Featured

ಕೌಟುಂಬಿಕ ಕಲಹ : 10 ತಿಂಗಳ ಮಗುವಿಗೆ ವಿಷವುಣಿಸಿ ಆತ್ಮಹತ್ಯೆಗೆ ಶರಣಾದ ತಾಯಿ – vishwanews24

ಕೌಟುಂಬಿಕ ಕಲಹ : 10 ತಿಂಗಳ ಮಗುವಿಗೆ ವಿಷವುಣಿಸಿ ಆತ್ಮಹತ್ಯೆಗೆ ಶರಣಾದ ತಾಯಿ

ಹೈದರಾಬಾದ್: ಕೌಟುಂಬಿಕ ಕಲಹದಿಂದ ಬೇಸತ್ತು 27 ವರ್ಷದ ಮಹಿಳೆಯೊಬ್ಬಳು ತನ್ನ 10 ತಿಂಗಳ ಮಗನಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ತಾಯಿ ಮತ್ತು ಮಗು ಸತ್ತಿರುವುದನ್ನು ನೋಡಿ ಮಗುವಿನ ಅಜ್ಜಿ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಸುಷ್ಮಾ (27) ಎಂದು ಗುರುತಿಸಲಾಗಿದೆ. ಸುಷ್ಮಾ ನಾಲ್ಕು ವರ್ಷಗಳ ಹಿಂದೆ ಚಾರ್ಟರ್ಡ್ ಅಕೌಂಟೆಂಟ್ ಆಗಿದ್ದ ಯಶವಂತ್ ರೆಡ್ಡಿ ಎಂಬುವರನ್ನು ವಿವಾಹವಾಗಿದ್ದರು. ಇತ್ತೀಚಿನ ದಿನಗಳಲ್ಲಿ ದಂಪತಿ ಆಗಾಗ ಜಗಳವಾಡುತ್ತಿದ್ದರು ಎಂದು ಕುಟುಂಬದ ಸದಸ್ಯರು ಪೊಲೀಸರಿಗೆ ತಿಳಿಸಿದ್ದಾರೆ.

ಸುಷ್ಮಾ ಕಾರ್ಯಕ್ರಮವೊಂದಕ್ಕೆ ಸಂಬಂಧಿಸಿದಂತೆ ಶಾಪಿಂಗ್‌ಗಾಗಿ ತನ್ನ ತಾಯಿ ಲಲಿತಾ (44) ಅವರ ಮನೆಗೆ ಹೋಗಿದ್ದರು. ಈ ವೇಳೆ ತನ್ನ ಮಗುವಿನೊಂದಿಗೆ ಮತ್ತೊಂದು ಕೋಣೆಗೆ ಹೋಗಿ, ಮಗುವಿಗೆ ವಿಷ ನೀಡಿ, ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಪತಿ ಕೆಲಸ ಮುಗಿಸಿ ವಾಪಸ್‌ ಮನೆಗೆ ಬಂದು ರೂಮ್ ಒಳಗಿನಿಂದ ಲಾಕ್ ಆಗಿರುವುದನ್ನು ಕಂಡು, ಬಾಗಿಲು ಒಡೆದು ನೋಡಿದ್ದಾರೆ. ಈ ವೇಳೆ ಹೆಂಡತಿ ಮತ್ತು ಮಗ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಗೊತ್ತಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ವೈದ್ಯರು ಇಬ್ಬರು ಮೃತಪಟ್ಟಿದ್ದಾರೆ ಎಂದು ಈ ವೇಳೆ ತಿಳಿಸಿದ್ದಾರೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

1 hour ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

2 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

3 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

3 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

3 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

3 hours ago