ಕೋವಿಡ್-19 ಹೊಸ ರೂಪಾಂತರ : ರಾಜ್ಯದಲ್ಲಿ ಇಂದಿನಿಂದ 1೦ ದಿನ ನೈಟ್ ಕರ್ಪ್ಯೂ ಜಾರಿ : ಸಿಎಂ ಯಡಿಯೂರಪ್ಪ -Vishwanews24
ಕೋವಿಡ್-19 ಹೊಸ ರೂಪಾಂತರ : ರಾಜ್ಯದಲ್ಲಿ ಇಂದಿನಿಂದ 1೦ ದಿನ ನೈಟ್ ಕರ್ಪ್ಯೂ ಜಾರಿ : ಸಿಎಂ ಯಡಿಯೂರಪ್ಪ -Vishwanews24
ಬೆಂಗಳೂರು : ರಾಜ್ಯದಲ್ಲಿ ಕೋವಿಡ್-19 ಹೊಸ ರೂಪಾಂತರದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಇಂದು ರಾತ್ರಿಯಿಂದಲೇ ಜನವರಿ 2ರವರೆಗೆ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ.
ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಇಂದು ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಜನವರಿ 2ರವರೆಗೆ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಕೋವಿಡ್ 19 ಹೊಸ ರೂಪಾಂತರದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬುದಾಗಿ ತಿಳಿಸಿದ್ದಾರೆ.
ಯುಕೆಯಿಂದ ಬರುವಂತವರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ರಾಜ್ಯಕ್ಕೆ ಯುಕೆಯಿಂದ ಬಂದಿರುವಂತವರನ್ನು ಪತ್ತೆ ಹಚ್ಚಿ, ಅವರನ್ನು ಕೋವಿಡ್-19 ಸೋಂಕು ಪತ್ತೆಗಾಗಿ ಆರ್ ಟಿ-ಪಿಸಿಆರ್ ಮೂಲಕ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಆ ಮೂಲಕ ಹೊಸ ಕೊರೋನಾ ರೂಪಾಂತರದ ಅಲೆಯ ಬಗ್ಗೆ ಪರೀಕ್ಷೆ ನಡೆಸಲಾಗುತ್ತಿದೆ. ಆ ಬಗ್ಗೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
