Featured

ಕೌನ್ ಬನೇಗಾ ಕರೋಡ್‌ಪತಿ ಕ್ವಿಝ್ ಸ್ಪರ್ಧೆಯಲ್ಲಿ ಐವತ್ತು ಲಕ್ಷ ರೂ. ಗೆದ್ದ ಉಡುಪಿಯ ಅನಮಯ -Vishwanews24

ಕೌನ್ ಬನೇಗಾ ಕರೋಡ್‌ಪತಿ ಕ್ವಿಝ್ ಸ್ಪರ್ಧೆಯಲ್ಲಿ ಐವತ್ತು ಲಕ್ಷ ರೂ. ಗೆದ್ದ ಉಡುಪಿಯ ಅನಮಯ -Vishwanews24

ಉಡುಪಿ, : ಉಡುಪಿಯ ವಿದ್ಯೋದಯ ಪಬ್ಲಿಕ್ ಸ್ಕೂಲ್‌ನ 7ನೇ ತರಗತಿ ವಿದ್ಯಾರ್ಥಿ ಅನಮಯ ಯೋಗೇಶ್ ದಿವಾಕರ್ ಅವರು ಜನಪ್ರಿಯ ಕೌನ್ ಬನೇಗಾ ಕರೋಡ್‌ಪತಿ ಕ್ವಿಝ್ ಸ್ಪರ್ಧೆಯಲ್ಲಿ ಐವತ್ತು ಲಕ್ಷ ರೂ. ಗೆದ್ದಿದ್ದಾನೆ.

ಖ್ಯಾತ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ಜನಪ್ರಿಯ ಟಿ.ವಿ ಕಾರ್ಯಕ್ರಮ ‘ಕೌನ್ ಬನೇಗಾ ಕರೋಡ್‌ಪತಿ’ಯ ವಿದ್ಯಾರ್ಥಿ ವಿಶೇಷ ಸಂಚಿಕೆಯಲ್ಲಿ ಉಡುಪಿಯ ವಿದ್ಯಾರ್ಥಿ ಅನಮಯ ಪಾಲ್ಗೊಂಡಿದ್ದನು.

ಅವಿಸ್ಮರಣೀಯ 2020: ಕೃಷ್ಣನಗರಿ ಉಡುಪಿಗೆ ಸಿಹಿ-ಕಹಿ ದೇಶದ ಎಂಟು ವಿದ್ಯಾರ್ಥಿಗಳು ಮಾತ್ರ ಈ ಕೌನ್ ಬನೇಗಾ ಕರೋಡ್‌ಪತಿ ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶ ಪಡೆದುಕೊಂಡಿದ್ದರು. ಹಾಟ್ ಸೀಟ್ ನಲ್ಲಿ ಅಮಿತಾಬ್ ಬಚ್ಚನ್ ಕೇಳುವ 15 ಪ್ರಶ್ನೆಗಳ ಪೈಕಿ ಅನಮಯ 14 ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡುವ ಮೂಲಕ ಈ ಸಾಧನೆ ಮಾಡಿದ್ದಾನೆ.

ಇನ್ನೊಂದು ಪ್ರಶ್ನೆಗೆ ಉತ್ತರಿಸಿದ್ದರೆ ಒಂದು ಕೋಟಿ ಗೆಲ್ಲುವ ಅವಕಾಶ ಇದ್ದರೂ, ಖಚಿತ ಉತ್ತರ ಗೊತ್ತಿಲ್ಲದ ಕಾರಣ ಕ್ವಿಝ್ ನಿಂದ ಕ್ವಿಟ್ ಆಗುವ ನಿರ್ಧಾರ ಮಾಡಿದ್ದಾನೆ. ಆದರೂ ರಾಜ್ಯದ ಕರಾವಳಿಯ ಈ ವಿದ್ಯಾರ್ಥಿ ಪೋಷಕರ ಹಾಗೂ ಶಾಲೆಯ ಕೀರ್ತಿ ಪತಾಕೆಯನ್ನು ದೇಶ ಮಟ್ಟದಲ್ಲೂ ಪಸರಿಸಿದ್ದಾನೆ.

 

Vishwa News 24

Recent Posts

ಅಪಘಾತದಲ್ಲಿ ಮೃತಪಟ್ಟ ಪುತ್ರನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು – vishwanews24

ಅಪಘಾತದಲ್ಲಿ ಮೃತಪಟ್ಟ ಪುತ್ರನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು ಹಾಸನ: ಹೊಳೆನರಸೀಪುರದ ಚಾಕೇನಹಳ್ಳಿ ಕಟ್ಟೆ ಗ್ರಾಮದಲ್ಲಿ ಅಪಘಾತದಿಂದ…

13 minutes ago

ಬೆಂಗಳೂರು: ಸಿಲಿಂಡರ್‌ ಸ್ಫೋಟ; ಒಂದೇ ಕುಟುಂಬದ 6 ಜನರಿಗೆ ಗಾಯ, ಇಬ್ಬರು ಗಂಭೀರ – vishwanews24

ಬೆಂಗಳೂರು: ಸಿಲಿಂಡರ್‌ ಸ್ಫೋಟ; ಒಂದೇ ಕುಟುಂಬದ 6 ಜನರಿಗೆ ಗಾಯ, ಇಬ್ಬರು ಗಂಭೀರ ಬೆಂಗಳೂರು: ನಾಯಂಡಹಳ್ಳಿಯ ವಿನಾಯಕ ಲೇಔಟ್‌ನಲ್ಲಿರುವ ಮನೆಯೊಂದರಲ್ಲಿ…

22 minutes ago

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

24 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

2 days ago