Featured

ಕ್ರಿಸ್ಮಸ್ ಮತ್ತು ಹೊಸ ವರ್ಷಚಾರಣೆ :  ಮುಂಬೈನಲ್ಲಿ ಹೈ ಅಲರ್ಟ್ ಘೋಷಣೆ : ಜ. 2ರವರೆಗೂ ಕರ್ಫ್ಯೂ ಜಾರಿ – Vishwanews24

ಕ್ರಿಸ್ಮಸ್ ಮತ್ತು ಹೊಸ ವರ್ಷಚಾರಣೆ :  ಮುಂಬೈನಲ್ಲಿ ಹೈ ಅಲರ್ಟ್ ಘೋಷಣೆ : ಜ. 2ರವರೆಗೂ ಕರ್ಫ್ಯೂ ಜಾರಿ – , 5 ಕ್ಕಿಂತ ಹೆಚ್ಚು ಮಂದಿ ಒಟ್ಟಾಗಿ ಓಡಾಡುವಂತಿಲ್ಲ..

ಮುಂಬೈ: ಕ್ರಿಸ್ಮಸ್ ಮತ್ತು ಹೊಸ ವರ್ಷಚಾರಣೆಗೆ ಮುಂಬೈನಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಭಯೋತ್ಪಾದಕ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣಿಟ್ಟಿರುವ ಪೊಲೀಸರು ಜನವರಿ 2ರ ವರೆಗೂ ಕರ್ಫ್ಯೂ ವಿಧಿಸಿದ್ದು, 5 ಕ್ಕಿಂತ ಹೆಚ್ಚು ಮಂದಿ ಒಟ್ಟಾಗಿ ಓಡಾಡುವಂತಿಲ್ಲ ಎಂದು ಆದೇಶಿಸಿದೆ.

ಮುಂಬೈ ಪೊಲೀಸ್ ಕೇಂದ್ರ ಕಚೇರಿಯಿಂದ ಈ ಆದೇಶ ಪ್ರಕಟಗೊಂಡಿದ್ದು, ಜನವರಿ 2ರ ವರೆಗೂ ಶಸ್ತ್ರಾಸ್ತ್ರಗಳು, ಬಂದೂಕುಗಳು, ಕತ್ತಿಗಳು ಮತ್ತು ಇತರ ಆಯುಧಗಳೊಂದಿಗೆ ಸಂಚಾರದ ಮೇಲೂ ನಿಷೇಧವನ್ನು ವಿಧಿಸಲಾಗಿದೆ.

ಅಧಿಕೃತ ಸೂಚನೆಯ ಪ್ರಕಾರ, ಮದುವೆ ಸಮಾರಂಭಗಳು, ಅಂತ್ಯಕ್ರಿಯೆ ಸಭೆಗಳು, ಸ್ಮಶಾನಗಳಿಗೆ ಹೋಗುವ ದಾರಿಯಲ್ಲಿ ಧ್ವನಿವರ್ಧಕಗಳು, ವಾದ್ಯಗಳು, ಬ್ಯಾಂಡ್‌ಗಳನ್ನು ನುಡಿಸುವಂತಿಲ್ಲ, ಪಟಾಕಿ ಹೊಡೆಯುವಂತಿಲ್ಲ. ಕ್ಲಬ್‌ಗಳು, ಸಹಕಾರ ಸಂಘಗಳು ಮತ್ತು ಇತರ ಸಂಘಗಳ ಮೆರವಣಿಗೆಗಳ ಮೇಲೆ ನಿಷೇಧವನ್ನು ವಿಧಿಸಲಾಗಿದೆ.

ಸಾರ್ವಜನಿಕ ಚಲನಚಿತ್ರ ಪ್ರದರ್ಶನ ಸ್ಥಳಗಳು ಅಥವಾ ಸುತ್ತಮುತ್ತಲಿನ ಯಾವುದೇ ಸ್ಥಳಗಳಲ್ಲಿ, ನಾಟಕಗಳು ಅಥವಾ ಕಾರ್ಯಕ್ರಮಗಳನ್ನು ವೀಕ್ಷಿಸುವ ಉದ್ದೇಶಕ್ಕಾಗಿ ಸಭೆ ನಡೆಸುವುದು ನಿಷೇಧಿಸಲಾಗಿದೆ. ಸರ್ಕಾರಿ ಕಚೇರಿಗಳ ಸುತ್ತಲೂ ಸರ್ಕಾರಿ ಅಥವಾ ಅರೆ ಸರ್ಕಾರಿ ಕಾರ್ಯಗಳನ್ನು ನಿರ್ವಹಿಸುವ ಸಲುವಾಗಿ ಅನಗತ್ಯ ಜನ ಸೇರುವಂತಿಲ್ಲ. ಶಾಲಾ ಕಾಲೇಜುಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳಲ್ಲಿ ಶೈಕ್ಷಣಿಕ ಕಾರ್ಯಕ್ರಮಗಳು, ಕಾರ್ಖಾನೆಗಳಲ್ಲೂ ಸಾಮಾನ್ಯ ವ್ಯವಹಾರಗಳ ಸಭೆಗಳನ್ನು ನಿಷೇಧಿಸಲಾಗಿದೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago