ಹೈದರಾಬಾದ್: ಕೌಟುಂಬಿಕ ಕಲಹದಿಂದ ಬೇಸತ್ತು 27 ವರ್ಷದ ಮಹಿಳೆಯೊಬ್ಬಳು ತನ್ನ 10 ತಿಂಗಳ ಮಗನಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ತಾಯಿ ಮತ್ತು ಮಗು ಸತ್ತಿರುವುದನ್ನು ನೋಡಿ ಮಗುವಿನ ಅಜ್ಜಿ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಸುಷ್ಮಾ (27) ಎಂದು ಗುರುತಿಸಲಾಗಿದೆ. ಸುಷ್ಮಾ ನಾಲ್ಕು ವರ್ಷಗಳ ಹಿಂದೆ ಚಾರ್ಟರ್ಡ್ ಅಕೌಂಟೆಂಟ್ ಆಗಿದ್ದ ಯಶವಂತ್ ರೆಡ್ಡಿ ಎಂಬುವರನ್ನು ವಿವಾಹವಾಗಿದ್ದರು. ಇತ್ತೀಚಿನ ದಿನಗಳಲ್ಲಿ ದಂಪತಿ ಆಗಾಗ ಜಗಳವಾಡುತ್ತಿದ್ದರು ಎಂದು ಕುಟುಂಬದ ಸದಸ್ಯರು ಪೊಲೀಸರಿಗೆ ತಿಳಿಸಿದ್ದಾರೆ.
ಸುಷ್ಮಾ ಕಾರ್ಯಕ್ರಮವೊಂದಕ್ಕೆ ಸಂಬಂಧಿಸಿದಂತೆ ಶಾಪಿಂಗ್‌ಗಾಗಿ ತನ್ನ ತಾಯಿ ಲಲಿತಾ (44) ಅವರ ಮನೆಗೆ ಹೋಗಿದ್ದರು. ಈ ವೇಳೆ ತನ್ನ ಮಗುವಿನೊಂದಿಗೆ ಮತ್ತೊಂದು ಕೋಣೆಗೆ ಹೋಗಿ, ಮಗುವಿಗೆ ವಿಷ ನೀಡಿ, ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಪತಿ ಕೆಲಸ ಮುಗಿಸಿ ವಾಪಸ್ ಮನೆಗೆ ಬಂದು ರೂಮ್ ಒಳಗಿನಿಂದ ಲಾಕ್ ಆಗಿರುವುದನ್ನು ಕಂಡು, ಬಾಗಿಲು ಒಡೆದು ನೋಡಿದ್ದಾರೆ. ಈ ವೇಳೆ ಹೆಂಡತಿ ಮತ್ತು ಮಗ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಗೊತ್ತಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ವೈದ್ಯರು ಇಬ್ಬರು ಮೃತಪಟ್ಟಿದ್ದಾರೆ ಎಂದು ಈ ವೇಳೆ ತಿಳಿಸಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…