ಕೌಟುಂಬಿಕ ಕಲಹ ಹಿನ್ನೆಲೆ : 5 ತಿಂಗಳ ಗರ್ಭಿಣಿ ಆತ್ಮಹತ್ಯೆ – vishwanews24
ಕೌಟುಂಬಿಕ ಕಲಹ ಹಿನ್ನೆಲೆ : 5 ತಿಂಗಳ ಗರ್ಭಿಣಿ ಆತ್ಮಹತ್ಯೆ
ರಾಮನಗರ: ಕೌಟುಂಬಿಕ ಕಲಹ ಹಿನ್ನೆಲೆ ಐದು ತಿಂಗಳ ಗರ್ಭಿಣಿ ಡೀಸೆಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ವಡ್ಡರದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಮನೆಯ ರೂಮ್ನಲ್ಲಿಯೇ ನಯನಾ (19) ಮೃತಪಟ್ಟಿದ್ದಾರೆ. ಕಳೆದ 9 ತಿಂಗಳ ಹಿಂದೆ ಸುನೀಲ್ ಜೊತೆ ನಯನಾ ಅವರ ವಿವಾಹವಾಗಿತ್ತು ಎನ್ನಲಾಗಿದೆ. ಪತಿ ಸುನೀಲ್, ಅತ್ತೆ ಹಾಗೂ ಮಾವನ ವಿರುದ್ಧ ಯುವತಿಯ ಪೋಷಕರು ದೂರು ನೀಡಿದ್ದಾರೆ. ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:
ಬೆಳ್ತಂಗಡಿ : ಶಿಬಾಜೆ ಶ್ರೀಧರ ಕೊಲೆ ಪ್ರಕರಣದ ದೂರುದಾರ ಆತ್ಮಹತ್ಯೆಗೆ ಯತ್ನ – vishwanews24
