ಮಂಗಳೂರು:ನಗರದ ಎಸ್‌ಡಿಎಂ ಕಾನೂನು ಕಾಲೇಜಿನಲ್ಲಿ ಬಿಎಎಲ್‌ಎಲ್‌ಬಿ ಕಲಿಯುತ್ತಿರುವ ಪವಿತ್ರಾ ಶೆಟ್ಟಿ ತನ್ನ ಕೇಶವನ್ನು ಕ್ಯಾನ್ಸರ್ ಪೀಡಿತ ಮಕ್ಕಳ ಮುಖದಲ್ಲಿ ನಗು ಕಾಣುವ ಸಲುವಾಗಿ ದಾನ ಮಾಡಿದ್ದಾಳೆ.
ಮೂಲತಃ ಮಹಾರಾಷ್ಟ್ರದ ಕೊಲ್ಲಾಪುರ್ ನವರಾದ ಪವಿತ್ರಾ ಕಾನೂನು ಪದವಿ ಪಡೆಯುವ ಉದ್ದೇಶದಿಂದ ನಗರಕ್ಕೆ ಆಗಮಿಸಿದ್ದಾರೆ. ಅನಿವಾರ್ಯ ಕಾರಣದಿಂದ ಖಾಸಗಿ ಆಸ್ಪತ್ರೆಯೊಂದಕ್ಕೆ ತೆರಳಿದ್ದ ಪವಿತ್ರಾ ಕಿಮೋಥೆರಪಿಗೆ ಒಳಗಾದ ಮಕ್ಕಳನ್ನು ನೋಡಿ ಕೇಶದಾನ ಮಾಡುವ ನಿರ್ಧಾರ ಮಾಡಿದ್ದಾರೆ.
ಕೆಲವು ದಿನಗಳ ಹಿಂದೆ ಆರೋಗ್ಯದಲ್ಲಿ ಉಂಟಾದ ಸಮಸ್ಯೆ ಹಿನ್ನೆಲೆಯಲ್ಲಿ ಪವಿತ್ರಾ ನಗರದ ಖಾಸಗಿ ಆಸ್ಪತ್ರೆಗೆ ತೆರಳಿದ್ದರು. ವೈದ್ಯರು ಕೆಲವು ಹೊತ್ತು ಹೊರಭಾಗದಲ್ಲಿ ಕಾಯುವಂತೆ ತಿಳಿಸಿದರಂತೆ. ಹಾಗೆ ಹೊರಭಾಗದಲ್ಲಿ ಕುಳಿತಿದ್ದಾಗ ಕಿಮೋ ಥೆರಪಿಗೆ ಬಂದಿದ್ದ ಇಬ್ಬರು ಪುಟ್ಟ ಮಕ್ಕಳು ಪವಿತ್ರಾ ಅವರನ್ನು ನೋಡಿ ನಿಮ್ಮ ಕೂದಲು ತುಂಬಾ ಚೆನ್ನಾಗಿದೆ ಎಂದು ಮುಟ್ಟಿದ್ದಾಗ ಅವರ ಮುಖದಲ್ಲಿ ಕಂಡ ಅಸಹಾಯಕತೆಯಿಂದ ಬೇಸರಗೊಂಡ ಪವಿತ್ರಾ ಮಕ್ಕಳ ಮುಂದೆ ನಸು ನಗುತ್ತಾ ವೈದ್ಯರನ್ನು ಭೇಟಿಯಾಗಿ ವಾಪಾಸು ಬಂದಿದ್ದರು. ಬಳಿಕ ಕ್ಯಾನ್ಸರ್ ಸೇವಾ ಸಂಸ್ಥೆಯೊಂದನ್ನು ಸಂಪರ್ಕಿಸಿ ಕೇಶದಾನ ಮಾಡುವ ಬಗ್ಗೆ ಚರ್ಚಿಸಿ ಕಳೆದ ವಾರ ತಮ್ಮ 18 ಇಂಚು ಉದ್ದದ ಕೂದಲನ್ನು ದಾನ ಮಾಡಿದ್ದಾರೆ.
ಮಲ್ಪೆ : ಸೈಂಟ್‌ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…