Featured

ಕೋವಿಡ್-19 ಬೂಸ್ಟರ್ ಡೋಸ್ ಲಸಿಕೆ ಪಡೆದವರು ಮೂಗಿನ ಮೂಲಕ ನೀಡುವ ಲಸಿಕೆ ಪಡೆಯುವಂತಿಲ್ಲ – Vishwanews24

ಕೋವಿಡ್-19 ಬೂಸ್ಟರ್ ಡೋಸ್ ಲಸಿಕೆ ಪಡೆದವರು ಮೂಗಿನ ಮೂಲಕ ನೀಡುವ ಲಸಿಕೆ ಪಡೆಯುವಂತಿಲ್ಲ

ಹೊಸದಿಲ್ಲಿ: ಈಗಾಗಲೇ ಕೋವಿಡ್-19  ಬೂಸ್ಟರ್ ಡೋಸ್ ಲಸಿಕೆ ಪಡೆದವರು, ಸರ್ಕಾರ ಹೊಸದಾಗಿ ಅನುಮೋದಿಸಿದ ಮೂಗಿನ ಮೂಲಕ ನೀಡುವ ಕೋವಿಡ್ ಲಸಿಕೆ ಪಡೆಯುವಂತಿಲ್ಲ ಎಂಬ ಅಂಶವನ್ನು ದೇಶದ ಲಸಿಕಾ ಕಾರ್ಯಪಡೆ ಮುಖ್ಯಸ್ಥರು NDTVಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಬಹಿರಂಗಪಡಿಸಿದ್ದಾರೆ.

ಇನ್‍ಕೊವ್ಯಾಕ್  ಲಸಿಕೆಯನ್ನು ಕಳೆದ ವಾರ ಕೋವಿನ್ ಪ್ಲಾಟ್‍ಫಾರಂನಲ್ಲಿ ಪರಿಚಯಿಸಲಾಗಿತ್ತು. “ಇದನ್ನು ಬೂಸ್ಟರ್ ಡೋಸ್ ಆಗಿ ಶಿಫಾರಸ್ಸು ಮಾಡಲಾಗಿದೆ. ಉದಾಹರಣೆಗೆ ಒಬ್ಬ ವ್ಯಕ್ತಿ ಈಗಾಗಲೇ ಮುಂಜಾಗ್ರತಾ ಡೋಸ್ ಪಡೆದಿದ್ದಲ್ಲಿ, ಮೂಗಿನ ಮೂಲಕ ನೀಡುವ ಡೋಸನ್ನು ಅವರಿಗೆ ಶಿಫಾರಸ್ಸು ಮಾಡಲಾಗದು. ಇದುವರೆಗೂ ಬೂಸ್ಟರ್ ಡೋಸ್ ಪಡೆಯದವರಿಗಾಗಿ ಈ ಡೋಸ್ ಇದೆ” ಎಂದು ಕಾರ್ಯಪಡೆ ಮುಖ್ಯಸ್ಥ ಡಾ.ಎನ್.ಕೆ.ಅರೋರಾ ಸ್ಪಷ್ಟಪಡಿಸಿದ್ದಾರೆ.

“ಲಸಿಕಾ ಕಾರ್ಯಕ್ರಮದ ಅಂಗವಾಗಿ ಕೋವಿನ್ ಪೋರ್ಟೆಲ್ ನಾಲ್ಕನೇ ಡೋಸ್ ಅನ್ನು ಸ್ವೀಕರಿಸುವುದಿಲ್ಲ. ಒಬ್ಬ ವ್ಯಕ್ತಿ ನಾಲ್ಕನೇ ಡೋಸ್ ಪಡೆಯಲು ಬಯಸುತ್ತಾರೆ ಎಂದುಕೊಳ್ಳೋಣ. ಆಯಂಟಿಜಿನ್ ಸಿಂಕ್ ಎಂಬ ಒಂದು ಪರಿಕಲ್ಪನೆ ಇದೆ. ಒಬ್ಬ ವ್ಯಕ್ತಿಗೆ ಪದೇ ಪದೇ ನಿರ್ದಿಷ್ಟ ಬಗೆಯ ಆಯಂಟಿಜಿನ್ ಪ್ರತಿರೋಧ ಲಸಿಕೆ ನೀಡಿದಲ್ಲಿ ದೇಹ ಅದಕ್ಕೆ ಸ್ಪಂದಿಸುವುದು ನಿಲ್ಲಿಸುತ್ತದೆ ಅಥವಾ ತೀರಾ ಕಳಪೆಯಾಗಿ ಸ್ಪಂದಿಸುತ್ತದೆ. ಆದ್ದರಿಂದ ಆರಂಭದಲ್ಲಿ ಎಂಆರ್ ಎನ್‍ಎ ಲಸಿಕೆಗಳನ್ನು ಆರು ತಿಂಗಳ ಅಂತರದಲ್ಲಿ ನೀಡಲಾಗಿತ್ತು. ಬಳಿಕ ಜನ ಮೂರು ತಿಂಗಳ ಅಂತರದಲ್ಲಿ ಪಡೆದಿದ್ದಾರೆ. ಆದರೆ ಅದು ಇಂಥ ಪ್ರಕರಣಗಳಲ್ಲಿ ಭಾರಿ ಪ್ರಯೋಜನವಾಗಿದೆ. ಆದ್ದರಿಂದ ತಕ್ಷಣಕ್ಕೆ ನಾಲ್ಕನೇ ಡೋಸ್ ಪಡೆಯುವುದರಲ್ಲಿ ಅರ್ಥವಿಲ್ಲ” ಎಂದು ವಿಶ್ಲೇಷಿಸಿದರು.

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

50 minutes ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

1 hour ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

2 hours ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

2 hours ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

2 hours ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

2 hours ago