Featured

ಕ್ಷಣದಿಂದ ಕ್ಷಣಕ್ಕೂ ಕ್ಷೀಣಿಸುತ್ತಿದೆ ಸ್ಯಾಂಡಲ್‍ವುಡ್‍ನ ಹಿರಿಯ ನಟ ಶಿವರಾಂ ಅವರ ಆರೋಗ್ಯ : ವೈದ್ಯ ಡಾ. ಮೋಹನ್ – VIshwanews24

ಕ್ಷಣದಿಂದ ಕ್ಷಣಕ್ಕೂ ಕ್ಷೀಣಿಸುತ್ತಿದೆ ಸ್ಯಾಂಡಲ್‍ವುಡ್‍ನ ಹಿರಿಯ ನಟ ಶಿವರಾಂ ಅವರ ಆರೋಗ್ಯ : ವೈದ್ಯ ಡಾ. ಮೋಹನ್ – VIshwanews24

ಕಿಡ್ನಿ, ಲಿವರ್ ವರ್ಕ್ ಆಗುತ್ತಿದೆ. ಆದರೆ ಹೃದಯ ಸ್ಪಂದಿಸುತ್ತಿಲ್ಲ..

ಬೆಂಗಳೂರು: ಸ್ಯಾಂಡಲ್‍ವುಡ್‍ನ ಹಿರಿಯ ನಟ ಶಿವರಾಂ ಅವರ ಆರೋಗ್ಯ ಮತ್ತಷ್ಟು ಗಂಭೀರವಾಗಿರುವ ಕುರಿತಾಗಿ ವೈದ್ಯರು ಮಾಹಿತಿ ನೀಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ವೈದ್ಯ ಡಾ. ಮೋಹನ್, ಅವರ ಆರೋಗ್ಯ ಚೇತರಿಕೆಗಾಗಿ ನಾವು ಕಾಯುತ್ತಿದ್ದೆವು. ಆ ಆದರೆ ಅವರ ಬ್ರೈನ್‍ಗೆ ಅತಿ ಹೆಚ್ಚಿನ ಹಾನಿಯಾಗಿದೆ. ನಾನು ಶಿವರಾಂ ಅವರ ಸಂಬಂಧಿ ಮತ್ತು ಡಾಕ್ಟರ್ ಆಗಿ ಇವತ್ತು ನಿಮ್ಮ ಮುಂದೆ ಬಂದು ನಿಲ್ಲಲು ನನಗೆ ತುಂಬಾ ಕಷ್ಟವಾಗುತ್ತಿದೆ. ಮಿರಾಕಲ್ ಆಗುತ್ತದೆ ಎನ್ನುವ ಭಾವನೆ ನಮಗೆ ಕಮ್ಮಿಯಾಗುತ್ತಿದೆ. ನಾವು ಏನೇ ಮಾಡಿದರೂ ಅವರಿಗೆ ಹಿಂಸೆ ಆಗುತ್ತದೆ. ಕಿಡ್ನಿ, ಲಿವರ್ ವರ್ಕ್ ಆಗುತ್ತಿದೆ. ಆದರೆ ಹೃದಯ ಸ್ಪಂದಿಸುತ್ತಿಲ್ಲ. ಅವರು ತುಂಬಾ ಸಮಯ ನಮ್ಮ ಜೊತೆಗೆ ಇರಲ್ಲ ಎಂದು ಹೇಳುತ್ತಾ ವೈದ್ಯರು ಭಾವುಕರಾಗಿದ್ದಾರೆ.

ನಮಗೆ ಜೀವನಾಡಿಯಾಗಿದ್ದರು. ಒಬ್ಬ ರೋಗಿಗಿಂತ ನನಗೆ ಅಪ್ಪನ ಸ್ಥಾನದಲ್ಲಿ ಇದ್ದರು. ಅವರನ್ನು ನಾನು ಈ ಪರಿಸ್ಥಿತಿಯನ್ನು ನಾನು ಚಿಕಿತ್ಸೆ ಕೊಡಲು ತುಂಬಾ ಕಷ್ಟವಾಗುತ್ತಿದೆ. ಚಿಕಿತ್ಸೆ ನೀಡುತ್ತಿದ್ದೇವೆ, ಆದರೆ ಅವರು ಚಿಕಿತ್ಸೆಗೆ ಸ್ಪಂಧಿಸುತ್ತಾರೆ ಎನ್ನುವ ನಂಬಿಕೆ ಇಲ್ಲ. ಅವರು ರಿಕವರಿ ಆಗುವ ಚಾನ್ಸ್ ತುಂಬಾ ಕಡಿಮೆ ಇದೆ. ಎಷು ದಿನ, ಎಷ್ಟು ಗಂಟೆ ಎಂದು ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ.

ಅವರ ಕುಟುಂಬದವರು ನಮ್ಮ ಜೊತೆಗೆ ಇದ್ದಾರೆ. ಅವರಿಗೆ ತುಂಬಾ ಹಿಂಸೆ ಮಾಡುವುದು ಬೇಡ. ನಿಮ್ಮ ಕೈಯಲ್ಲಿ ಸಾಧ್ಯವಾದಷ್ಟು ಪ್ರಯತ್ನವನ್ನು ಕೊನೆ ಗಳಿಗೆವರೆಗೂ ಮಾಡಿ ಎಂದು ಹೇಳುತ್ತಿದ್ದಾರೆ. ಎಂಐಆರ್ ಮಾಡಲು ಆಗುತ್ತಿಲ್ಲ ಅವರನ್ನು ಬೇರೆ ಬೆಡ್‍ಗೆ ಶಿಫ್ಟ್ ಮಾಡಿದರೆ ಅವರ ಬಿಪಿಗೆ ಕಷ್ಟವಾಗುತ್ತದೆ ಎನ್ನುವ ಭಯವಿದೆ, ಕಂಡಿಶನ್ ಕ್ರಿಟಿಕಲ್ ಇದೆ ಎಂದು ಹೇಳಿದ್ದಾರೆ.

 

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

6 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

8 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

8 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

8 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

8 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

9 hours ago