Featured

ಕ್ರಿಕೆಟ್‌ ಬದುಕಿಗೆ ವಿದಾಯ ಘೋಷಿಸಿದ ಗೌತಮ್ ಗಂಭೀರ್..

ಹೊಸದಿಲ್ಲಿ, : ಭಾರತ ಕ್ರಿಕೆಟಿಗ ಹಾಗೂ 2011ರ ವಿಶ್ವಕಪ್ ವಿಜೇತ ತಂಡದ ಸದಸ್ಯ ಗೌತಮ್ ಗಂಭೀರ್ ಮಂಗಳವಾರ ದಿಢೀರನೇ ಎಲ್ಲ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿಯಾಗುವ ನಿರ್ಧಾರ ಪ್ರಕಟಿಸಿದ್ದಾರೆ.

1999 ರಲ್ಲಿ ಮೊದಲ ದರ್ಜೆ ಕ್ರಿಕೆಟಿಗೆ ಪಾದಾರ್ಪಣೆ ಮಾಡುವ ಮೂಲಕ ತಮ್ಮ ಕ್ರಿಕೆಟ್ ಪಯಣ ಆರಂಭಿಸಿದ್ದ ಗೌತಮ್ ಗಂಭೀರ್, ಹಲವು ಸಂದರ್ಭಗಳಲ್ಲಿ ತಂಡದ ಗೆಲುವಿಗೆ ಮಹತ್ವದ ಕಾಣಿಕೆ ನೀಡಿದ್ದರು.

2007ರ ಟ್ವೆಂಟಿ-20 ವಿಶ್ವಕಪ್ ಹಾಗೂ 2011ರ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಭಾರತದ ಪರ ಗರಿಷ್ಠ ಸ್ಕೋರ್ ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಗಂಭೀರ್ ಎರಡು ದಶಕಗಳ ವೃತ್ತಿಜೀವನದಲ್ಲಿ 10,000ಕ್ಕೂ ಅಧಿಕ ಅಂತರ್‌ರಾಷ್ಟ್ರೀಯ ರನ್ ಗಳಿಸಿದ್ದಾರೆ. 2003ರಲ್ಲಿ ಏಕದಿನ ಕ್ರಿಕೆಟ್, 2004ರಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಕಾಲಿಟ್ಟಿರುವ ಗಂಭೀರ್ 58 ಟೆಸ್ಟ್‌ನಲ್ಲಿ 4,154 ರನ್, 147 ಏಕದಿನದಲ್ಲಿ 5,238 ರನ್ ಹಾಗೂ 37 ಟಿ-20ಯಲ್ಲಿ 932 ರನ್ ಕಲೆ ಹಾಕಿದ್ದಾರೆ.

ಈ ಬಗ್ಗೆ ಇಂದು ಫೇಸ್‌ಬುಕ್‌ನಲ್ಲಿ ಭಾವನಾತ್ಮಕ ವೀಡಿಯೊ ಮಾಡಿದ್ದು, ಇದನ್ನು ತಮ್ಮ ಟ್ವಿಟರ್‌ನಲ್ಲೂ ಹಾಕಿಕೊಂಡಿದ್ದಾರೆ. ”ಭಾರವಾದ ಹೃದಯದಿಂದ ನನ್ನ ಜೀವನದುದ್ದಕ್ಕೂ ಹೆದರುತ್ತಿದ್ದ ಈ ನಿರ್ಧಾರವನ್ನು ಘೋಷಿಸುತ್ತಿದ್ದೇನೆ” ಎಂದು ಭಾವನಾತ್ಮಕ ಟ್ವೀಟ್‌ ಅನ್ನು ಸಹ ಗಂಭೀರ್ ಮಾಡಿದ್ದಾರೆ.

ಎಡಗೈ ಆರಂಭಿಕ ದಾಂಡಿಗ ಗಂಭೀರ್ 2016ರ ನವೆಂಬರ್‌ನಲ್ಲಿ ರಾಜ್‌ಕೋಟ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಕೊನೆಯ ಬಾರಿ ಭಾರತವನ್ನು ಪ್ರತಿನಿಧಿಸಿದ್ದರು.

vishwanews24

 

 

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago