ಕ್ರೈಸ್ತ ಅಭಿವೃದ್ಧಿ ನಿಗಮ ರದ್ದು : ಸರ್ಕಾರ ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕು, ಇಲ್ಲವಾದಲ್ಲಿಉಗ್ರ ಹೋರಾಟ ನಡೆಸಲಾಗುವುದು : ಐವನ್ ಡಿಸೋಜ – Vishwanews24

ಕ್ರೈಸ್ತ ಅಭಿವೃದ್ಧಿ ನಿಗಮ ರದ್ದು : ಸರ್ಕಾರ ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕು, ಇಲ್ಲವಾದಲ್ಲಿಉಗ್ರ ಹೋರಾಟ ನಡೆಸಲಾಗುವುದು : ಐವನ್ ಡಿಸೋಜ – Vishwanews24

ಬೆಂಗಳೂರು: ಕ್ರೈಸ್ತ ಅಭಿವೃದ್ಧಿ ನಿಗಮವನ್ನು ಸರ್ಕಾರ ರದ್ದು ಮಾಡಿದೆ. ಇದರಿಂದ ಸಮುದಾಯದ ಜನರಿಗೆ ನೋವಾಗಿದೆ. ಸರ್ಕಾರ ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಮಾಜಿ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಈ ಹಿಂದೆ ಹೆಚ್.ಡಿ‌. ಕುಮಾರಸ್ವಾಮಿ ಅವರು ಕ್ರೈಸ್ತ ಅಭಿವೃದ್ಧಿ ನಿಗಮವನ್ನು ಘೋಷಿಸಿದ್ದರು. 200 ಕೋಟಿ ರೂ.ಗಳನ್ನು ನಿಗಮಕ್ಕೆ ಇಡಲಾಗಿತ್ತು, ಅದರಲ್ಲಿ 75 ಕೋಟಿ ರೂ. ಮೀಸಲಿಟ್ಟಿತ್ತು. ಆದರೆ ಇದೀಗ ನಿಗಮವನ್ನು ರದ್ಧುಪಡಿಸಲಾಗಿದೆ ಎಂದರು.

ರಾಜ್ಯದಲ್ಲಿ ಸಮುದಾಯದ 30 ಲಕ್ಷ ಜನರಿದ್ದೇವೆ. 27 ಜಿಲ್ಲೆಗಳಲ್ಲಿ ನಮ್ಮ ಸಮುದಾಯ ಹರಡಿದೆ. ಶೈಕ್ಷಣಿಕ, ಆರೋಗ್ಯ ಕ್ಷೇತ್ರಕ್ಕೆ ನಮ್ಮ ಕೊಡುಗೆ ಅಪಾರ. ಇವತ್ತಿಗೂ ಆರ್ಥಿಕವಾಗಿ ಹಿಂದುಳಿದಿದೆ. ಆದರೆ ಅಭಿವೃದ್ದಿ ನಿಗಮ ಘೋಷಿಸಿ ತಡೆಹಿಡಿದಿದ್ದು ಏಕೆ? ಇದಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಉತ್ತರಿಸಬೇಕು ಎಂದು ಆಗ್ರಹಿಸಿದರು.

ನಮಗೆ ಆಸೆ ತೋರಿಸಿ ಏಕಾಏಕಿ ಈ ನಿರ್ಧಾರ ಮಾಡಿದ್ದು ಸರಿಯೇ? ನಮ್ಮ ಸಮುದಾಯಕ್ಕೆ ಇದರಿಂದ ತುಂಬಾ ನೋವಾಗಿದೆ. ನಿಮ್ಮ ಆದೇಶವನ್ನು ವಾಪಸ್ ಪಡೆಯಬೇಕು. ನಿಗಮ ಮಂಡಳಿ ಸ್ಥಾಪನೆಗೆ ಅವಕಾಶ ಮಾಡಿಕೊಡಬೇಕು ಎಂದರು

ನಿಗಮ ರದ್ಧತಿಯ ಬಗ್ಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡುತ್ತೇವೆ. ಆದೇಶ ವಾಪಸ್ ಪಡೆಯಲು ಆಗ್ರಹಿಸುತ್ತೇವೆ. ಆದೇಶ ವಾಪಸ್ ಪಡೆಯದೆ ಹೋದರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಐವನ್ ಡಿಸೋಜಾ ಹೇಳಿದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

11 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago