ನವದೆಹಲಿ: ಅತ್ಯಂತ ಮಹತ್ವದ ಬೆಳವಣಿಗೆಯಲ್ಲಿ ಕೋವಿಶೀಲ್ಡ್ ಕೋವಿಡ್-19 ಲಸಿಕೆ ಮಾರಾಟ ಮಾಡಿದದ್ದ ಆಸ್ಟ್ರಾಜೆನಿಕಾ ಕಂಪನಿ ತನ್ನ ಕೋವಿಡ್ ಲಸಿಕೆಯಿಂದ ಅಪರೂಪದ ಅಡ್ಡ ಪರಿಣಾಮಗಳು ಉಂಟಾಗುತ್ತದೆ ಎಂದು ತಿಳಿಸಿದೆ. ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿರುವ ದಾಖಲೆಗಳಲ್ಲಿ ಈ ವಿವರವನ್ನು ಆಸ್ಟ್ರಾಜೆನಿಕಾ ಕಂಪನಿ ಒಪ್ಪಿಕೊಂಡಿದೆ.
ಆಕ್ಸ್‌ಫರ್ಡ್-ಆಸ್ಟ್ರಾಜೆನೆಕಾ ಕಂಪನಿ ಕೋವಿಡ್ ಲಸಿಕೆಯನ್ನು ಕೋವಿಶೀಲ್ಡ್ ಮತ್ತು ವ್ಯಾಕ್ಸ್‌ಜೆವ್ರಿಯಾ ಎಂಬ ಬ್ರಾಂಡ್‌ಗಳ ಅಡಿಯಲ್ಲಿ ಜಾಗತಿಕವಾಗಿ ಮಾರಾಟ ಮಾಡಿತ್ತು. ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಲಾದ ಲಸಿಕೆಯಿಂದ ಉಂಟಾಗುವ ಗಂಭೀರವಾದ ಗಾಯಗಳು ಮತ್ತು ಸಾವುಗಳನ್ನು ಆರೋಪಿಸಿ ಔಷಧೀಯ ಕಂಪನಿಯು ಕ್ಲಾಸ್-ಆಕ್ಷನ್ ಮೊಕದ್ದಮೆಯನ್ನು ಎದುರಿಸುತ್ತಿದೆ. ಅಸ್ಟ್ರಾಜೆನೆಕಾ ಲಸಿಕೆ ಅಡ್ಡ ಪರಿಣಾಮಗಳು ವಿನಾಶಕಾರಿ ಪರಿಣಾಮಗಳನ್ನು ಬೀರಿವೆ ಎಂದು ಹಲವಾರು ಕುಟುಂಬಗಳು ನ್ಯಾಯಾಲಯದ ದೂರಿನ ಮೂಲಕ ಆರೋಪಿಸಿವೆ.
ಕಂಪನಿ ತನ್ನ ಲಸಿಕೆಯ ಅಡ್ಡಪರಿಣಾಮ ಒಪ್ಪಿಕೊಂಡಿರುವ ಕಾರಣ ಪ್ರಸ್ತುತ ನಡೆಯುತ್ತಿರುವ ಕಾನೂನು ಹೋರಾಟದಲ್ಲಿ ಇದು ಪ್ರಮುಖ ತಿರುವು ಎನ್ನಲಾಗಿದೆ. ವ್ಯಾಕ್ಸಿನೇಷನ್‌ಗೆ ಸಂಬಂಧಿಸಿದ ಸಂಭಾವ್ಯ ಅಪಾಯಗಳನ್ನು ಇದು ಎತ್ತಿ ತೋರಿಸಿದೆ.
ಏಪ್ರಿಲ್ 2021 ರಲ್ಲಿ ಅಸ್ಟ್ರಾಜೆನೆಕಾ ಲಸಿಕೆಯನ್ನು ಪಡೆದ ನಂತರ ಶಾಶ್ವತವಾಗಿ ಮೆದುಳಿಗೆ ಸಂಬಂಧಪಟ್ಟ ಕಾಯಿಲೆ ಎದುರಿಸಿದ ಜೇಮೀ ಸ್ಕಾಟ್ ಅವರು ಮೊಕದ್ದಮೆಯನ್ನು ಪ್ರಾರಂಭಿಸಿದರು. ಅವರ ಪ್ರಕರಣವು ಥ್ರಂಬೋಸಿಸ್ ವಿತ್ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ (ಟಿಟಿಎಸ್) ಎಂದು ಕರೆಯಲ್ಪಡುವ ಅಪರೂಪದ ಅಡ್ಡ ಪರಿಣಾಮದ ತೀವ್ರ ಪರಿಣಾಮವನ್ನು ತೋರಿಸುತ್ತದೆ, ಇದು ರಕ್ತ ಹೆಪ್ಪುಗಟ್ಟುವಿಕೆ ಮತ್ತು ಕಡಿಮೆ ಪ್ಲೇಟ್‌ಲೆಟ್ ಸಮಸ್ಯೆಗಳಿಂದ ಗುರುತಿಸಿಕೊಂಡಿದೆ.

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…