ಬೆಂಗಳೂರು: ಸ್ಯಾಂಡಲ್‍ವುಡ್ ನಟ, ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಕ್ಯಾನ್ಸರ್ ಪೀಡಿತ ಮಕ್ಕಳಿಗೆ ತನ್ನ ಕೂದಲನ್ನು ದಾನ ಮಾಡಿದ್ದಾರೆ.
ಧ್ರುವ ಅವರು ‘ಪೊಗರು’ ಚಿತ್ರಕ್ಕಾಗಿ ಕಳೆದ 2 ವರ್ಷದಿಂದ ಕೂದಲು ಬಿಟ್ಟಿದ್ದರು. ಇದೀಗ ಅವರ ಕೂದಲು ಹಾಗೂ ಗಡ್ಡಕ್ಕೆ ಕತ್ತರಿ ಬಿದ್ದಿದೆ. ಸಿನಿಮಾ ಕಂಪ್ಲೀಟ್ ಆದ ಹಿನ್ನೆಲೆಯಲ್ಲಿ ಧ್ರುವ ಅವರು ಹೇರ್ ಕಟ್ ಮಾಡಿಸಿದ್ದಾರೆ. ಕ್ಯಾನ್ಸರ್ ಪೀಡಿತ ಮಕ್ಕಳಿಗಾಗಿ ಈ ಕೂದಲು ಕೊಡೋದಾಗಿ ಧ್ರುವ ಹೇಳಿದ್ದಾರೆ.
ಧ್ರುವ ಸರ್ಜಾ ನಟನೆಯ ‘ಪೊಗರು’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ನಂದಕಿಶೋರ್ ನಿರ್ದೇಶನದ ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಸದ್ಯ ಈ ಸಿನಿಮಾ ಬಿಡುಗಡೆಯನ್ನು ಅಭಿಮಾನಿಗಳು ಎದುರು ನೋಡುತ್ತಿದ್ದಾರೆ.
ಈ ಹಿಂದೆ ಚಿತ್ರ ಬಿಡುಗಡೆಯ ಬಗ್ಗೆ ಮಾತನಾಡಿದ್ದ ನಂದಕಿಶೋರ್, ‘ಪೊಗರು’ ಚಿತ್ರವನ್ನು ಡಿಸೆಂಬರ್ 25ರ ಕ್ರಿಸ್‍ಮಸ್ ಹಬ್ಬದಂದು ಅಥವಾ ಜನವರಿ ತಿಂಗಳ ಸಂಕ್ರಾಂತಿ ಹಬ್ಬದಂದು ರಿಲೀಸ್ ಮಾಡುವುದಕ್ಕೆ ಸಿದ್ಧತೆ ಮಾಡಿಕೊಂಡಿದ್ದೇವೆ. ಸಿನಿಮಾದಲ್ಲಿ ಧ್ರುವ ಸರ್ಜಾ ಅವರು ಕೂದಲು, ಗಡ್ಡ ಬಿಟ್ಟುಕೊಂಡು ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದರು.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…