ಉಡುಪಿ, : ಉಡುಪಿಯ ವಿದ್ಯೋದಯ ಪಬ್ಲಿಕ್ ಸ್ಕೂಲ್‌ನ 7ನೇ ತರಗತಿ ವಿದ್ಯಾರ್ಥಿ ಅನಮಯ ಯೋಗೇಶ್ ದಿವಾಕರ್ ಅವರು ಜನಪ್ರಿಯ ಕೌನ್ ಬನೇಗಾ ಕರೋಡ್‌ಪತಿ ಕ್ವಿಝ್ ಸ್ಪರ್ಧೆಯಲ್ಲಿ ಐವತ್ತು ಲಕ್ಷ ರೂ. ಗೆದ್ದಿದ್ದಾನೆ.
ಖ್ಯಾತ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ಜನಪ್ರಿಯ ಟಿ.ವಿ ಕಾರ್ಯಕ್ರಮ ‘ಕೌನ್ ಬನೇಗಾ ಕರೋಡ್‌ಪತಿ’ಯ ವಿದ್ಯಾರ್ಥಿ ವಿಶೇಷ ಸಂಚಿಕೆಯಲ್ಲಿ ಉಡುಪಿಯ ವಿದ್ಯಾರ್ಥಿ ಅನಮಯ ಪಾಲ್ಗೊಂಡಿದ್ದನು.
ಅವಿಸ್ಮರಣೀಯ 2020: ಕೃಷ್ಣನಗರಿ ಉಡುಪಿಗೆ ಸಿಹಿ-ಕಹಿ ದೇಶದ ಎಂಟು ವಿದ್ಯಾರ್ಥಿಗಳು ಮಾತ್ರ ಈ ಕೌನ್ ಬನೇಗಾ ಕರೋಡ್‌ಪತಿ ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶ ಪಡೆದುಕೊಂಡಿದ್ದರು. ಹಾಟ್ ಸೀಟ್ ನಲ್ಲಿ ಅಮಿತಾಬ್ ಬಚ್ಚನ್ ಕೇಳುವ 15 ಪ್ರಶ್ನೆಗಳ ಪೈಕಿ ಅನಮಯ 14 ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡುವ ಮೂಲಕ ಈ ಸಾಧನೆ ಮಾಡಿದ್ದಾನೆ.
ಇನ್ನೊಂದು ಪ್ರಶ್ನೆಗೆ ಉತ್ತರಿಸಿದ್ದರೆ ಒಂದು ಕೋಟಿ ಗೆಲ್ಲುವ ಅವಕಾಶ ಇದ್ದರೂ, ಖಚಿತ ಉತ್ತರ ಗೊತ್ತಿಲ್ಲದ ಕಾರಣ ಕ್ವಿಝ್ ನಿಂದ ಕ್ವಿಟ್ ಆಗುವ ನಿರ್ಧಾರ ಮಾಡಿದ್ದಾನೆ. ಆದರೂ ರಾಜ್ಯದ ಕರಾವಳಿಯ ಈ ವಿದ್ಯಾರ್ಥಿ ಪೋಷಕರ ಹಾಗೂ ಶಾಲೆಯ ಕೀರ್ತಿ ಪತಾಕೆಯನ್ನು ದೇಶ ಮಟ್ಟದಲ್ಲೂ ಪಸರಿಸಿದ್ದಾನೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…