕೆ ತಂದು ಮನೆಗೆ ಕಳುಹಿಸಬೇಕು
* ಶಾಲಾ ಶಿಕ್ಷಕರಿಗೆ ಸಿಬ್ಬಂದಿಗೆ ಜ್ವರ, ಶೀತದಂತಹ ಲಕ್ಷಣ ಕಂಡುಬಂದ್ರೆ ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು.
* ಸ್ಯಾನಿಟೈಸ್ ಬಳಕೆ, ಕೈಗಳ ಸ್ವಚ್ಛತೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳೋದು ಸೇರಿದಂತೆ ಕೊರೊನಾ ಮುನ್ನೆಚ್ಚರಿಕಾ ಕ್ರಮಗಳನ್ನ ಶಾಲೆಯಲ್ಲಿ ಪಾಲಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ 150ರ ಗಡಿ ದಾಟಿದ ಕೊರೊನಾ ಪ್ರಕರಣ
ರಾಜ್ಯದಲ್ಲಿ ಕೋವಿಡ್ ಕೇಸ್ ಗಣನೀಯವಾಗಿ ಏರಿಕೆ ಕಂಡಿದೆ. ರಾಜ್ಯದ ಒಟ್ಟು ಆಕ್ಟೀವ್ ಕೇಸ್ 234 ಇದ್ದು, ಅದರಲ್ಲಿ ಬೆಂಗಳೂರು ಒಂದರಲ್ಲೇ ಬರೋಬ್ಬರಿ 150ಕ್ಕೂ ಹೆಚ್ಚು ಆಕ್ಟೀವ್ ಕೇಸ್‌ಗಳು ದಾಖಲಾಗಿದೆ. ಬೆಂಗಳೂರು ಮತ್ತೆ ಕೊರೊನಾ ಹಾಟ್‌ಸ್ಪಾಟ್ ಆಗುತ್ತಿದೆ. ಐಎಲ್ ಮತ್ತು ಸಾರಿ ಕೇಸ್‌ಗಳಿಗೆ ಕಡ್ಡಾಯವಾಗಿ ಟೆಸ್ಟ್ ಮಾಡಲು ಸರ್ಕಾರ ಸೂಚಿಸಿದೆ. ಇನ್ನು ಬೆಂಗಳೂರಿನಲ್ಲಿ ಕೇಸ್ ಏರಿಕೆ ಆಗುತ್ತಿದ್ದು, ಕೋವಿಡ್ ನಿಯಂತ್ರಣ ಜೊತೆಗೆ ಡೆಂಗ್ಯೂ ಕಾಪಾಡಿಕೊಳ್ಳೋದು ಸವಾಲಾಗಿದೆ. ಮಳೆಗಾಲ ಆಗಿರುವುದರಿಂದ ಬಿಬಿಎಂಪಿ ಆರೋಗ್ಯ ವಿಭಾಗ ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುತ್ತಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…