Featured

ಕೋವಿಡ್-19 ಹೆಚ್ಚುವರಿ ನಿಯಂತ್ರಣ ಕ್ರಮ ಜಾರಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. -Vishwanews24

ಕೋವಿಡ್-19 ಹೆಚ್ಚುವರಿ ನಿಯಂತ್ರಣ ಕ್ರಮ ಜಾರಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. -Vishwanews24

ಉಡುಪಿ : ಜಿಲ್ಲೆಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ, ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 34 (ಎಮ್) ಮತ್ತು ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಕೊರೋನಾ ಮಾರ್ಗಸೂಚಿಯ ಹೆಚ್ಚುವರಿ ನಿಯಂತ್ರಣ ಕ್ರಮಗಳನ್ನು ಮುಂದಿನ ಆದೇಶದ ವರೆಗೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ. ಆದೇಶಿಸಿರುತ್ತಾರೆ.

ಎಲ್ಲಾ ಸಭೆ, ಸಮಾರಂಭ, ಸಮ್ಮೇಳನ ಇತ್ಯಾದಿಗಳಲ್ಲಿ ಭಾಗವಹಿಸುವವರ ಸಂಖ್ಯೆಯನ್ನು 500 ಜನರಿಗೆ ಸೀಮಿತಗೊಳಿಸಲಾಗಿದ್ದು, ಇಂತಹ ಸಂದರ್ಭಗಳಲ್ಲಿ ಕೊವಿಡ್-19 ಸಮುಚಿತ ವರ್ತನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇದು ಸಂಘಟಕರ ಹಾಗೂ ವ್ಯವಸ್ಥಾಪಕರ ಜವಾಬ್ದಾರಿಯಾಗಿರುತ್ತದೆ.

ಶೈಕ್ಷಣಿಕ ಸಂಸ್ಥೆಗಳಲ್ಲಿ ನಡೆಸುವ ಸಾಂಸ್ಕೃತಿಕ ಚಟುವಟಿಕೆ, ಹಬ್ಬ ಮತ್ತು ಸಮಾರಂಭಗಳನ್ನು 2022 ಜನವರಿ 15 ರ ವರೆಗೆ ಮುಂದೂಡಬೇಕು. ಶಾಲೆ, ಕಾಲೇಜುಗಳಿಗೆ ತೆರಳುವ 18 ವರ್ಷದೊಳಗಿನ ಮಕ್ಕಳ ಪೋಷಕರು ಕಡ್ಡಾಯವಾಗಿ ಎರಡು ಡೋಸ್ ಕೋವಿಡ್ -19 ಲಸಿಕೆಯನ್ನು ಪಡೆದಿರಬೇಕು. ಎರಡು ಡೋಸ್ ಕೊರೋನಾ ಲಸಿಕೆ ಪಡೆದಿರುವ ವ್ಯಕ್ತಿಗಳಿಗೆ ಮಾತ್ರ ಮಾಲ್, ಚಿತ್ರ ಮಂದಿರಗಳಲ್ಲಿ ಪ್ರವೇಶಕ್ಕೆ ಅವಕಾಶ ನೀಡಬೇಕು.

ಈ ಆದೇಶಗಳನ್ನು ಪಾಲಿಸದೇ ಇರುವವರ ವಿರುದ್ಧ ಪೊಲೀಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣಗಳನ್ನು, ಡಿಸಾಸ್ಟರ್ ಮ್ಯಾನೇಜ್‌ಮೆಂಟ್ ಆಕ್ಟ್ 2005, ಕರ್ನಾಟಕ ಎಪಿಡೆಮಿಕ್ ಡಿಸೀಸ್ ಆಕ್ಟ್ 2020 ಮತ್ತು ಐ.ಪಿ.ಸಿ ಸೆಕ್ಷನ್ 188 ಪ್ರಕಾರ ನಿಯಮಾನುಸಾರ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಆದೇಶಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago