ಧಾರವಾಡ: ಕ್ರಿಕೆಟ್ ಆಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ 16 ವರ್ಷದ ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ಧಾರವಾಡ ನಗರದ ಮದಿಹಾಳ ಸಿದ್ದರಾಮ ಕಾಲೊನಿಯಲ್ಲಿ ನಡೆದಿದೆ.
ಶ್ರೇಯಸ್ ಸಿನ್ನೂರ (16) ಮೃತ ಬಾಲಕ. ತನ್ನ ಮನೆಯ ಹಿಂದೆ ಕ್ರಿಕೆಟ್ ಆಡಲು ಹೋಗಿದ್ದು, ಆಟದ ವೇಳೆ ಬಾಲ್ ಹಿಡಿಯಲು ಹೋದಾಗ ಶ್ರೇಯಸ್‌ಗೆ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ್ದಾನೆ.
ಶ್ರೇಯಸ್ ತನ್ನ ಪೋಷಕರಿಗೆ ಒಬ್ಬನೇ ಮಗನಾಗಿದ್ದ. ಧಾರವಾಡ ರಾಜೀವ್ ಗಾಂಧಿ ಶಾಲೆಯಲ್ಲಿ SSLC ಓದುತಿದ್ದ. ಸಂಜೆ ಶಾಲೆಯಿಂದ ಬಂದ ಮಗ ಮನೆಯಲ್ಲಿ ಕುಳಿತಾಗ ಗೆಳೆಯ ಆಟಕ್ಕೆ ಕರೆದಿದ್ದಾನೆ. ತಮ್ಮ ಮನೆಯ ಹಿಂದೆ ಕಾಮಗಾರಿ ಪ್ರಗತಿಯಲ್ಲಿದ್ದ ಕಟ್ಟದ ಬಳಿ ಕ್ರಿಕೆಟ್ ಆಡಲು ಹೋದ ಶ್ರೇಯಸ್‌ಗೆ 10 ನಿಮಿಷದಲ್ಲಿ ಕರೆಂಟ್ ಶಾಕ್‌ಗೆ ತಗುಲಿದೆ. ವಿಷಯ ತಿಳಿಯುತ್ತಿದ್ದಂತೆ ಪೋಷಕರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಕೂಡಲೇ ಮಗನನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ ಪ್ರಯೋಜನವಾಗಲಿಲ್ಲ ಎಂದು ಮೃತ ಬಾಲಕನ ತಂದೆ ಅಶೋಕ್ ತಿಳಿಸಿದ್ದಾರೆ.
ಇನ್ನೂ ಶ್ರೇಯಸ್ ಉಳಿಸಲು ಹೋಗಿದ್ದ 10 ವರ್ಷದ ಮತ್ತೋರ್ವ ಬಾಲಕ ಪ್ರಣವ್ ಎಂಬಾತನಿಗೂ ವಿದ್ಯುತ್ ಸ್ಪರ್ಶಿಸಿ ಸುಟ್ಟ ಗಾಯಗಳಾಗಿವೆ. ಗಾಯಗೊಂಡಿರುವ ಬಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನೂ ಮೃತ ಶ್ರೇಯಸ್‌ನ ಮೃತದೇಹವನ್ನು ಇಲ್ಲಿನ ಜಿಲ್ಲಾಸ್ಪತ್ರೆ ಶವಾಗಾರಕ್ಕೆ ಸಾಗಿಸಲಾಗಿದೆ. ಇತ್ತ ಮಗನನ್ನು ಕಳೆದುಕೊಂಡ ದುಃಖದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಈ ಸಂಬಂಧ ಧಾರವಾಡದ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…