Featured

ಕೋವಿಡ್ 2ನೇ ಅಲೆ : ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸಬೇಡಿ, ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿ, ಲಸಿಕೆ ಹಾಕಿಸಿಕೊಳ್ಳಿ :  ಪ್ರಧಾನಿ ಮೋದಿ -Vishwanews24

ಕೋವಿಡ್ 2ನೇ ಅಲೆ : ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸಬೇಡಿ, ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿ, ಲಸಿಕೆ ಹಾಕಿಸಿಕೊಳ್ಳಿ : ಪ್ರಧಾನಿ ಮೋದಿ -Vishwanews24

ನವದೆಹಲಿ: ಕೋವಿಡ್ ವಿಚಾರದಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸಬೇಡಿ, ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿ, ಲಸಿಕೆ ಹಾಕಿಸಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ(ಮಾರ್ಚ್ 17) ದೇಶದ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ

ವೀಡಿಯೋ ಕಾನ್ಫರೆನ್ಸ್ ಮೂಲಕ ಸಿಎಂಗಳ ಸಭೆ ಉದ್ದೇಶಿಸಿ ಮಾತನಾಡಿದ ಮೋದಿ, ಕಟ್ಟುನಿಟ್ಟಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ವ್ಯವಸ್ಥೆ ಮಾಡಬೇಕು. ಮಾಸ್ಕ್ ಕಡ್ಡಾಯ ಮಾಡಬೇಕು. ಅಲ್ಲದೆ ಕ್ಲಿನಿಕಲ್ ಸೌಲಭ್ಯ ಹೆಚ್ಚು ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ : ಮಂಗಳೂರು To ಮಣಿಪುರ : ಪರಿಸರ ಜಾಗೃತಿ ಮೂಡಿಸಲು 6 ಸಾವಿರ ಕಿ.ಮೀ. ಸೈಕಲ್ ಪಯಣ ಆರಂಭಿಸಿದ ಕುಡ್ಲದ ಯುವಕ ಶ್ರವಣ್ ಕುಮಾರ್ -Vishwanews24

ಜನರು ಮಾಸ್ಕ್ ಧರಿಸುವುದನ್ನ ಗಂಭೀರವಾಗಿ ಪರಿಗಣಿಸಿಲ್ಲ. ಇದು ಸ್ಥಳೀಯ ಜಿಲ್ಲಾಡಳಿತದ ವೈಫಲ್ಯವಾಗಿದೆ. ಕೆಲವೆಡೆ ಕೊರೊನಾ 2ನೇ ಅಲೆ ಕಂಡು ಬರುತ್ತಿದೆ. ಭಾರತದಲ್ಲಿ ಶೇ.96 ಹೆಚ್ಚು ಪ್ರಕರಣಗಳು ಚೇತರಿಸಿಕೊಂಡಿವೆ. ಸಾವಿನ ಪ್ರಮಾಣ ಅತ್ಯಂತ ಕಡಿಮೆ ಇರುವ ದೇಶಗಳಲ್ಲಿ ಭಾರತವೂ ಒಂದಾಗಿದೆ. ಮೈಕ್ರೋ ಕಂಟೈನ್ಮೆಂಟ್ ಆಗತ್ಯವಾಗಿದ್ದು, ಹಳ್ಳಿಗಳಿಗೆ ಸೋಂಕು ವ್ಯಾಪಿಸಿದ್ರೆ ಕಷ್ಟ. ಹೀಗಾಗಿ ಚಿಕ್ಕ ಚಿಕ್ಕ ಪಟ್ಟಣಗಳಲ್ಲೂ ಟೆಸ್ಟಿಂಗ್ ಹೆಚ್ಚಿಸಿ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಕರ್ನಾಟಕದಲ್ಲಿ ಮತ್ತೆ ಲಾಕ್ ಡೌನ್, ಸೀಲ್ ಡೌನ್, ನೈಟ್ ಕರ್ಪ್ಯೂ ಜಾರಿ ಮಾಡಲ್ಲ : ಸಚಿವ ಡಾ.ಕೆ. ಸುಧಾಕರ್ – Vishwanews24

ಸೋಂಕಿತ ವ್ಯಕ್ತಿಯನ್ನು ಶೀಘ್ರದಲ್ಲಿ ಪತ್ತೆ ಹಚ್ಚಬೇಕು. ಆರ್‍ ಟಿಪಿಸಿಆರ್ ಶೇ.70ರಷ್ಟು ಹೆಚ್ಚಿಸಬೇಕು. ಕೆಲವು ರಾಜ್ಯಗಳು ಆಂಟಿಜನ್ ಗೆ ಮಾತ್ರ ಆದ್ಯತೆ ನೀಡಿದೆ. ಹೀಗಾಗಿ ಆರ್‍ಟಿಪಿಸಿಆರ್ ಗೆ ಆದ್ಯತೆ ನೀಡಬೇಕು. ನಗರಗಳಿಗೆ ಸೋಂಕು ಹೆಚ್ಚು ವ್ಯಾಪಿಸುತ್ತಿದೆ. ಮೊದಲು ಟಿ1 ನಗರಗಳಲ್ಲಿ ಹೆಚ್ಚಿತ್ತು. ಹೀಗಾಗಿ ಸಣ್ಣ ಊರುಗಳಲ್ಲಿ ಪರೀಕ್ಷೆ ಹೆಚ್ಚು ಮಾಡಬೇಕು. ಟೆಸ್ಟಿಂಗ್ ಹೆಚ್ಚಿಸದಿದ್ದರೆ ಪರಿಸ್ಥಿತಿ ಗಂಭೀರವಾಗಿರುತ್ತದೆ. ವ್ಯಾಕ್ಸಿನ್‍ಗಳು ಪೂರ್ಣ ಪ್ರಮಾಣದಲ್ಲಿ ಬಳಕೆಯಾಗುತ್ತಿಲ್ಲ ಎಂದರು.

ವ್ಯಾಕ್ಸಿನ್ ವೇಸ್ಟ್ ಟಾರ್ಗೆಟ್ ಹಾಕಿಕೊಳ್ಳಬೇಕು. ಕೊರೊನಾ ಚಿಕಿತ್ಸೆ ಬಳಿಕವೂ ನಾವು ಕೊರೊನಾ ಬಗ್ಗೆ ಜಾಗೃತರಾಗಿರಬೇಕು. ಜಿನೊಮ್ ಟೆಸ್ಟಿಂಗ್ ಗಳನ್ನು ನಡೆಸಬೇಕು. ಇದರಿಂದ ವೈರಸ್ ರೂಪಾಂತರಿವಾಗಿರುವ ಬಗ್ಗೆ ಮಾಹಿತಿ ಸಿಗಲಿದೆ. ತೆಲಂಗಾಣ, ಆಂಧ್ರಪ್ರದೇಶ ಮತ್ತು ಉತ್ತರ ಪ್ರದೇಶದಲ್ಲಿ ವ್ಯಾಕ್ಸಿನ್ ವ್ಯರ್ಥವಾಗುತ್ತಿದೆ. ವ್ಯಾಕ್ಸಿನ್ ವ್ಯರ್ಥ ವಾಗಲು ಬಿಡಬಾರದು. ರಾಜ್ಯ ಸರ್ಕಾರ ಇದನ್ನು ಟ್ರ್ಯಾಕ್ ಮಾಡಬೇಕು ಎಮದು ಮೋದಿ ಕರೆ ನೀಡಿದರು.

ಇದನ್ನೂ ಓದಿ : ಜೊಮ್ಯಾಟೋ ಡೆಲಿವರಿ ಬಾಯ್ ಹಲ್ಲೆ ಪ್ರಕರಣ : ಎಫ್ಐಆರ್ ದಾಖಲಾಗುತ್ತಿದ್ದಂತೆ ಯುವತಿ ನಾಪತ್ತೆ! Vishwanews24

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

26 minutes ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

28 minutes ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

36 minutes ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

46 minutes ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

5 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

5 hours ago