Featured

ಕೋವಿಡ್-19 ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಪರಿಹಾರ ಕೋರಿ ಅರ್ಜಿ ಸಲ್ಲಿಸಲು ಕಾಲಮಿತಿ ನಿಗದಿ – Vishwanews24

ಕೋವಿಡ್-19 ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಪರಿಹಾರ ಕೋರಿ ಅರ್ಜಿ ಸಲ್ಲಿಸಲು ಕಾಲಮಿತಿ ನಿಗದಿ

ಬೆಂಗಳೂರು  : ಕೋವಿಡ್-19ರ ವೈರಾಣು ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಪರಿಹಾರ ಕೋರಿ ಅರ್ಜಿ ಸಲ್ಲಿಸಲು ಮರಣ ಸಂಭವಿಸಿದ ದಿನಾಂಕದಿಂದ 90 ದಿನಗಳ ಕಾಲಮಿತಿಯನ್ನು ನಿಗದಿಗೊಳಿಸಲಾಗಿದೆ.ಮಾ.20ಕ್ಕಿಂತ ಮೊದಲು ಕೋವಿಡ್‍ನಿಂದ ಮೃತಪಟ್ಟ ವ್ಯಕ್ತಿಗಳ ಪ್ರಕರಗಳಲ್ಲಿ ಪರಿಹಾರ ಕೋರಿ ಅರ್ಜಿ ಸಲ್ಲಿಸಲು 60 ದಿನಗಳ ಕಾಲಮಿತಿಯನ್ನು ನಿಗದಿಪಡಿಸದ್ದರೆ, ಮಾ.20ರ ನಂತರ ಮೃತಪಟ್ಟ ಪ್ರಕರಣಗಳಲ್ಲಿ ಪರಿಹಾರದ ಅರ್ಜಿ ಸಲ್ಲಿಸಲು 90 ದಿನಗಳ ಕಾಲಮಿತಿಯನ್ನು ನಿಗದಿ ಪಡಿಸಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.

ಪರಿಹಾರ ಕೋರಿ ಸ್ವೀಕೃತವಾದ ಅರ್ಜಿಗಳ ಸಂಸ್ಕರಣೆ ಹಾಗೂ ಪರಿಹಾರ ಪಾವತಿಗೆ 30 ದಿನಗಳ ಕಾಲ ಮಿತಿ ಅನ್ವಯವಾಗಲಿದೆ. ಕೇಂದ್ರ ಸರ್ಕಾರದ ಎಸ್‍ಡಿಆರ್‍ಎಫ್ ಮಾರ್ಗಸೂಚಿ ಅನ್ವಯ ಕೋವಿಡ್‍ನಿಂದ ಮೃತಪಟ್ಟ ವ್ಯಕ್ತಿಯ ಕಾನೂನು ಬದ್ಧ ವಾರಸುದಾರರಿಗೆ 50 ಸಾವಿರ ರೂ.ಗಳ ಪರಿಹಾರ ಧನ ನೀಡಲಾಗುತ್ತದೆ.

ಸುಳ್ಳು ಮಾಹಿತಿ ಅಥವಾ ನಕಲಿ ಅರ್ಜಿ ಸಲ್ಲಿಸಿ ಪರಿಹಾರ ಪಡೆದಿರುವುದು ಸಾಬೀತಾದರೆ ಆ ಪರಿಹಾರದ ಮೊತ್ತವನ್ನು ಸರ್ಕಾರ ವಸೂಲು ಮಾಡುತ್ತದೆ. ಅಲ್ಲದೆ, ವಿಪತ್ತು ನಿರ್ವಹಣಾ ಕಾಯ್ದೆಯಡಿ ಸೂಕ್ತ ದಂಡದೊಂದಿಗೆ ಎರಡು ವರ್ಷಗಳ ವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆಗೆ ಗುರಿಗೊಳಿಸಲಾಗುತ್ತದೆ.

ಮಾರ್ಗ ಸೂಚಿಗಳಲ್ಲಿ ಸೂಚಿಸುವಂತೆ ಸೂಕ್ತ ವಿಚಾರಣೆ ನಡೆಸದೆ ಮನವಿಗಳನ್ನು ಪರಿಗಣಿಸದೆ ಕೋವಿಡ್-19ರ ಪರಿಹಾರ ವಿತರಣೆಗೆ ಶಿಫಾರಸು ಮಾಡುವ ಅಕಾರಿ ಮತ್ತು ಸಿಬ್ಬಂದಿ ವಿರುದ್ಧವೂ ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರು ಶಿಸ್ತು ಕ್ರಮ ಕೈಗೊಳ್ಳಬಹುದಾಗಿದೆ ಎಂದು ಕಂದಾಯ ಹೊರಡಿಸಿರುವ ಸುತ್ತೋಲೆಯಲ್ಲಿ ವಿವರಿಸಲಾಗಿದೆ.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

6 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

7 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

7 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

10 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

10 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

11 hours ago