ಹಾಸನ: ಕೌಟುಂಬಿಕ ಕಲಹ ಹಿನ್ನೆಲೆ ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ.
ಜಯಂತಿ (60), ಭರತ್ (35) ಆತ್ಮಹತ್ಯೆಗೆ ಶರಣಾದ ತಾಯಿ-ಮಗ. ಭರತ್ ಕಳೆದ ಎಂಟು ತಿಂಗಳ ಹಿಂದಷ್ಟೇ ಅರಸೀಕೆರೆ ತಾಲೂಕು ಬಾಗೂರನಹಳ್ಳಿ ಗ್ರಾಮದ ಯುವತಿಯೊಂದಿಗೆ ವಿವಾಹವಾಗಿದ್ದರು. ಅತ್ತೆ-ಸೊಸೆ ನಡುವೆ ಹೊಂದಾಣಿಕೆ ಇಲ್ಲದೆ ಪದೇಪದೇ ಜಗಳ ನಡೆಯುತ್ತಿತ್ತು. ಇದೇ ಕಾರಣಕ್ಕೆ ಭರತ್ ಪತ್ನಿ ಮನೆಬಿಟ್ಟು ತವರು ಮನೆಗೆ ಹೋಗಿದ್ದರು.
ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಎರಡು ಬಾರಿ ರಾಜಿ ಪಂಚಾಯ್ತಿ ಮಾಡಿದ್ದರು. ಆದರೂ ಭರತ್ ಪತ್ನಿ ಗಂಡನ ಜೊತೆ ಇರದೇ ತವರು ಮನೆಗೆ ಹೋಗಿದ್ದರು. ಇದರಿಂದ ಮನನೊಂದಿದ್ದ ಭರತ್ ಹಾಗೂ ತಾಯಿ ಜಯಂತಿ ಕೆರೆಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಸಾವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಉಡುಪಿ : ಯುವತಿ ನಾಪತ್ತೆ ಉಡುಪಿ: ನಗರದ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತೀಕ್ಷಾ (18) ಎನ್ನುವ ಯುವತಿಯು ಆಗಸ್ಟ್…
ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ ಮಂಗಳೂರು…
ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ ಕುಂದಾಪುರ: ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ…
ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ…
ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…
ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ…